ಕೋಲಾರ

ಸಮ್ಮೇಳನಾಧ್ಯಕ್ಷರಿಗೆ ವೀಳ್ಯ ನೀಡಿ ಆಹ್ವಾನ

Published On :

ಚಿಕ್ಕಬಳ್ಳಾಪುರ: ನಗರದಲ್ಲಿ ಫೆ.22 ರಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ನಿಂದ ನಡೆಯಲಿರುವ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಸಾಹಿತಿ ಟಿ.ಎಸ್.ನಾಗೇಂದ್ರಬಾಬುರವರಿಗೆ ವೀಳ್ಯನೀಡಿ ಸಮ್ಮೇಳನಕ್ಕೆ ಆಹ್ವಾನಿಸಲಾಯಿತು.
ತಾಲೂಕು ಅಧ್ಯಕ್ಷ ಕೆ.ಪಿ. ನವಮೋಹನ್ ನೇತೃತ್ವದಲ್ಲಿ ಸಾಹಿತಿ ನಾಗೇಂದ್ರಬಾಬುರವರ ಮನೆಗೆ ತೆರಳಿದ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಸಮ್ಮೇಳನದ ಅಧ್ಯಕ್ಷತೆ ವಹಿಸಿ ಸಮ್ಮೇಳನ ಯಶಸ್ವಿಯಾಗಿ ನಡೆಸಿಕೊಡುವಂತೆ ಮನವಿ ಮಾಡಿದರು.
ಈ ಸಂಧರ್ಭದಲ್ಲಿ ಮಾತನಾಡಿದ ಶಿಕ್ಷಕ ಗ.ನ. ಅಶ್ವತ್, ಸಾಹಿತ್ಯ ಸಮ್ಮೇಳನದಲ್ಲಿ ಸಾಹಿತ್ಯಾತ್ಮಕವಾದ ಗೋಷ್ಠಿಗಳು ಇರಬೇಕು, ಸಮ್ಮೇಳನಾಧ್ಯಕ್ಷರಾಗಿರುವ ನಾಗೇಂದ್ರಬಾಬು ಅವರು ಸಾಹಿತ್ಯ ರಂಗಭೂಮಿ ಮತ್ತು ಕನ್ನಡ ಪರ ಕಾರ್ಯಕ್ರಮಗಳಲ್ಲಿ ಕ್ರಿಯಾಶೀಲರಾಗಿದ್ದಾರೆ. ಇಂತಹವರು ಸರ್ವಾನುಮತದಿಂದ ಸಮ್ಮೇಳನದ ಅಧ್ಯಕ್ಷರ ಆಯ್ಕೆಯಾಗಿರುವುದು ಸಂತಸ ತಂದಿದೆ ಎಂದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಎಸ್.ಎನ್. ಅಮೃತ್ ಕುಮಾರ್ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತ ನೂರನೇ ವರ್ಷಾಚರಣೆ ಮಡಿಕೊಳ್ಳುತ್ತಿರುವ ಸಂದರ್ಭದಲ್ಲಿ ತಾಲೂಕಿನಲ್ಲಿ ಈ ವರ್ಷ ನಡೆಯುತ್ತಿರುವ ಸಾಹಿತ್ಯ ಸಮ್ಮೇಳನಕ್ಕೆ ಹೆಚ್ಚಿನ ಅರ್ಥ ಮತ್ತು ಮಹತ್ವ ಇದೆ ಎಂದರು. ತಾಲೂಕು ಅಧ್ಯಕ್ಷ ಕೆ.ಪಿ. ನವಮೋಹನ್ ಮಾತನಾಡಿ, ಗಡಿ ಭಾಗದಲ್ಲಿ ಸಾಹಿತ್ಯಾತ್ಮಕ ಚಟುವಟಿಕೆಗಳು ನಿತ್ಯ ನಿರಂತರ ಮೊಳಗುವಂತಾಗಬೇಕು. ತಮ್ಮ ಜೀನವದುದ್ದಕ್ಕೂ ಸಾಹಿತಿ ನಾಗೇಂದ್ರಬಾಬುರವರು ಭುವನೇಶ್ವರಿ ಕನ್ನಡ ಸಮಿತಿ, ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘವನ್ನೊಳಗೊಂಡಂತೆ ಅನೇಕ ಕನ್ನಡ ಪರ ಸಂಘಟನೆಗಳಲ್ಲಿ ಕಾರ್ಯ ನಿರ್ವಹಿಸಿ ಕನ್ನಡ ಭಾಷೆಗಾಗಿ ಹೋರಾಡಿದ್ದಾರೆ ಎಂದರು. ವೀಳ್ಯ ಸ್ವೀಕರಿಸಿ ಮಾತನಾಡಿದ ಸಮ್ಮೇಳನಾಧ್ಯಕ್ಷ ಟಿ.ಎಸ್. ನಾಗೆಂದ್ರಬಾಬು, ಎನಗಿಂತ ಕಿರಿಯರಿಲ್ಲ, ಹಿರಿಯರೆಲ್ಲರ ಅನುಭವ ಪಡೆಯುವ ಮೂಲಕ ಅನುಭವ ಮತ್ತು ಸಹಕಾರ ಪಡೆಯುವ ಮೂಲಕ ಸಮ್ಮೇಳನಾಧ್ಯಕ್ಷನಾಗಿ ನನಗೆ ನೀಡಿರುವ ಜವಾಬ್ದಾರಿಯನ್ನು ನಾನು ಸಮರ್ಥವಾಗಿ ನಿರ್ವಹಿಸುತ್ತೇನೆ ಎಂದರು.
ತಿಪ್ಪೇನಹಳ್ಳಿ ಪಿ. ನಾರಾಯಣಸ್ವಾಮಿ ಮಾತನಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.