ಕೋಲಾರ

ಶಾಶ್ವತ ನೀರಾವರಿ: ಸಮಾವೇಶ

Published On :

ಚಿಂತಾಮಣಿ: ಬಯಲುಸೀಮೆ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಹಾಗೂ ಜಿಲ್ಲೆಗಳನ್ನು ಸಮಗ್ರ ಅಭಿವೃದ್ಧಿಪಡಿಸಲು ಗಾಂಧೀಜಿ ಅವರ ಗ್ರಾಮ ಸ್ವರಾಜ್ಯ ಅಭಿವೃದ್ಧಿಯ ಕನಸು ನನಸು ಮಾಡಲು ಮತ್ತು ರೈತರ ಸಮಸ್ಯೆಗಳನ್ನು ಬಗೆಹರಿಸಲು ಆಗ್ರಹಿಸಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಅಧ್ಯಕ್ಷ ಜಿ.ವಿ. ರಘುನಾಥರೆಡ್ಡಿ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಬೆಳಗ್ಗೆ 10 ಗಂಟೆಗೆ ಚಿಂತಾಮಣಿ ನಗರದ ತಾಲೂಕು ಕಚೇರಿ ಮುಂಭಾಗ ಶಾಶ್ವತ ನೀರಾವರಿಗಾಗಿ ಬೃಹತ್ ಸಮಾವೇಶ ನಡೆಯಲಿದ್ದು,  ಕರ್ನಾಟಕ ರೈತ ಸಂಘದ ರಾಜ್ಯಾಧ್ಯಕ್ಷ ಚಾಮರಸ, ಮಾಲೀ ಪಾಟೀಲ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಜಿಲ್ಲಾಧ್ಯಕ್ಷ ಲಕ್ಷ್ಮಿನಾರಾಯಣರೆಡ್ಡಿ ಅಧ್ಯಕ್ಷತೆ ವಹಿಸಿದ್ದು, ಶಾಸಕ ಕೆ.ಎಸ್. ಪುಟ್ಟಣ್ಣಯ್ಯ ಮುಖ್ಯ ಭಾಷಣಕಾರರಾಗಿದ್ದು, ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ಕೆ.ಟಿ. ಗಂಗಾಧರ್ ಮತ್ತಿತರರು ಭಾಗವಹಿಸುವರು.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.