ಇಂದು ಇತಿಹಾಸ ಪ್ರಸಿದ್ಧ ಚಿತ್ರಾವತಿ ಜಾತ್ರೆ
ಚಿಕ್ಕಬಳ್ಳಾಪುರ: ನಗರದ ಹೊರ ವಲಯದಲ್ಲಿರುವ ಐತಿಹಾಸಿಕ ಚಿತ್ರಾವತಿಯಲ್ಲಿ ಫೆ.5 ರಂದು ಅದ್ಧೂರಿಯಾಗಿ ಶ್ರೀ ಸುಬ್ರಮಣ್ಯೇಶ್ವರ ಸ್ವಾಮಿ (ಚಿತ್ರಾವತಿ ಜಾತ್ರೆ) ನಡೆಯಲಿದೆ.
ಘಾಟಿಯಲ್ಲಿ ಜಾತ್ರೆ ನಡೆದ ಒಂದು ತಿಂಗಳ ನಂತರ ಚಿತ್ರಾವತಿ ಜಾತ್ರೆ ಪ್ರತಿ ವರ್ಷ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನೆರವೇರಲಿದ್ದು ಕಾರ್ಯಕ್ರಮದ ಯಶಸ್ವಿಗಾಗಿ ಈಗಾಗಲೇ ತಾಲೂಕು ಆಡಳಿತ ಮತ್ತು ಮುಜರಾಯಿ ಇಲಾಖೆ ಸಿದ್ಧತೆಗಳನ್ನು ಕೈಗೊಂಡಿದೆ.
ಫೆ.5 ರಂದು ಜಾತ್ರೆ ಪ್ರಯುಕ್ತ ಚಿತ್ರಾವತಿಯಲ್ಲಿರುವ ಸುಬ್ರಮಣ್ಯೇಶ್ವರ ಸ್ವಾಮಿಗೆ ವಿಶೇಷ ಅಭಿಷೇಕ, ಪೂಜಾ ಕಾರ್ಯಕ್ರಮಗಳನ್ನು ಕೈಗೊಂಡಿದ್ದು ಮಧ್ಯಾಹ್ನ ಶುಭ ಮುಹೂರ್ತದಲ್ಲಿ ರಥೋತ್ಸವಕ್ಕೆ ಚಾಲನೆ ನೀಡಲಾಗುತ್ತದೆ. ಚಿತ್ರಾವತಿ ಜಾತ್ರೆ ಹೆಚ್ಚಿಗೆ ಖ್ಯಾತಿ ಹೊಂದಿದ್ದು ಚಿಕ್ಕಬಳ್ಳಾಪುರ ಜಿಲ್ಲೆ ಮಾತ್ರವಲ್ಲದೇ ಕೋಲಾರ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆ, ತುಮಕೂರು ಮತ್ತು ಆಂಧ್ರದಿಂದಲೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದು ಈ ಬಾರಿ ಹೆಚ್ಚಿಗೆ ಜನರು ಆಗಮಿಸುವ ನಿರೀಕ್ಷೆ ಹೊಂದಲಾಗಿದೆ. ಚಿತ್ರಾವತಿ ಜಾತ್ರೆ ಪ್ರಯುಕ್ತ ಕಳೆದ ಎರಡ್ಮೂರು ದಿನಗಳ ಹಿಂದೆ ಚಿತ್ರಾವತಿಯಲ್ಲಿ ಅಂಗಡಿ ಮುಂಗಟ್ಟುಗಳು ತಲೆ ಎತ್ತು ನಿಂತಿವೆ.ದೇವಾಲಯದ ಆವರಣದ ಸುತ್ತಮುತ್ತಲ ಪ್ರದೇಶದಲ್ಲಿ ಸ್ವಚ್ಛತಾಕಾರ್ಯವನ್ನು ಕೈಗೊಂಡಿದ್ದು ಸುಣ್ಣ ಬಣ್ಣಗಳಿಂದ ದೇವಾಲಯ ಕಂಗೊಳಿಸುತ್ತಿದೆ.
ಈ ಬಾರಿ ಸಂತೆ ಇಲ್ಲ: ಚಿತ್ರಾವತಿ ಜಾತ್ರೆ ನಡೆಯುವ 10 ದಿನಗಳ ಮುಂಚೆಯೇ ಇಲ್ಲಿ ಬೃಹತ್ ಮಟ್ಟದಲ್ಲಿ ದನಗಳ ಸಂತೆ ಈ ಬಾರಿ ಕಾಲುಬಾಯಿ ಜ್ವರದಿಂದ ನಡೆಯಲೇ ಇಲ್ಲ. ಈ ಬಾರಿ ಜಿಲ್ಲಾಡಳಿತ ದನಗಳ ಸಂತೆ ನಡೆಸಲು ಅವಕಾಶ ನೀಡಲಿಲ್ಲ. ಇದೀಗ ರಾಜ್ಯಾದ್ಯಂತ ಕಾಲುಬಾಯಿ ಜ್ವರ ಹರಡಿ ರಾಸುಗಳ ಮಾರಣ ಹೋಮವೇ ನಡೆಯುತ್ತಿದ್ದು ಇದನ್ನು ನಿಯಂತ್ರಣಕ್ಕೆ ತರಲು ಇನ್ನೂ ಸಮರ್ಪಕವಾಗಿ ಸಾಧ್ಯವಾಗಿಲ್ಲ. ಸಂತೆಗೆ ಬೇರೆ ಕಡೆಯಿಂದ ಬರುವ ರಾಸುಗಳಿಗೆ ಕಾಲುಬಾಯಿ ಜ್ವರ ಹರಡಿದರೆ ತುಂಬಾ ನಷ್ಟವಾಗುತ್ತದೆ ಎಂಬ ಮುಂಜಾಗ್ರತೆಯಿಂದ ಜಿಲ್ಲಾಡಳಿತ ಈ ಬಾರಿ ದನಗಳ ಸಂತೆ ನಡೆಸುವುದಿಲ್ಲ ಎಂದು ಆದೇಶ ಹೊರಡಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

