ಹಣ ಸುಲಿಗೆ: ಮುಂದುವರಿದ ಕಾರ್ಯಾಚರಣೆ
ಚಿಕ್ಕಬಳ್ಳಾಪುರ: ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ಎಂದು ಅಮಾಯಕರನ್ನು ನಂಬಿಸಿ ಉದ್ಯೋಗ ನೀಡುವ ನೆಪದಲ್ಲಿ ಲಕ್ಷಾಂತರ ರು. ಹಣ ವಸೂಲಿ ಮಾಡಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬರನ್ನು ಬಂಧಿಸಿದ್ದು ಇದರ ಹಿಂದೆ ದೊಡ್ಡ ಜಾಲವಿರುವ ಶಂಕೆಯ ಹಿನ್ನೆಲೆಯಲ್ಲಿ ತೀವ್ರ ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾ ಎಸ್ಪಿ ದಿವ್ಯಾ ಗೋಪಿನಾಥ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿಜಾಪುರ ಮೂಲದ ವಿ.ಎಸ್.ಶಿವಾನಂದ್ನಿಂದ ನಕಲಿ ದಾಖಲೆಗಳು, 5 ರಬ್ಬರ್ ಸ್ಟಾಂಪ್ಗಳು, ನಕಲಿ ನೇಮಕಾತಿ ಆದೇಶ ಪತ್ರಗಳು ಮತ್ತು ಸಿಎಂ ಆಪ್ತ ಕಾರ್ಯದರ್ಶಿಯ ವಿಸಿಟಿಂಗ್ ಕಾರ್ಡು, 2 ಚೆಕ್ಗಳು, 4 ಲಕ್ಷ ರು. ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.
ಅಮಾಯಕರಿಗೆ ಸರ್ಕಾರಿ ಉದ್ಯೋಗ ಕೊಡಿಸುತ್ತೇವೆ ಎಂಬ ಈ ಪ್ರಕರಣದ ಹಿಂದೆ ಇನ್ನೂ ಹಲವರು ಭಾಗಿಯಾಗಿರುವುದು ತಿಳಿದು ಬಂದಿದ್ದು ಆರೋಪಿಗಳ ಪತ್ತೆಗಾಗಿ ಜಾಲ ಬೀಸಲಾಗಿದೆ. ಬಿಜಾಪುರದಲ್ಲಿ ಕೆಲ ಅಮಾಯಕ ಯುವಕ ಯುವತಿಯರಿಗೆ ಸರ್ಕಾರಿ ಹುದ್ದೆಗಳನ್ನು ಕೊಡಿಸುವುದಾಗಿ ಆರೋಪಿ ಭರವಸೆ ನೀಡಿದ್ದ. ಅದರಂತೆ ಉದ್ಯೋಗಾಕಾಂಕ್ಷಿಗಳಿಂದ ಹಣ ವಸೂಲಿ ಮಾಡಿದ್ದ. ನೇಮಕಾತಿ ಆದೇಶ ಪತ್ರ ಕೊಡಿಸುವುದಾಗಿ ಕಾಲ ದೂಡಿಕೊಂಡು ಬಂದಿದ್ದು ಕೊನೆಗೆ ಹಣ ಕೊಟ್ಟವರು ಪೀಡಿಸಿದ ಹಿನ್ನೆಲೆಯಲ್ಲಿ ನಕಲಿ ನೇಮಕಾತಿ ಪತ್ರಗಳನ್ನು ಕೊಟ್ಟು ಕೈ ತೊಳೆದುಕೊಳ್ಳಲು ಯತ್ನಿಸಿದ್ದ. ಈ ಪತ್ರಗಳನ್ನು ತೆಗೆದುಕೊಂಡು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳ ಕಚೇರಿಗೆ ಮೋಸ ಹೋದವರು ಬಂದಾಗ ವಂಚನೆ ಬಯಲಾಗಿದೆ. ದೂರು ದಾಖಲಿಸಿಕೊಂಡು ತನಿಖೆ ನಡೆಸಿದಾಗ ಆರೋಪಿ ಶಿವಾನಂದ್ ಸಿಕ್ಕಿ ಬಿದ್ದಿದ್ದಾನೆ. ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

