ರಸ್ತೆ ಒತ್ತುವರಿ ತೆರವಿಗೆ ಆಗ್ರಹ
ಚಿಂತಾಮಣಿ: ರಸ್ತೆ ಒತ್ತುವರಿ ತೆರವುಗೊಳಿಸಿ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕೆಂದು ಶಾಂತಿನಗರ ನಿವಾಸಿಗಳು ಅಗ್ರಹಿಸಿದ್ದಾರೆ.
ನಗರದ 27 ನೇ ವಾರ್ಡ್ಗೆ ಸೇರಿದ ಶಾಂತಿನಗರದಲ್ಲಿ ಸರ್ವೇ ನಂ.316 ರಲ್ಲಿ ಖಾಸಗಿ ವ್ಯಕ್ತಿಯೊಬ್ಬರು 1983-84 ರಲ್ಲಿ ಭೂ ಪರಿವರ್ತನೆ ಮಾಡಿಸಿ ಲೇಔಟ್ ನಿರ್ಮಿಸಿದ್ದಾರೆ. ಲೇಔಟ್ ನಕಾಶೆಯಂತೆ 5ನೇ ರಸ್ತೆ 20 ಅಡಿಗಳ ವಿಸ್ತೀರ್ಣ ಹೊಂದಿದೆ. ಆದರೆ ಕೆಲವರು ರಸ್ತೆಯ ಪಶ್ಚಿಮ ದಿಕ್ಕಿನಲ್ಲಿ ಸುಮಾರು 6-7 ಅಡಿಗಳಷ್ಟು ರಸ್ತೆಯ ಜಾಗವನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ಕಟ್ಟಡ ನಿರ್ಮಿಸಿದ್ದಾರಲ್ಲದೆ ರಸ್ತೆಗೆ ಅಡ್ಡಲಾಗಿ ಕಲ್ಲು-ಚಪ್ಪಡಿ ನಿಲ್ಲಿಸಿದ್ದಾರೆ. ಇದರಿಂದಾಗಿ ರಸ್ತೆ ಕಿರಿದಾಗಿದ್ದು ಓಡಾಡಲು ತೊಂದರೆಯಾಗುತ್ತಿದೆ ಎಂದು ದೂರಿದ್ದಾರೆ.
ಇತ್ತೀಚೆಗೆ ಈ ರಸ್ತೆಯಲ್ಲಿ ಚರಂಡಿ ಮತ್ತು ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಅಕ್ರಮ ಕಟ್ಟಡಗಳಿರುವ ಸ್ಥಳದಲ್ಲಿ ಕಾಮಗಾರಿಗೆ ಅಡ್ಡಿಯುಂಟಾಗುತ್ತಿದೆ. ಈ ಬಗ್ಗೆ ನಗರ ಸಭೆಗೆ ಹಲವಾರು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ನಿವಾಸಿಗಳು ದೂರಿದ್ದಾರೆ.
16ಕ್ಕೆ ನಿರ್ದೇಶಕರ ಚುನಾವಣೆ
ಗುಡಿಬಂಡೆ: ಪಟ್ಟಣದಲ್ಲಿನ ಹಾಲು ಉತ್ಪಾದಕರ ಸಹಕಾರ ಸಂಘದ 2014-15 ರಿಂದ 2017-18ನೇ ಸಾಲಿನ ವರೆಗಿನ ನಿರ್ದೇಶಕ ಮಂಡಳಿ ಚುನಾವಣೆ ಫೆ.16 ರಂದು ನಡೆಯಲಿದೆ ಎಂದು ಚುನಾವಣಾಧಿಕಾರಿ ಹೆಚ್. ಓಬಳೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸದರಿ ಸಂಘದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಫೆ.8 ಕೊನೆ ದಿನವಾಗಿದ್ದು, ನಾಮಪತ್ರಗಳ ಪರಿಶೀಲನೆ ಫೆ.9 ರಂದು ನಡೆಯಲಿದ್ದು, ಫೆ.10 ರೊಳಗೆ ನಾಮಪತ್ರವನ್ನು ವಾಪಸು ಪಡೆಯಬಹುದೆಂದು ಅವರು ತಿಳಿಸಿದ್ದಾರೆ.
16ಕ್ಕೆ ಆಡಳಿತ ಮಂಡಳಿಗೆ ಚುನಾವಣೆ
ಶಿಡ್ಲಘಟ್ಟ: ಹಾಲು ಉತ್ಪಾಧಕರ ಸಹಕಾರ ಸಂಘಗಳ ಆಡಳಿತ ಮಂಡಳಿಗೆ ಫೆ.16ರಂದು ಮತದಾನ ನಡೆಯಲಿದ್ದು ಚುನಾವಣೆ ಪ್ರಕ್ರಿಯೆ ಆರಂಭವಾಗಿವೆ. ತಾಲೂಕಿನ 112 ಹಾಲು ಉತ್ಪಾಧಕರ ಸಹಕಾರ ಸಂಘಗಳ ಆಡಳಿತ ಮಂಡಳಿಗಳ ಅಧಿಕಾರದ ಅವಧಿ ಮುಗಿದಿದ್ದು ಫೆ.1ರಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಶುರುವಾಗಿದೆ. ಫೆ.8 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ನಾಮಪತ್ರಗಳ ಪರಿಶೀಲನೆ ಫೆ.9 ರಂದು ನಡೆಯಲಿದೆ. ನಾಮಪತ್ರ ಪರಿಶೀಲನೆ ನಂತರ ನಾಮನಿರ್ದೇಶನಗೊಂಡ ಅಭ್ಯರ್ಥಿಗಳ ಪಟ್ಟಿಯನ್ನು ಡೈರಿಯಲ್ಲಿ ಪ್ರಕಟಿಸಲಾಗುವುದು. ಫೆ.10ರಂದು ನಾಮಪತ್ರಗಳನ್ನು ವಾಪಸ್ ಪಡೆಯಲು ಅವಕಾಶವಿದ್ದು ಫೆ.16ರಂದು ಬೆಳಗ್ಗೆ 9ರಿಂದ ಮದ್ಯಾಹ್ನ 4 ಗಂಟೆಯತನಕ ಸಂಘದ ಕಚೇರಿಗಳಲ್ಲಿ ಮತದಾನ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

