ಬಗರ್ಹುಕುಂ ಪತ್ರಕ್ಕೆ ಆಗ್ರಹಿಸಿ ಪ್ರತಿಭಟನೆ
ಕ.ಪ್ರ. ವಾರ್ತೆ , ಕೋಲಾರ , ಫೆ 7
ಬಡ ರೈತರಿಗೆ ಕೂಡಲೆ ಬಗರ್ಹುಕುಂ ಸಾಗುವಳಿ ಚೀಟಿಯನ್ನು ನೀಡಬೇಕು, ಕಾಲುಬಾಯಿ ಜ್ವರದಿಂದ ಸತ್ತಿರುವ ರಾಸುಗಳ ಮಾಲೀಕರಿಗೆಪರಿಹಾರ ಬಾಕಿ ವಿತರಣೆ ಮಾಡಬೇಕು ಹಾಗೂ ಬಯಲು ಸೀಮೆ ಜಿಲ್ಲೆಗಳಿಗೆ ಡಾ. ಪರಮಶಿವಯ್ಯ ವರದಿ ಆಧಾರಿತ ಶಾಶ್ವತ ನೀರಾವರಿ ಯೋಜನೆ ಜಾರಿಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತಸಂಘದಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು.
ಇಲ್ಲಿನ ತಾಲೂಕು ಕಚೇರಿಯ ಬಳಿ ಕಾರ್ಯಕರ್ತರು ಜಮಾಯಿಸಿ ರೈತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಘೋಷಣೆ ಕೂಗಿದರು.
ಸಮಿತಿಗಳ ರಚನೆ ಮಾಡಿಲ್ಲ: ಅನೇಕ ವರ್ಷಗಳಿಂದ ಬಗರ್ಹುಕುಂ ಸಾಗುವಳಿ ಮಾಡುತ್ತಿರುವ ರೈತರಿಗೆ ಸರ್ಕಾರ ಸಕ್ರಮಾತಿ ಪತ್ರ ನೀಡುತ್ತಿಲ್ಲ, ಭೂ ಮಂಜೂರಾತಿ ಸಮಿತಿಗಳ ರಚನೆ ಮಾಡಿಲ್ಲವೆಂದು ಕೆಪಿಆರ್ಎಸ್ ಜಿಲ್ಲಾ ಕಾರ್ಯದರ್ಶಿ ಟಿ.ಎಂ.ವೆಂಕಟೇಶ್ ಆರೋಪಿಸಿದರು.
ಕಾಲುಬಾಯಿ ಜ್ವರದಿಂದ ಜಿಲ್ಲೆಯಲ್ಲಿ ಸತ್ತಿರುವ ರಾಸುಗಳಿಗೆ ಪರಿಹಾರ ಬಾಕಿ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು, ಹೈನೋಧ್ಯಮಕ್ಕೆ ಕಾಲುಬಾಯಿ ಜ್ವವರದಿಂದಾಗಿ ಸಂಕಷ್ಟ ಎದುರಾಗಿರುವುದರಿಂದ ಕೂಡಲೇ ಸರ್ಕಾರ ರೈತರನ್ನು ಕಾಪಾಡಲು ವಿಶೇಷ ಪ್ಯಾಕೇಜ್ ಘೋಷಣೆ ಮಾಡುವಂತೆ ಆಗ್ರಹಿಸಿದರು.
ಎತ್ತಿನಹೊಳೆ ಯೋಜನೆಯಿಂದ ಬಯಲು ಸೀಮೆ ಜಿಲ್ಲೆಗಳಿಗೆ ಯಾವುದೇ ರೀತಿಯ ಪ್ರಯೋಜನವಿಲ್ಲ, ಸರ್ಕಾರ ರಾಜಕೀಯ ಇಚ್ಛಾಶಕ್ತಿಯೊಂದಿಗೆ ಡಾ.ಪರಮಶಿವಯ್ಯ ವರದಿಯನ್ನು ಜಾರಿಗೆ ತರಬೇಕೆಂದು ಹೇಳಿದರು.
ಪ್ರತಿಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕು ಅಧ್ಯಕ್ಷ ಕುರ್ಕಿ ದೇವರಾಜ್, ಉಪಾಧ್ಯಕ್ಷ ಕೃಷ್ಣೇಗೌಡ, ನಾರಾಯಣರೆಡ್ಡಿ, ಶ್ರೀರಾಮ್, ಎಸ್.ರಮೇಶ್, ಗಂಗಮ್ಮ, ರತ್ನಮ್ಮ, ಆಂಜನಮ್ಮ, ಮಂಜಮ್ಮ ಸೇರಿದಂತೆ ಮತ್ತಿತರರು ಪ್ರತಿಭಟನೆ ನೇತೃತ್ವ ವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

