ಅಂಬೇಡ್ಕರ್ ಪ್ರತಿಮೆಗೆ ಅಪಮಾನ
ಕೋಲಾರ: ತಾಲೂಕಿನ ವೇಮಗಲ್ ಹೋಬಳಿಗೆ ಸೇರಿದ ದೊಡ್ಡವಲ್ಲಭಿ ಗ್ರಾಮದಲ್ಲಿ ಕಿಡಿಗೇಡಿಗಳು ಫೆ.2ರ ರಾತ್ರಿ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಸೆಗಣಿ ಎರಚಿ ಅವಮಾನಗೊಳಿಸಿರುತ್ತಾರೆ.ಈ ಸಂಬಂಧ ವೇಮಗಲ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದ್ದು ಆರೋಪಿಗಳಿಗಾಗಿ ಶೋಧನೆ ನಡೆಯುತ್ತಿದೆ.
ಪತಿಯ ಸಾವು: ಪತ್ನಿ ಆತ್ಮಹತ್ಯೆ
ಚಿಕ್ಕಬಳ್ಳಾಪುರ: ಪತಿಯ ಸಾವಿನಿಂದ ಕಂಗೆಟ್ಟು ಹಿರಿಯ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ರ್ಘಟನೆ ತಾಲೂಕಿನ ಕುಡುತಿ ಗ್ರಾಮದಲ್ಲಿ ನಡೆದಿದೆ. ಸಾವಿನಲ್ಲಿ ಒಂದಾದ ಮೃತ ದಂಪತಿಗಳನ್ನು ಕುಡುತಿ ಗ್ರಾಮದ ಬೆಟ್ಟ ವೆಂಕಟರಾಯಪ್ಪ (67) ಮತ್ತು ಆತನ ಪತ್ನಿ ಗೌರಮ್ಮ (55) ಎಂದು ಗುರುತಿಸಲಾಗಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ವೆಂಕಟರಾಯಪ್ಪ ಭಾನುವಾರ ರಾತ್ರಿ ಮೃತಪಟ್ಟಿದ್ದರು. ಇದರಿಂದ ಕಂಗೆಟ್ಟ ಗೌರಮ್ಮ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿನಲ್ಲಿ ಒಂದಾದ ದಂಪತಿಗಳಿಂದ ಗ್ರಾಮದಲ್ಲಿ ಸೂತಕದ ವಾತಾವರಣ ನಿರ್ಮಾಣವಾಗಿದೆ.
ಸರ ಅಪಹರಣ
ಕೋಲಾರ: ನಗರ ಪೊಲೀಸ್ ಠಾಣೆ ಸರಹದ್ದಿಗೆ ಸೇರಿದ ಸಿ. ಬೈರೇಗೌಡ ಬಡಾವಣೆಯ ನಿವಾಸಿ ಉಮಾದೇವಿ ಎಂಬುವರು ತಮ್ಮ ಮನೆ ಸಮೀಪದ ಅಂಗಡಿಗೆ ಹೋಗುತ್ತಿದ್ದಾಗ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರೂ ಅಪರಿಚಿತರು ಉಮಾದೇವಿರವರ ಕತ್ತಿನಲ್ಲಿದ್ದ ಸುಮಾರು 35ರಿಂದ 40ಗ್ರಾಂ ತೂಕದ ಚಿನ್ನದ ಸರವನ್ನು ಕಸಿದುಕೊಂಡು ಹೋಗಿದ್ದಾರೆ.
ಮನೆಯಲ್ಲಿ ಕಳವು
ಕೋಲಾರ: ನಗರದ ಗಲ್ಪೇಟೆ ಪೊಲೀಸ್ ಠಾಣೆ ವ್ಯಾಪ್ತಿ ಶಾಂತಿನಗರದ ವಾಸಿ ಇಂತಿಯಾಜ್ ಪಾಷ ಅವರ ಮನೆಯ ಬೀಗ ಮುರಿದು ಕಳ್ಳರು 1 ಲಕ್ಷ ರು. ಮೌಲ್ಯದ ಒಡವೆ ಹಾಗೂ 9 ಸಾವಿರ ನಗದು ದೋಚಿ ಪರಾರಿಯಾಗಿದ್ದಾರೆ. ಫೆ.2 ರಂದು ತಮ್ಮ ಮನೆಗೆ ಬೀಗ ಹಾಕಿಕೊಂಡು ಊರಿಗೆ ಹೋಗಿದ್ದಾಗ ಈ ಘಟನೆ ನಡೆದಿದೆ.
ಜಾಗೃತಿ ಶಿಬಿರ
ಚಿಕ್ಕಬಳ್ಳಾಪುರ: ನಗರದ ಅಂಬೇಡ್ಕರ್ ಭವನದಲ್ಲಿ ಫೆ.5 ರಂದು ಬೆಳಿಗ್ಗೆ 11 ಗಂಟೆಗೆ ಅಂತರ್ಜಲ ಜನಜಾಗೃತಿ ಶಿಬಿರ ಹಮ್ಮಿಕೊಳ್ಳಲಾಗಿದೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಜಿಪಂ ಆಶ್ರಯದಲ್ಲಿ ನಡೆಯುತ್ತಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಕೆ. ಸುಧಾಕರ್ ವಹಿಸಲಿದ್ದು, ಉದ್ಘಾಟನೆಯನ್ನು ಜಿಪಂ ಅಧ್ಯಕ್ಷ ಎಸ್.ಎನ್. ಚಿನ್ನಪ್ಪ ನೆರವೇರಿಸಲಿದ್ದಾರೆ. ಜಿಲ್ಲಾಧಿಕಾರಿ ಆರ್. ವಿಶಾಲ್ ಅಂತರ್ಜಲ ಸಂಪತ್ತು ಕಿರು ಹೊತ್ತಿಗೆ ಬಿಡುಗಡೆ ಮಾಡಲಿದ್ದಾರೆ. ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನೀಲಾ ಮಂಜುನಾಥ್, ಉಪಾಧ್ಯಕ್ಷ ರಾಘವೇಂದ್ರ ಹನುಮಾನ್, ಅಂತರ್ಜಲ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹೆಚ್ಚುವರಿ ನಿರ್ದೇಶಕಿ ಸಣ್ಣ ಬೋರಮ್ಮ, ಜಂಟಿ ನಿರ್ದೇಶಕಿ ಲಕ್ಷ್ಮಮ್ಮ, ಮುಖ್ಯ ಭೂ ಭೌತ ವಿಜ್ಞಾನಿ ಪತ್ತಿ ಬಸವರಾಜ್, ತಾಪಂ ಅಧ್ಯಕ್ಷ ಕೆ. ಕೃಷ್ಣಮೂರ್ತಿ, ಉಪಾಧ್ಯಕ್ಷೆ ಲಕ್ಷ್ಮಮ್ಮ, ತಹಸೀಲ್ದಾರ್ ನಟೇಶ್, ಹಿರಿಯ ಭೂವಿಜ್ಞಾನಿ ಕೆ.ಎಂ.ನಂಜುಂಡಸ್ವಾಮಿ ಭಾಗವಹಿಸಲಿದ್ದಾರೆ.
ನಿರ್ದೇಶಕರ ಆಯ್ಕ್ಕೆ
ಚಿಂತಾಮಣಿ: ಸಿ.ದೊಡ್ಡಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘ ಚುನಾವಣೆಯಲ್ಲಿ 11 ಜನ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾ ಅಧಿಕಾರಿ ಎಸ್. ಫಕೃಸಾಬಿ ತಿಳಿಸಿದ್ದಾರೆ. ತಾಲೂಕಿನ ಚಿನ್ನಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿ. ದೊಡ್ಡಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘ ಇಂದು ನಡೆದ ಆಡಳಿತ ಮಂಡಳಿ ಚುನಾವಣೆಯಲ್ಲಿ ಸಾಮಾನ್ಯ, ಅನುಸೂಚಿತ ಜಾತಿ, ಪರಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಮಹಿಳೆಯರಿಗೆ ಮೀಸಲಿರಿಸಿದ ಸ್ಥಾನಗಳ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಗೆ ಅವಿರೋದವಾಗಿ ಡಿ.ಆರ್. ಗಂಗಿರೆಡ್ಡಿ, ಡಿ.ಜಿ. ಮಂಜುನಾಥ, ನಾಗರಾಜ್, ಡಿ.ಎನ್. ವೆಂಕಟೇಶಪ್ಪ, ಪ್ರಭಾಕರ್, ಡಿ.ಎಸ್. ನಾರಾಯಣಸ್ವಾಮಿ, ಡಿ.ವಿ. ಗೋಪಾಲಕೃಷ್ಣ, ಡಿ.ವಿ. ಶ್ರೀನಿವಾಸಪ್ಪ, ನರಸಿಂಹಪ್ಪ, ಲಕ್ಷ್ಮಮ್ಮ, ಸುನಂದಮ್ಮ, ನಿರ್ದೇಶಕರಾಗಿ ಆಯ್ಕೆಗೊಂಡಿದ್ದಾರೆಂದು ಚುನಾವಣಾ ಅಧಿಕಾರಿ ಎಸ್. ಫಕೃಸಾಬಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

