ಕೋಲಾರ

ನೈತಿಕ ಶಿಕ್ಷಣ ನೀಡುವಲ್ಲಿ ಶಿಕ್ಷಣ ಸಂಸ್ಥೆಗಳು ಶ್ರಮಿಸಲಿ'

Published On :

ಶಿಡ್ಲಘಟ್ಟ: ದೇಶದ ಸಂಸ್ಕೃತಿ ಮತ್ತು ಇತಿಹಾಸ ತಿಳಿಸುವ ನೈತಿಕ ಶಿಕ್ಷಣ ನೀಡುವಲ್ಲಿ ಶಿಕ್ಷಣ ಸಂಸ್ಥೆಗಳು ಶ್ರಮಿಸಬೇಕು ಎಂದು ಶಾಸಕ ಅರವಿಂದ ಲಿಂಬಾವಳಿ ಹೇಳಿದರು.
ತಾಲೂಕಿನ ಪಿಂಡಿಪಾಪನಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಬೃಂದಾ ಪಬ್ಲಿಕ್ ಶಾಲೆಯ ಹೆಚ್ಚುವರಿ ಕೊಠಡಿಗಳ ಉದ್ಘಾಟನೆ ನೆರವೇರಿಸಿ ಮಾತನಾಡಿ, ರಾಜ್ಯದಿಂದ ಉನ್ನತ ಶಿಕ್ಷಣ ಪಡೆದು ವಿದೇಶಗಳಿಗೆ ಹೋಗಿ ದೇಶ, ಭಾಷೆ, ಸಂಸ್ಕೃತಿಯ ಬಗ್ಗೆ ಮರೆಯಬಾರದೆಂದರು. ದೇಶದ ಸಂಸ್ಕೃತಿ, ಭಾಷೆ, ನೆಲ, ಜಲದ ಬಗ್ಗೆ ಮಕ್ಕಳಿಗೆ ಪಠ್ಯ ಅಥವಾ ಪಠ್ಯೇತರ ಚಟುವಟಿಕೆಗಳ ಮುಖಾಂತರ ಪ್ರಾಥಮಿಕ ಹಂತದಿಂದಲೇ ಕಲಿಸಬೇಕಾಗುತ್ತದೆ. ಸಂಬಂಧಗಳನ್ನು ಬೆಸೆಯುವ ಶಿಕ್ಷಣ ನೀಡಬೇಕು ಎಂದರು. ನಗರ ಪ್ರದೇಶಗಳಲ್ಲಿ ನೀಡುತ್ತಿರುವ ಶಿಕ್ಷಣಗಳಿಗೂ ಗ್ರಾಮೀಣ ಭಾಗಗಳಲ್ಲಿ ನೀಡುತ್ತಿರುವ ಶಿಕ್ಷಣದ ಮಾದರಿಗೂ ಬಹಳಷ್ಟು ವ್ಯತ್ಯಾಸಗಳಿವೆ, ಶಿಕ್ಷಕರು ಮಕ್ಕಳ ಪ್ರತಿಭೆ ಗುರ್ತಿಸಿ ಮುಖ್ಯವಾಹಿನಿಗೆ ತರುವ ಪ್ರಯತ್ನ ಮಾಡಬೇಕೆಂದರು. ಕೇಂದ್ರ ಸರ್ಕಾರ ದೇಶದ ಪ್ರತಿ ಮಗುವಿಗೂ ಗುಣಮಟ್ಟದ ಶಿಕ್ಷಣ ನೀಡಲು ಆರ್ಟಿಇ ಕಾಯ್ದೆ ಜಾರಿಗೆ ತಂದಿರುವುದಕ್ಕೆ ಅಭಿನಂದಿಸಿದರು.
ಜಿಪಂ ಸದಸ್ಯ ಎಸ್.ಎಂ. ನಾರಾಯಣಸ್ವಾಮಿ ಮಾತನಾಡಿ, ಗ್ರಾಮೀಣ ಸರ್ಕಾರಿ ಶಾಲೆಗಳಿಗೆ ಸೆಡ್ಡು ಹೊಡೆಯುವ ರೀತಿಯಲ್ಲಿ ಶಿಕ್ಷಣ ನೀಡುತ್ತಿರುವ ಖಾಸಗಿ ಶಾಲೆಗಳಿಂದ ಉತ್ತಮ ಶಿಕ್ಷಣ ಮೌಲ್ಯಗಳನ್ನು ಗ್ರಾಮೀಣ ಜನತೆ ಬಯಸಿದ್ದಾರೆ, ಶಿಕ್ಷಣ ಸಂಸ್ಥೆಗಳು ಗುಣಮಟ್ಟದ ಶಿಕ್ಷಣ ನೀಡುವತ್ತ ಗಮನಹರಿಸಬೇಕು ಎಂದರು.
ಶಾಲೆಯ ಅಧ್ಯಕ್ಷ ನಾಗರಾಜ್, ಖಜಾಂಚಿ ಗೊರಮಡಗು ಕೃಷ್ಣಪ್ಪ, ಅರ್. ಶ್ರೀನಿವಾಸ್, ಮುನಿಕೃಷ್ಣಪ್ಪ, ಕ್ಯಾತಪ್ಪ, ಶೀಗೆಹಳ್ಳಿ ಬಸವರಾಜ್, ದೇವಿರಪ್ಪ, ಬೈರಪ್ಪ, ಮುನೇಗೌಡ, ಪಿಳ್ಳಾಂಜಿನಪ್ಪ ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.