'ನಾರಿ ಮುಖ್ಯವಾಹಿನಿಗೆ ಬರಲು ಆತ್ಮಸ್ಥೈರ್ಯ ಮುಖ್ಯ'
ಚಿಂತಾಮಣಿ: ಸಮಾಜದಲ್ಲಿ ಮಹಿಳೆಯರು ಮುಖ್ಯವಾಹಿನಿಗೆ ಬರಲು ಆತ್ಮಸ್ಥೈರ್ಯಮುಖ್ಯ ಎಂದು ಸರ್ಕಾರಿ ವಕೀಲೆ ಜ್ಯೋತಿಲಕ್ಷ್ಮಿ ಕಿವಿಮಾತು ಹೇಳಿದರು.
ಇಲ್ಲಿನ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಗ್ರ ಶಿಶು ಅಭಿವೃದ್ಧಿ ಸೇವಾ ಯೋಜನೆ ಮತ್ತು ತಾಲ್ಲೂಕು ಕಾನೂನು ಸೇವಾ ಸಮಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸೌಂದರ್ಯ ಗ್ರಾಮೀಣ ಅಭಿವೃದ್ಧಿ ಸೇವಾ ಸಮಿತಿ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಮಹಿಳೆಯರು ಸಮಾಜದಲ್ಲಿ ಸ್ವಾವಲಂಬಿಗಳಾಗಿ ಜೀವನ ನಡೆಸಲು ಆತ್ಮಸ್ಥೈರ್ಯ ಮತ್ತು ಗಾಂಧೀಜಿ ಆದರ್ಶ ಮತ್ತು ಸಿದ್ಧಾಂತ ಮೈಗೂಡಿಸಿಕೊಂಡು ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧಾರ್ಥಿಗಳಾಗಿ ಮುಂದಾಗಬೇಕೆಂದು ಜ್ಯೋತಿಲಕ್ಷ್ಮಿ ಹೇಳಿದರು. ನಂತರ ಸರ್ಕಾರಿ ಮಹಿಳಾ ಕಾಲೇಜು ಪ್ರಾಂಶುಪಾಲ ಕೃಷ್ಣಮೂರ್ತಿ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಮಹಿಳೆಯರ ಮೇಲೆ ನಡೆಯುವ ಕೌಟುಂಬಿಕ ದೌರ್ಜನ್ಯಗಳ ಪ್ರಕರಣಗಳಿಗೆ ಕಡಿವಾಣ ಹಾಕಲು ಕಾನೂನಲ್ಲಿ ಬಿಗಿಮಾಡಿ ಮಹಿಳೆಯರಿಗೆ ಸಂವಿಧಾನ ಬದ್ಧ ಹಕ್ಕುಗಳನ್ನು ತಲುಪಲು ಕಾನೂನು ಅರಿವು-ನೆರವು ಬಹಳ ಅಗತ್ಯ ಎಂದು ವಿವರಿಸಿದರು.
ಗ್ರಾಮೀಣ ಸೌಂದರ್ಯ ಅಭಿವೃದ್ಧಿ ಸೇವಾ ಸಮಿತಿ ಮತ್ತು ಮಹಿಳಾ ಸಾಂತ್ವನ ಕೇಂದ್ರದ ಅಧ್ಯಕ್ಷಣಿ ಡಾ.ವಿಜಯ ಮಾತನಾಡಿ, ಕಾನೂನು ಬಗ್ಗೆ ಮಹಿಳೆಯರು ಮಾಹಿತಿ ಪಡೆದು ಸಮಾಜದಲ್ಲಿ ಎಲ್ಲರಂತೆ ಧೈರ್ಯವಾಗಿ ಬದುಕಲು ಸಾಧ್ಯವೆಂದು ಹೇಳಿದರು. ಮಹಿಳೆಯರ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿ ಮಹಿಳಾ ಸಾಂತ್ವನ ಕೇಂದ್ರಗಳನ್ನು ತೆರೆದಿದ್ದು, ಮಹಿಳೆಯರು ಯಾವುದಕ್ಕೂ ಭಯ ಪಡದೆ ಮುಕ್ತವಾಗಿ ಸರ್ಕಾರದಿಂದ ದೊರೆಯುವ ಕಾನೂನು ನೆರುವನ್ನು ಪಡೆಯಲು ಸಭೆಯಲ್ಲಿ ತಿಳಿಸಿದರು.
ವಕೀಲರಾದ ರೂಪಶ್ರೀ, ಶಿಶು ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ವೆಂಕಟನಾರಾಯಣಮ್ಮ, ಉಪನ್ಯಾಸಕರಾದ ವೆಂಕಟೇಶ್ ಸಮಾಜದ ಮೇಲೆ ದುಷ್ಪರಿಣಾಮ ಬೀರುವ ವಿಷಯಗಳ ಬಗ್ಗೆ ವಿದ್ಯಾರ್ಥಿಗಳ ಸಮಕ್ಷಮದಲ್ಲಿ ಪ್ರಾಸ್ತಾವಿಕ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ನೂರಾರು ವಿದ್ಯಾರ್ಥಿನಿಯರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

