ಅಂಬೇಡ್ಕರ್ ಪ್ರತಿಮೆ ಸ್ವಚ್ಛಗೊಳಿಸಿ ಪೂಜೆ
ಕೋಲಾರ: ತಾಲೂಕಿನ ನರಸಾಪುರ ಹೋಬಳಿಗೆ ಸೇರಿದ ಚೌಡದೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ದೊಡ್ಡವಲ್ಲಭಿ ಗ್ರಾಮದಲ್ಲಿ ಕಿಡಿಗೇಡಿಗಳಿಂದ ಅಪವಿತ್ರಗೊಂಡಿದ್ದ ಡಾ.ಬಿ.ಆರ್.ಅಂಬೇಡ್ಕರ್ ಚಿತ್ರವನ್ನು ಗ್ರಾಮಸ್ಥರು ಹಾಗೂ ಪೊಲೀಸರು ಜೊತೆಗೂಡಿ ಸ್ವಚ್ಛಗೊಳಿಸಿ ಪೂಜೆ ಸಲ್ಲಿಸುವ ಮೂಲಕ ಶಾಂತಿ ಕಾಪಾಡಿದ್ದಾರೆ.
ಅಂಬೇಡ್ಕರ್ ಚಿತ್ರಕ್ಕೆ ಕಿಡಿಗೇಡಿಗಳು ಸಗಣಿ ಚಲ್ಲಿಸಿ ಗ್ರಾಮದಲ್ಲಿ ಅಶಾಂತಿಗೆ ಕಾರಣರಾಗಿದ್ದರು. ವಿಷಯ ತಿಳಿದ ಪೊಲೀಸರು ಗ್ರಾಮದಲ್ಲಿ ಶಾಂತಿ ಸಭೆ ನಡೆಸಿ ಗ್ರಾಮದಲ್ಲಿ ಎಲ್ಲಾ ಜಾತಿಯವರು ಒಗ್ಗಟ್ಟಿನಿಂದ ಇರಬೇಕು. ಅಂಬೇಡ್ಕರ್ ನಮಗೆ ಸಂವಿಧಾನ ನೀಡಿದವರಾಗಿದ್ದು ಮಹಾನ್ ವ್ಯಕ್ತಿಯನ್ನು ಯಾರೂ ಅಗೌರವದಿಂದ ಕಾಣಬಾರದು, ನಡೆದ ಘಟನೆಯನ್ನು ಮರೆತು ಗ್ರಾಮದಲ್ಲಿ ಇನ್ನು ಮುಂದೆ ಇಂತಹ ಕಹಿ ಘಟನೆಗಳು ನಡೆಯದಂತೆ ಒಗ್ಗೂಡಿ ಕೆಲಸ ಮಾಡಬೇಕೆಂದು ತಿಳಿಸಿದರು.
ತಹಸೀಲ್ದಾರ್ ನಾಗರಾಜ್ ಅವರು ಸಹ ಸಭೆಯಲ್ಲಿ ಭಾಗವಹಿಸಿ ಘಟನೆ ಖಂಡಿಸಿದರಲ್ಲದೆ, ಜಗತ್ತು ಬದಲಾಗುತ್ತಿರುವಾಗ ಈ ರೀತಿಯ ಘಟನೆಗಳು ನಡೆಯುವುದರಿಂದ ಮುಂದಿನ ಪೀಳಿಗೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂದರು.
ಗ್ರಾಮಾಂತರ ವೃತ್ತ ನಿರೀಕ್ಷಕ ಎ.ಬಿ.ಸುಧಾಕರ್ ಹಾಗೂ ವೇಮಗಲ್ ಪೊಲೀಸ್ ಠಾಣೆ ಪಿಎಸ್ಐ ಯಶ್ವಂತ್ ಸಭೆಯಲ್ಲಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

