ನಾಯಿ ದಾಳಿಗೆ ಐದು ಕುರಿಗಳು ಸಾವು
ಕೋಲಾರ: ತಾಲೂಕಿನ ಕುರುಗಲ್ ಗ್ರಾಮದಲ್ಲಿ ನಾಯಿಗಳ ದಾಳಿಗೆ ಧನದಕೊಟ್ಟಿಗೆಯಲ್ಲಿ ಕಟ್ಟಿಹಾಕಿದ್ದ 15 ಕುರಿಗಳ ಪೈಕಿ ಐದು ಸತ್ತಿದ್ದು ಉಳಿದ 10 ಕುರಿಗಳು ಗಾಯಗೊಂಡಿವೆ.
ಕೋಲಾರದ ಗಾಂಧಿನಗರದ ನಿವಾಸಿ ಬನಹಳ್ಳಿ ವೆಂಕಟೇಶಪ್ಪ ಎಂಬುವರ ತೋಟದಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಪಶುಸಂಗೋಪನಾ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಗಾಯಗೊಂಡಿದ್ದ ಕುರಿಗಳಿಗೆ ಚಿಕಿತ್ಸೆ ನೀಡಿದರು.
ಕುರುಗಲ್ ಗ್ರಾಮದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು ಕ್ರಮ ಕೈಗೊಳ್ಳುವಂತೆ ಕೆಲವು ದಿನಗಳ ಹಿಂದೆಯೇ ಅಧಿಕಾರಿಗಳಿಗೆ ಮನವಿ ನೀಡಿ ಒತ್ತಾಯಿಸಲಾಗಿತ್ತು. ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದರೆ ಕುರಿಗಳು ಸಾಯುವುದನ್ನು ತಪ್ಪಿಸಬಹುದಾಗಿತ್ತೆಂದು ಗಾಂಧಿನಗರ ನಿವಾಸಿ ರಮಣ, ವಿಜಯಕೃಷ್ಣ ತಿಳಿಸಿದ್ದಾರೆ.
ಇತ್ತೀಚೆಗೆ ಕೆಲ ಬೀದಿ ನಾಯಿಗಳನ್ನು ಹಿಡಿದು ಅರಣ್ಯಕ್ಕೆ ಬಿಟ್ಟಿದ್ದಾರೆ. ನಾಯಿಗಳು ಅಲ್ಲಿಂದ ತಪ್ಪಿಸಿಕೊಂಡು ಬಂದು ಗ್ರಾಮಗಳಲ್ಲಿ ಹಾವಳಿ ನಡೆಸುತ್ತಿವೆ. ಅಧಿಕಾರಿಗಳು ಈಗಲಾದಲೂ ಎಚ್ಚೆತ್ತುಕೊಂಡು ನಾಯಿಗಳ ನಿಯಂತ್ರಣ ಮಾಡಬೇಕೆಂದು ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

