ಬ್ಯಾಂಕುಗಳ ಬಂದ್; ಗ್ರಾಹಕರ ಪರದಾಟ
ಕೋಲಾರ: ವೇತನ ಪರಿಷ್ಕರಣೆ ಸೇರಿದಂತೆ ಇನ್ನಿತರ ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಸಾರ್ವಜನಿಕ ರಂಗದ ಬ್ಯಾಂಕ್ ನೌಕರರು ದೇಶಾದ್ಯಂತ ಎರಡು ದಿನಗಳ ಮುಷ್ಕರ ನಡೆಸುತ್ತಿರುವುದರಿಂದ ಇದರ ಬಿಸಿ ಕೋಲಾರದ ಗ್ರಾಹಕರಿಗೂ ತಟ್ಟಿತು.
ಬ್ಯಾಂಕ್ ನೌಕರರ ವೇತನವನ್ನು ಶೇ.10ರಷ್ಟು ಹೆಚ್ಚಿಸುವಂತೆ ಬ್ಯಾಂಕ್ ಅಸೋಸಿಯೇಷನ್ ಮತ್ತು ನೌಕರರ ಒಕ್ಕೂಟ ಆಗ್ರಹಿಸಿತ್ತು. ಈ ಸಂಬಂಧ ಮುಖ್ಯ ಕಾರ್ಮಿಕ ಆಯುಕ್ತರ ಸಮ್ಮುಖದಲ್ಲಿ ನೌಕರರ ಮುಖಂಡರು ನಡೆಸಿದ ಮಾತುಕತೆ ವಿಫಲವಾದ ಹಿನ್ನಲೆಯಲ್ಲಿ ಫೆ.10 ಮತ್ತು 11ರಂದು ಎರಡು ದಿನ ಬ್ಯಾಂಕ್ ಬಂದ್ ಮಾಡಿ ಪ್ರತಿಭಟಿಸಲು ತೀರ್ಮಾನಿಸಲಾಗಿತ್ತು.
ಕೇಂದ್ರ ಸರ್ಕಾರ ನೌಕಕರ ಬೇಡಿಕೆ ಈಡೇರಿಸಲು ಯಾವುದೇ ಕ್ರಮ ಕೈಗೊಳ್ಳದ ಕಾರಣ ಸೋಮವಾರದಿಂದ ಮುಷ್ಕರ ಆರಂಭಿಸಲಾಗಿದೆ. ಕೋಲಾರದಲ್ಲಿನ ಎಲ್ಲ ಸಾರ್ವಜನಿಕ ಅಂದರೆ ರಾಷ್ಟ್ರೀಕೃತ ಬ್ಯಾಂಕುಗಳನ್ನು ಬಂದ್ ಮಾಡಲಾಗಿದೆ. ಗ್ರಾಹಕರು ತಮ್ಮ ಹಣಕಾಸು ವ್ಯವಹಾರಗಳನ್ನು ನಡೆಸಲು ಇದರಿಂದ ತೊಂದರೆಯಾಗಿ ಪರದಾಡುವಂತಾಗಿದೆ.
ಎಟಿಎಂಗಳಲ್ಲೂ ಹಣ ಸಿಗದೆ ಗ್ರಾಹಕರು ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ನಗರದಲ್ಲಿನ ಐಸಿಐಸಿಐ ಬ್ಯಾಂಕ,್ ಆಕ್ಸಿಸ್ ಬ್ಯಾಂಕ್ಗಳು ಎಂದಿನಂತೆ ಕಾರ್ಯನಿರ್ವಹಿಸಿತು. ಮಂಗಳವಾರವೂ ಬಂದ್ ಮುಂದುವರೆಯುವ ಸಾಧ್ಯತೆ ಇರುವುದರಿಂದ ಗ್ರಾಹಕರು ಮತ್ತಷ್ಟು ಸಂಕಷ್ಟಕ್ಕೆ ಒಳಗಾಗುವಂತಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

