ಕೋಲಾರ

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

Published On :

ಚಿಂತಾಮಣಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಂಗನವಾಡಿ ಕೇಂದ್ರಗಳ ಖಾಸಗೀಕರಣ ಮಾಡುತ್ತಿರುವ ವಿರುದ್ಧ ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಎಂ. ಗೋಪಿನಾಥ್ ಕಿಡಿ ಕಾರಿದರು.
ನಗರದ ತಾಲೂಕು ಕಚೇರಿ ಮುಂಭಾಗದಲ್ಲಿ ಸಿಐಟಿಯು ತಾಲೂಕು ಶಾಖೆ ಮತ್ತು ಅಂಗನವಾಡಿ ನೌಕರರ ಸಂಘದ ಆಶ್ರಯದಲ್ಲಿ ಅಂಗನವಾಡಿ ಕಾರ್ಯಕರ್ತರು ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಎಂ. ಗೋಪಿನಾಥ್, ಅಂಗನವಾಡಿ ಕೇಂದ್ರದ ಮುಖ್ಯ ಉದ್ದೇಶ ಅಪೌಷ್ಠಿಕತೆ ಹೋಗಲಾಡಿಸುವುದು ಆದರೆ ಇಂತಹ ಯೋಜನೆಯನ್ನು ಸರ್ಕಾರ ಕಾಯಂ ಯೋಜನೆ ಮಾಡಿ ಬಲಿಷ್ಠಗೊಳಿಸುವುದರ ಬದಲಾಗಿ ಸ್ವಯಂ ಸೇವಾ ಸಂಸ್ಥೆಗಳಿಗೆ ನೀಡಿರುವುದರಿಂದ ಅದು ಈಡೇರುವುದಿಲ್ಲ ಎಂದು ಹೇಳಿದರು. ಅಂಗನವಾಡಿ ನೌಕರರ ಸಂಘದ ಕಾರ್ಯದರ್ಶಿ ಎಚ್.ಜಿ. ಲಕ್ಷ್ಮಿನರಸಮ್ಮ ಮಾತನಾಡಿ, ಅಂಗನವಾಡಿ ನೌಕರರಿಗೆ 8 ಗಂಟೆ ಕಾಲ ನಿಗದಿ ಪಡಿಸಿ ಪಿಂಚಣಿ ಗ್ಯಾರಂಟಿ ಮುಂತಾದ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿದರು.
ಇದಕ್ಕೂ ಮುನ್ನ ನಗರದ ಪ್ರವಾಸಿ ಮಂದಿರದಿಂದ ನೂರಾರು ಅಂಗನವಾಡಿ ಕಾರ್ಯಕರ್ತರು ನಗರದ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು. ನಂತರ ತಾಲೂಕು ದಂಡಾಧಿಕಾರಿ ಕೆ.ಟಿ. ಕೃಷ್ಣಸ್ವಾಮಿಯವರಿಗೆ ಮನವಿ ಸಲ್ಲಿಸಿದರು. ಸೌಭಾಗ್ಯಲಕ್ಷ್ಮಿ, ವಿಜಯಲಕ್ಷ್ಮಿ, ಕೃಷ್ಣಾರೆಡ್ಡಿ, ನರಸಿಂಹ, ಮುನಿವೆಂಕಟರೆಡ್ಡಿ, ಲಕ್ಷ್ಮಿನಾರಾಯಣರೆಡ್ಡಿ, ಸುಮತಿ, ಬಾಬುರೆಡ್ಡಿ, ರಾಮು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.