ಯೋಜನೆಗಳು ಸದ್ಬಳಕೆಯಾಗಲಿ
ಕೋಲಾರ: ಮಕ್ಕಳು ಸರ್ಕಾರ ಜಾರಿಗೆ ತಂದಿರುವ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಜಿಪಂ ಉಪಾಧ್ಯಕ್ಷೆ ಅಲುವೇಲಮ್ಮ ಸಲಹೆ ನೀಡಿದರು.
ನಗರದ ಟಿ. ಚನ್ನಯ್ಯ ರಂಗಮಂದಿರದಲ್ಲಿ ಮಂಗಳವಾರ ಕರ್ನಾಟಕ ಬಾಲ ವಿಕಾಸ ಆಕಾಡೆಮಿ, ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ಹಬ್ಬ -2014 ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಾಲಾ ಮಕ್ಕಳು ಓದಿನಲ್ಲಿಯೂ ಅಳವಡಿಸಿಕೊಳ್ಳಬೇಕು, ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹ ನೀಡುವುದು ಪ್ರತಿಯೊಬ್ಬರ ಕರ್ತವ್ಯವೆಂದರು.
ಮಕ್ಕಳು ಸೂಕ್ತ ಮಾರ್ಗದರ್ಶನದ ಮೂಲಕ ವಿವಿಧ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಎಂದು ಜಿಪಂ ಸದಸ್ಯೆ ಚೌಡೇಶ್ವರಿ ತಿಳಿಸಿದರು. ಜಿಪಂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ನಾಗರಾಜ್ ಮಾತನಾಡಿ, ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಹೊರತೆಗೆಯುವ ಪ್ರಯತ್ನ ಶ್ಲಾಘನೀಯವಾಗಿದ್ದು, ಮಕ್ಕಳು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಂಡಾಗ ದೇಶದ ಸರ್ವತೋಮುಖ ಅಭಿವೃದ್ಧಿ ಸಾಧ್ಯವೆಂದು ಅಭಿಪ್ರಾಯಪಟ್ಟರು.
ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಶಕುಂತಲ, ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ವಿವಿಧ ಯೋಜನೆಗಳನ್ನು ಹಮ್ಮಿಕೊಂಡಿದ್ದು ಇದರ ಭಾಗವಾಗಿಯೇ ಪ್ರತಿ ಜಿಲ್ಲಾ ಕೇಂದ್ರದಲ್ಲಿಯೂ ಮಕ್ಕಳ ಹಬ್ಬ ನಡೆಯುತ್ತಿದೆಯೆಂದು ವಿವರಿಸಿದರು.
ಇದೇ ಸಂದರ್ಭದಲ್ಲಿ ರಾಜ್ಯ ಮಟ್ಟದ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಮೊದಲ ಬಹುಮಾನ ಪಡೆದ ರೋಹಿತ್ ಪೋಷಕರನ್ನು, ನಾಲ್ಕನೇ ಸ್ಥಾನ ಪಡೆದ ಅನಘಾರನ್ನು ಮತ್ತು ಮಹಿಳೆಯರ ಸಂರಕ್ಷಣೆ ವಿಚಾರದ ಪ್ರಬಂಧ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದ ಮೊದಲ ಬಹುಮಾನ ಪಡೆದ ವಿದ್ಯಶ್ರೀರನ್ನು ಸನ್ಮಾನಿಸಲಾಯಿತು. ಜಿಪಂ ಉಪಕಾರ್ಯದರ್ಶಿ ಬದನೂರು, ಅಶೋಕ್ ಇದ್ದರು.
ಗೈರು ಹಾಜರಿ: ಮಕ್ಕಳ ಹಬ್ಬ ಕಾರ್ಯಕ್ರಮಕ್ಕೆ ಆಹ್ವಾನಿಸಲ್ಪಟ್ಟಿದ್ದ ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್, ಅಧ್ಯಕ್ಷತೆ ವಹಿಸಿದ್ದ ಶಾಸಕ ಆರ್. ವರ್ತೂರು ಪ್ರಕಾಶ್ ಸೇರಿದಂತೆ ಎಲ್ಲಾ ಪ್ರಮುಖ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಗೈರು ಹಾಜರಾಗುವ ಮೂಲಕ ನಿರ್ಲಕ್ಷಿಸಿದ್ದು ಟೀಕೆಗೆ ಗುರಿಯಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

