ಉತ್ತಮ ಜೀವನಕ್ಕೆ ಕ್ರೀಡೆ ಸಹಕಾರಿ: ವೈ. ಸಂಪಂಗಿ
ಕೆಜಿಎಫ್: ವಿದ್ಯಾರ್ಥಿಗಳು ಉತ್ತಮ ವಿದ್ಯಾರ್ಥಿ ಜೀವನ ರೂಪಿಸಿಕೊಳ್ಳಲು ಕ್ರೀಡೆ, ವ್ಯಾಯಾಮ ಹೆಚ್ಚು ಸಹಕಾರಿಯಾಗಲಿದೆ ಎಂದು ಮಾಜಿ ಶಾಸಕ ವೈ. ಸಂಪಂಗಿ ಹೇಳಿದರು.
ಬಿಜೆಪಿ ಯುವ ಮೋರ್ಚಾ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ ವಿಜೇತರಾದ ಕೆಜಿಎಫ್ನ ಕಮಲ್11 ತಂಡಕ್ಕೆ ಅಭಿನಂದನೆ ಸಲ್ಲಿಸಿ ಮಾತನಾಡಿ, ಯುವ ಸಮುದಾಯದ ಶಕ್ತಿ ಹಾಗೂ ವಿದ್ಯಾರ್ಥಿಗಳ ಪಾತ್ರ ದೇಶದ ಉತ್ತಮ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದರು.
ತಂಡದ ಮುಖ್ಯಸ್ಥ ವಿ. ಕಮಲ್, ಡಾ. ಮೋಹನ್ ಹಾಗೂ ಕ್ರಿಕೆಟ್ ಪಟು ಲೋಕೇಶ್ ತಂಡದ ಸದಸ್ಯರಿಗೆ ಅಭಿನಂದನೆ ಸಲ್ಲಿಸಿ ಕೆಜಿಎಫ್ ತಂಡ ರಾಷ್ಟ್ರ ಮಟ್ಟದಲ್ಲಿ ಸ್ಪರ್ಧಿಸಿ ಜಯಶೀಲರಾಗಲು ಶುಭ ಹಾರೈಸಿದರು. ಈ ವೇಳೆ ವಿಜೇತ ತಂಡವನ್ನು ಸನ್ಮಾನಿಸಲಾಯಿತು. ಜಿಲ್ಲಾ ಮಟ್ಟದ ಪಂದ್ಯಾವಳಿಯಲ್ಲಿ ಜಿಲ್ಲೆಯ ಮಾಲೂರು, ಮುಳಬಾಗಿಲು, ಕೋಲಾರ, ಶ್ರೀನಿವಾಸಪುರ, ಚಿಂತಾಮಣಿ ತಂಡಗಳು ಭಾಗವಹಿಸಿ ಅಂತಿಮ ಪಂದ್ಯದಲ್ಲಿ ಕೋಲಾರ ಹಾಗೂ ಕೆಜಿಎಫ್ ತಂಡದ ಮಧ್ಯೆ ನಡೆದ ಪಂದ್ಯದಲ್ಲಿ ಕೆಜಿಎಫ್ನ ಕಮಲ್ 11 ತಂಡ ಜಯಗಳಿಸಿದೆ.
ಟೆಂಪೋ ಪಲ್ಟಿ ಹಲವರಿಗೆ ಗಾಯ
ಚಿಂತಾಮಣಿ: ಸರಕು ಸಾಗಾಣಿಕೆ ಟೆಂಪೋಗೆ ಅಡ್ಡ ಬಂದ ಹಸುವನ್ನು ತಪ್ಪಿಸಲು ಹೋಗಿ ಟೆಂಪೋ ಪಲ್ಟಿ ಹೊಡೆದ ಪರಿಣಾಮ ಚಾಲಕ ಸೇರಿ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ನಡೆದಿದೆ. ತಾಲೂಕಿನ ಕಂಬಾಲಹಳ್ಳಿ ಗ್ರಾಮದ ಆಂಜನೇಯರೆಡ್ಡಿ ಎಂಬವರಿಗೆ ಸೇರಿದ ಟೆಂಪೋ ರಸ್ತೆ ಬದಿ ಇದ್ದ ಹಸು ಏಕಾಏಕಿ ರಸ್ತೆಗೆ ನುಗ್ಗಿದ ಪರಿಣಾಮ ತಪ್ಪಿಸಲು ಹೋಗಿ ಹಳ್ಳಕ್ಕೆ ಟೆಂಪೋ ಬಿದ್ದು ಘಟನೆ ಸಂಭವಿಸಿದೆ. ಬಟ್ಲಹಳ್ಳಿ ಠಾಣೆಯ ಸಬ್ಇನ್ಸ್ಪೆಕ್ಟರ್ ಪ್ರವೀಣ್ಕುಮಾರ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

