ಕೋಲಾರ

'ಶೈಕ್ಷಣಿಕ ಪ್ರಗತಿಗೆ ಆರ್‌ಟಿಇ ಪೂರಕ'

Published On :

ಮಾಲೂರು: ಶಿಕ್ಷಣ ಹಕ್ಕು ಕಾಯಿದೆ ರಾಜ್ಯದ ಶೈಕ್ಷಣಿಕ ಅಭಿವೃದ್ಧಿಗೆ ವರವಾಗಿ ಬಂದಿದ್ದು, ಎಲ್ಲ ಶಾಲೆಗಳು ಈ ಯೋಜನೆಯನ್ನು ಪ್ರಾಮಾಣೀಕವಾಗಿ ಅನುಷ್ಠಾನವಾಗುವಂತೆ ನೋಡಿಕೊಳ್ಳಬೇಕಾಗಿದೆ ಎಂದು ತಾಪಂ ಅಧ್ಯಕ್ಷ ಪುಟ್ಟಸ್ವಾಮಿ ಹೇಳಿದರು.
ಪಟ್ಟಣದ ಜೆಎಸ್‌ಎಸ್ ವಿದ್ಯಾಸಂಸ್ಥೆಯಲ್ಲಿ ಶುಕ್ರವಾರ
ಶಿಕ್ಷಣ ಇಲಾಖೆ ಆಯೋಜಿಸಿದ ಅನುದಾನಿತ ಶಾಲೆಯ ಶಿಕ್ಷಕರ ಹಾಗೂ ಜನಪ್ರತಿನಿಧಿಗಳಿಗಾಗಿ ಶಿಕ್ಷಣ ಹಕ್ಕು ಕಾಯಿದೆ ಕಾರ್ಯಗಾರಕ್ಕೆ ಚಾಲನೆ ನೀಡಿ ಮಾತನಾಡಿದರು.
ಮಾತನಾಡುತ್ತ ತಡವಾದರೂ ಶಿಕ್ಷಣ ಹಕ್ಕು ಕಾಯಿದೆ ಬಂದಿರುವುದು ಶೈಕ್ಷಣಿಕ ಅಭಿವೃದ್ಧಿಗೆ ಸಹಕಾರಿಯಾಗಿದೆ
ಎಂದರು. ಸರ್ಕಾರವು ಸಹ ಶಿಕ್ಷಣಕ್ಕಾಗಿ ಹಲಾವರು ಯೋಜನೆಗಳನ್ನು ಹಮ್ಮಿಕೊಳ್ಳುತ್ತಿದ್ದು, ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಂತೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವುದು ಗ್ರಾವೀಣ ಭಾಗದ ಮಕ್ಕಳಿಗೆ ವರವಾಗಿದೆ ಎಂದರು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ಶಿಕ್ಷಕರ ಜವಾಬ್ದಾರಿಯಾಗಿದ್ದು, ಉತ್ತಮ ಸಮಾಜದ ನಿರ್ಮಾಣಕ್ಕಾಗಿ ಪ್ರತಿ ಶಾಲೆಗಳಿಂದ ಶಿಕ್ಷಕರು ಕಡೇ ಪಕ್ಷ 5 ಉತ್ತಮ ವಿದ್ಯಾರ್ಥಿಗಳನ್ನು ನೀಡುವ ಜವಾಬ್ದಾರಿ ಹೊರಯಬೇಕು ಎಂದರು.ಜಿಪಂ ಸದಸ್ಯ ರಾಮಸ್ವಾಮಿರೆಡ್ಡಿ ಮಾತನಾಡಿ, ಪ್ರತಿ ಮಕ್ಕಳಿಗೂ ಶಿಕ್ಷಣ ಸಿಗುವಂತೆ ಆಗಬೇಕಾಗಿದೆ. ರ್ದುಬಲ ವರ್ಗದ ಮಕ್ಕಳು ಶಿಕ್ಷಣದ ಅವಕಾಶದಿಂದ ವಂಚಿತರಾಗದಂತೆ ಶಿಕ್ಷಣ ಇಲಾಖೆ ನೋಡಿಕೊಳ್ಳಬೇಕಾಗಿದೆ ಎಂದರು. ಬಿಜೆಪಿ ಮುಖಂಡ ಆಂಜಿ, ಶಿಕ್ಷಣ ಇಲಾಖೆಯ ಮಹೇಶ್ ಮಾತನಾಡಿದರು.  
ಕ್ಷೇತ್ರಾ ಶಿಕ್ಷಣಾಧಿಕಾರಿ ಸುಬ್ರಮಣ್ಯ ಪ್ರಸ್ತಾವಿಕ ಮಾತನ್ನಾಡಿದರು. ಬ್ಲಾಕ್ ಯೋಜನಾ ಸಮನ್ವಯಾಧಿಕಾರಿ ಜಮೀರ್ ಪಾಷ, ತಾಪಂ ಸದಸ್ಯೆ ನಾಗವೇಣಿ ಚಂದ್ರು, ಶಿಕ್ಷಣ ಇಲಾಖೆ ಗಂಗಾಧರ್, ವಿಜಯಕುಮಾರ್, ಜೆಎಸ್‌ಎಸ್‌ಪಬ್ಲಿಕ್ ಶಾಲೆ ಪ್ರಾಂಶುಪಾಲೆ ಮುನೀರಾ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.