ಸಮರ್ಪಕ ವಿದ್ಯುತ್ ಪೂರೈಕೆಗಾಗಿ ಪ್ರತಿಭಟನೆ
ಕೋಲಾರ: ಗ್ರಾಮಾಂತರ ಪ್ರದೇಶದಲ್ಲಿ ಸಮರ್ಪಕ ವಿದ್ಯುತ್ ವಿತರಣೆಗೆ ಒತ್ತಾಯಿಸಿ ಕರವೇ ವತಿಯಿಂದ ತಾಲೂಕಿನ ವೇಮಗಲ್ನಲ್ಲಿ ಪ್ರತಿಭಟನೆ ನಡೆಸಲಾಯಿತು.
ಗ್ರಾಮದ ರಾಮಶೆಟ್ಟಿ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ರಸ್ತೆತಡೆ ನಡೆಸಿ, 10 ಗಂಟೆ 3 ಫೇಸ್ ಮತ್ತು 12 ಗಂಟೆಗಳ ಕಾಲ ಸಿಂಗಲ್ ಫೇಸ್ ವಿದ್ಯುತ್ ನೀಡಬೇಕೆಂದು ಬೆಸ್ಕಾಂ ಅಧಿಕಾರಿಗಳನ್ನು ಒತ್ತಾಯಿಸಿದರು. ವಿದ್ಯಾರ್ಥಿಗಳಿಗೆ ಪರೀಕ್ಷೆ ಸಮಯ ಹತ್ತಿರವಾಗುತ್ತಿದ್ದು, ವಿದ್ಯಾಭ್ಯಾಸಕ್ಕೆ ತೊಂದರೆಯಾಗಿದೆ, ಪಂಪ್ ಸೆಟ್ಗಳಿಗೆ ಹಾನಿ ಆಗುತ್ತಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು. ಕರವೇ ಜಿಲ್ಲಾಧ್ಯಕ್ಷ ಮೇಡಿಹಾಳ ಎಂ.ಕೆ. ರಾಘವೇಂದ್ರ, ಉಮೇಶ್, ಎಸ್.ಎಂ. ರಾಜ್, ಸಂಪತ್ ಕುಮಾರ್, ನಂದೀಶ್ ಗೌಡ, ಶೇಖರ್, ಲೋಕೇಶ್, ಡಿ.ಕೆ. ಪ್ರಭಾಕರ ಗೌಡ, ಶ್ರೀನಿವಾಸ, ನಟೇಶ್ ಬಾಬು, ಕೀಲುಕೋಟೆ ಶ್ರೀನಿವಾಸ್, ಪ್ರಸಾದ್, ಅನಂತಲಕ್ಷ್ಮೀ, ನಾಗವೇಣಿ, ಗೋಪಾಲ್, ನಟರಾಜ್, ಮುರಳಿ, ಅಭಿಲಾಷ್, ಮೆಹಬೂಬಬ್ ಇದ್ದರು.
ಮಕ್ಕಳಿಗೆ ಐರನ್ ಸಿರಪ್ ವಿತರಿಸಲು ಕ್ರಮ
ಚಿಕ್ಕಬಳ್ಳಾಪುರ: ಅಪೌಷ್ಠಿಕತೆಯನ್ನು ನೀಗಿಸಲು ಐರನ್ ಸಿರಪ್ಗಳನ್ನು ಎಲ್ಲ ಮಕ್ಕಳಿಗೆ ನೀಡಬೇಕೆಂದು ಜಿಲ್ಲಾಧಿಕಾರಿ ಡಾ.ಆರ್.ವಿಶಾಲ್ ತಿಳಿಸಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗುರುವಾರ ನಡೆದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಅಪೌಷ್ಠಿಕತೆ ಮಕ್ಕಳಿಗೆ ಐರನ್ ಸಿರಪ್ ನೀಡಿದರೆ ಅವರಿಗೆ ಬಹಳಷ್ಟು ಸಹಾಯವಾಗುತ್ತದೆ. ಇದಕ್ಕಾಗಿ ಶೀಘ್ರವೇ 25 ಲಕ್ಷ ರು. ವೆಚ್ಚದಲ್ಲಿ ಟೆಂಡರ್ ಮೂಲಕ ಸಿರಪ್ಗಳನ್ನು ಖರೀದಿಸಬೇಕೆಂದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಸುರೇಖಾ ಮಾತನಾಡಿ, ಇಲಾಖೆಯಿಂದ ಪ್ರತಿ ತಾಲ್ಲೂಕಿಗೆ ಹೋಗುವ ಸಂಚಾರಿ ವಾಹನದಲ್ಲಿ ಸ್ತ್ರೀ ಶಕ್ತಿ ಗುಂಪುಗಳಿಂದ ತಯಾರಿಸಿದ ದಿನಬಳಕೆಯ ಆಹಾರ ಪದಾರ್ಥ ಇತ್ಯಾದಿಗಳು ದಿನಕ್ಕೆ 6-7 ಸಾವಿರ ರು. ವ್ಯಾಪಾರ ಗಳಿಸುತ್ತಿವೆ ಎಂದರು. ಸಭೆಯಲ್ಲಿ ಸಾಂತ್ವನ ಕೇಂದ್ರ, ವರದಕ್ಷಿಣೆ ಪ್ರಕರಣಗಳು ವಿಷಯಗಳ ಕುರಿತು ಚರ್ಚಿಸಲಾಯಿತು.
ಉಸ್ತುವಾರಿ ಸಚಿವರ ಭೇಟಿ
ಚಿಕ್ಕಬಳ್ಳಾಪುರ: ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಫೆ.7 ರಂದು ಚಿಕ್ಕಬಳ್ಳಾಪುರಕ್ಕೆ ಭೇಟಿ ನೀಡಲಿದ್ದು ಬೆಳಗ್ಗೆ 10 ಗಂಟೆಗೆ ತಾಲೂಕಿನ ನಂದಿ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಆಯೋಜಿಸಿರುವ ಶಾಲಾ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಅಂಗನವಾಡಿಗಳ ಖಾಸಗೀಕರಣಕ್ಕೆ ವಿರೋಧ
ಕೋಲಾರ: ಕೇಂದ್ರ ಸರ್ಕಾರದ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯನ್ನು (ಐಸಿಡಿಎಸ್) ಖಾಸಗೀಕರಣ ವಿರೋಧಿಸಿ ಹಾಗೂ ಕನಿಷ್ಠ ವೇತನ 10 ಸಾವಿರ ರು. ನೀಡಲು ಒತ್ತಾಯಿಸಿ ಕೋಲಾರ ತಾಲೂಕು ಅಂಗನವಾಡಿ ನೌಕರರ ಸಂಘದಿಂದ ಗುವಾರ ನಗರದ ಶಿಶು ಅಭಿವೃದ್ಧಿ ಇಲಾಖೆಯ ಕಚೇರಿ ಮುಂದೆ ಪ್ರತಿಭಟನೆ ನಡೆಯಿತು.
ಪ್ರತಿಭಟನಾಕಾರರು ತಮ್ಮ 23 ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಜಯಮ್ಮ, ಕಾರ್ಯದರ್ಶಿ ಮುನಿರಾಜಮ್ಮ, ಖಜಾಂಚಿ ವಿ. ಮಂಜುಳ, ಅನುಸೂಯಮ್ಮ, ವಿಶಾಲಾಕ್ಷಿ, ಕುರ್ಕಿಶಾಂತಮ್ಮ ಇದ್ದರು.
ಪ್ರೇರಣಾ ಶಿಬಿರದ ಉದ್ಘಾಟನೆ
ಚಿಕ್ಕಬಳ್ಳಾಪುರ: ನಗರದ ಜಿಲ್ಲಾ ಕೈಗಾರಿಕಾ ಕೇಂದ್ರ ಕಚೇರಿಯ ಆವರಣದಲ್ಲಿ ಫೆ.10 ರಂದು ಬೆಳಗ್ಗೆ 10.30 ಕ್ಕೆ ಕೈಗಾರಿಕಾ ಪ್ರೇರಣಾ ಶಿಬಿರದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಲಾಗಿದೆ. ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಸರ್.ಎಂ.ವಿ. ಕೈಗಾರಿಕಾ ಸಂಘದ ಸಹಯೋಗದೊಂದಿಗೆ ಆಯೋಜಿಸಿರುವ ಸಮಾರಂಭದ ಉದ್ಘಾಟನೆಯನ್ನು ತಾಪಂ ಅಧ್ಯಕ್ಷ ಕೆ. ಕೃಷ್ಣಮೂರ್ತಿ ನೆರವೇರಿಸಲಿದ್ದು ಅಧ್ಯಕ್ಷತೆಯನ್ನು ಶಾಸಕ ಡಾ.ಕೆ. ಸುಧಾಕರ್ ವಹಿಸಲಿದ್ದಾರೆ. ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಬಿ.ಎಚ್. ಸಿದ್ದಪ್ಪ, ಆರ್.ಜೆ. ಶ್ರೀಧರ್, ಎಚ್.ಎಸ್. ಜೈಕುಮಾರ್, ಯೋಗೇಶ್, ಸಿ.ಆರ್. ಮಣಿ, ಟಿ. ಸುಬ್ರಮಣ್ಯಂ ಭಾಗವಹಿಸಲಿದ್ದಾರೆ.
ಮಾಸಿಕ ಕೆಡಿಪಿ ಸಭೆ
ಚಿಕ್ಕಬಳ್ಳಾಪುರ: ಜಿಲ್ಲಾಡಳಿತ ಭವನದಲ್ಲಿನ ಜಿಪಂ ಸಭಾಂಗಣದಲ್ಲಿ ಫೆ.11ರಂದು ಬೆಳಗ್ಗೆ 11 ಗಂಟೆಗೆ ಮಾಸಿಕ ಕೆಡಿಪಿ ಸಭೆಯನ್ನು ಆಯೋಜಿಸಲಾಗಿದೆ. ಅಧ್ಯಕ್ಷತೆಯನ್ನು ಜಿಪಂ ಅಧ್ಯಕ್ಷ ಎಸ್.ಎನ್. ಚಿನ್ನಪ್ಪ ವಹಿಸಲಿದ್ದಾರೆ ಎಂದು ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನೀಲಾ ಮಂಜುನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

