ಡಾ. ಪರಮಶಿವಯ್ಯ ವರದಿ ಜಾರಿಗೆ ಒತ್ತಾಯ
ಕೆಜಿಎಫ್: ಬಯಲು ಸೀಮೆಯಲ್ಲಿ ಸುಮಾರು 10 ವರ್ಷಗಳಿಂದ ಮಳೆಯಿಲ್ಲದೆ ಬರಗಾಲದಿಂದ ತತ್ತರಿಸಿರುವ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅಂತರ್ಜಲ ಮಟ್ಟ 1500 ಅಡಿಗಳಿಗೆ ಕುಸಿದಿದ್ದು ಅದರಲ್ಲಿ ಸಿಗುವ ಅಲ್ಪಸ್ವಲ್ಪ ನೀರು ಸಹ ಫ್ಲೋರೇಡ್ ಮಿಶ್ರಿತವಾಗಿದ್ದು ಜನರು ಹಾಗೂ ಜಾನುವಾರುಗಳು ವಿವಿಧ ಖಾಯಿಲೆಗಳಿಂದ ಬಳಲುತ್ತಿದ್ದು ರೈತರು ನೀರಿಲ್ಲದೆ ವ್ಯವಸಾಯ ಮಾಡಲು ಸಾಧ್ಯವಾಗದೆ ಹಳ್ಳಿಗಳನ್ನು ತೊರೆದು ಗುಳೆ ಹೋಗುವಂತಹ ಪರಿಸ್ಥಿತಿಯಲ್ಲಿ 2014ರ ಬಜೆಟ್ನಲ್ಲಿ ರೈತರು ಬೆಳೆಗಳನ್ನು ಬೆಳೆಯಲು ಹಾಗೂ ಸಾರ್ವಜನಿಕರಿಗೆ ಕುಡಿಯುವ ನೀರನ್ನು ಒದಗಿಸಲು ಶಾಶ್ವತ ನೀರಾವರಿಯಾದ ಡಾ.ಪರಮಶಿವಯ್ಯ ವರದಿಯನ್ನು ಅನುಷ್ಠಾ ನಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಹುಲ್ಕೂರು ಹರಿಕುಮಾರ್ ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ. ಇತ್ತೀಚೆಗೆ ರಾಜಧಾನಿಯ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ರಾಜ್ಯ ರೈತ ಮುಖಂಡರ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬರಪೀಡಿತದಿಂದ ಬೆಳೆಗಳನ್ನು ಕಳೆದುಕೊಂಡಿರು ರೈತರ ಕೃಷಿ ಸಾಲ ಮನ್ನಾ ಮಾಡಬೇಕು, ಕೃಷಿಗೆ ಹೆಚ್ಚಿನ ಅದ್ಯತೆ ನೀಡಬೇಕು. ಕೋಳಿ ಸಾಕಾಣಿಕೆಯಲ್ಲಿ ರಾತರು ಜಿಲ್ಲೆಯಲ್ಲಿ ಸಂಪೂರ್ಣ ವಿಫಲರಾಗಿದ್ದು ಅವರ ಬ್ಯಾಂಕ್ ಸಾಲವನ್ನು ಸರ್ಕಾರಿ ತೀರಿಸಬೇಕು ಎಂದು ಒತ್ತಾಯಿಸಿದರು.
ರೈತ ಸಂಘದ ಶಾಸಕರಾದ ಕೆ.ಎಸ್.ಪುಟ್ಟಣ್ಣಯ್ಯ, ರಾಜ್ಯಾಧ್ಯಕ್ಷ ಚಮರಸಮಾಲಿ ಪಟೀಲ್, ಬಡಗಲಪುರ ನಾಗೇಂದ್ರ, ಕೆ.ಟಿ.ಗಂಗಾಧರ್, ಚುಕ್ಕಿ ನಂಜುಂಡಸ್ವಾಮಿ, ಕೆ.ಶ್ರೀನಿವಾಸಗೌಡ ಸೇರಿದಂತೆ ಇತೆರ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

