ಶಾಶ್ವತ ನೀರಾವರಿಗಾಗಿ ವಿದ್ಯಾರ್ಥಿಗಳು ಹೋರಾಡಿ
ಕನ್ನಡಪ್ರಭ ವಾರ್ತೆ, ಕೋಲಾರ, ಫೆ.5
ಜಗತ್ತಿನ ಬಹುತೇಕ ಎಲ್ಲಾ ಹೋರಾಟಗಳಲ್ಲಿ ವಿದ್ಯಾರ್ಥಿಗಳ ಪಾತ್ರ ಬಹು ಮುಖ್ಯವಾಗಿದ್ದು, ಕೋಲಾರ ಜಿಲ್ಲೆಯ ನೀರಿನ ಸಮಸ್ಯೆ ನಿವಾರಣೆಗಾಗಿಯೂ ವಿದ್ಯಾರ್ಥಿಗಳು ಸಂಘಟಿತ ಹೋರಾಟ ನಡೆಸಿದಲ್ಲಿ ಯಶಸ್ಸು ನಿಶ್ಚಿತ ಎಂದು ಕೋಲಾರ ವಕೀಲರ ಸಂಘದ ಅಧ್ಯಕ್ಷ ಎಸ್.ಸತೀಶ್ ತಿಳಿಸಿದರು.
ಎಸ್ಎಫ್ಐ 13ನೇ ರಾಜ್ಯ ಸಮ್ಮೇಳನದ ಅಂಗವಾಗಿ ನಗರದ ಸರ್ಕಾರಿ ಬಾಲಕರ ಕಾಲೇಜಿನಲ್ಲಿ ಬುಧವಾರ ಹಮ್ಮಿಕೊಂಡಿದ್ದ ಶಾಶ್ವತ ನೀರಾವರಿಯಲ್ಲಿ ವಿದ್ಯಾರ್ಥಿಗಳ ಪಾತ್ರ ಕುರಿತ ವಿಚಾರ ಸಂಕಿರಣವನ್ನು ಅವರು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಮನಸ್ಸು ಮಾಡಿದರೆ ಶಾಶ್ವತ ನೀರಾವರಿ ಯೋಜನೆ ಅನುಷ್ಠಾನಕ್ಕಾಗಿ ಸರ್ಕಾರದ ಮೇಲೆ ಒತ್ತಡ ತರಲು ಸಾಧ್ಯವೆಂದರು.
ಕೋಲಾರ ಜಿಲ್ಲೆಯಲ್ಲಿ ಯಾವುದೇ ನದಿ ನಾಲೆಗಳು ಇಲ್ಲದೇ ಇರುವುದರಿಂದ ನಮ್ಮ ಪೂರ್ವಿಕರು ಸಾವಿರಾರು ಕೆರೆಗಳನ್ನು ನಿರ್ಮಿಸಿ ಮಳೆ ನೀರನ್ನು ಸಂಗ್ರಹಿಸಿ ವರ್ಷಕ್ಕೆ ಎರಡು ಬೆಳೆಗಳನ್ನು ಬೆಳೆಯುತ್ತಿದ್ದರು. ಈಗ ಕೆರೆಗಳು ಮಾಯವಾಗಿದ್ದು, ಅಂತರ್ಜಲ ಪಾತಾಳಕ್ಕೆ ಇಳಿದಿದ್ದು, ಜಿಲ್ಲೆಯಲ್ಲಿ ಲಭ್ಯವಿರುವ ಬೋರ್ವೆಲ್ ನೀರಿನಲ್ಲಿ ವಿಷಯುಕ್ತ ಲವಣಗಳಿಂದ ಜನ ಹಲವಾರು ಖಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಜಿಲ್ಲೆಗೆ ಶಾಶ್ವತ ನೀರಾವರಿ ಯೋಜನೆಗಳನ್ನು ಅನುಷ್ಠಾನ ಮಾಡಿದರೆ ಮಾತ್ರ ಜಿಲ್ಲೆಯು ಉಳಿಯಲು ಸಾಧ್ಯ. ಈ ನಿಟ್ಟಿನಲ್ಲಿ ಹೋರಾಟಗಳು ಅನಿವಾರ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.
ಜನವಾದಿ ಮಹಿಳಾ ಸಂಘಟನೆಯ ರಾಜ್ಯಾಧ್ಯಕ್ಷೆ ವಿ. ಗೀತಾ ಮಾತನಾಡಿ, 13ವರ್ಷಗಳ ಹಿಂದೆ ಎಸ್ಎಫ್ಐ ವಿಚಾರ ಸಂಕಿರಣ ಮತ್ತು ಜಾಥಾ ಮೂಲಕ ಶಾಶ್ವತ ನೀರಾವರಿ ಸಮಸ್ಯೆಯನ್ನು ಜನರಲ್ಲಿ ಜಾಗೃತಿ ಮೂಡಿಸಿತು. ಚುನಾವಣೆಗೆ ಮುನ್ನ ಶಾಶ್ವತ ನೀರಾವರಿ ಪ್ರಶ್ನೆಯನ್ನು ಗಂಟೆಗಟ್ಟಲೇ ಮಾತನಾಡಿದ ಜನಪ್ರತಿನಿಧಿಗಳು ಈಗ ತಟಸ್ಥರಾಗಿದ್ದಾರೆಂದು ಆರೋಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

