ಕೇಂದ್ರ ಸಚಿವರ ತಂತ್ರಗಾರಿಕೆ ಈ ಬಾರಿ ನಡೆಯದು
ಶಿಡ್ಲಘಟ್ಟ: ರಾಜಕೀಯವಾಗಿ ಜೀವದಾನ ನೀಡಿದ ಶಿಡ್ಲಘಟ್ಟ ಕ್ಷೇತ್ರವನ್ನು ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪ ಕಡೆಗಣಿಸಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಶಂಕರನಾರಾಯಣರೆಡ್ಡಿ ಆರೋಪಿಸಿದ್ದಾರೆ.
ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಆರು ಬಾರಿ ಕೋಲಾರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಪಡೆದಿರುವ ಅವರು ಕ್ಷೇತ್ರದ ನಿರುದ್ಯೋಗ ಸಮಸ್ಯೆ, ಕುಡಿಯುವ ನೀರಿನ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಅವರ ಯಾವುದೇ ತಂತ್ರಗಾರಿಕೆಗಳು ಫಲಪ್ರದವಾಗುವುದಿಲ್ಲ ಎಂದರು.
ತಾಲೂಕಿನಲ್ಲಿ ಬಿಜೆಪಿ ತಳಮಟ್ಟದ ಕಾರ್ಯಕರ್ತರಿಂದ ಸಂಘಟನೆ ಮಾಡುತ್ತಿದ್ದು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಕಾರ್ಯತಂತ್ರ ರೂಪಿಸಲಾಗುವುದು. ಪ್ರತಿ ಚುನಾವಣೆಯಲ್ಲೂ ತಂತ್ರಗಾರಿಕೆ ಮುಖಾಂತರ ಜನರ ಮತ ಗಳಿಸುತ್ತಿದ್ದ ಕೆ.ಎಚ್. ಮುನಿಯಪ್ಪ ಈ ಭಾರಿಯ ಚುನಾವಣೆಯಲ್ಲಿ ಸೋಲನುಭವಿಸಲಿದ್ದಾರೆ ಎಂದರು. ಬಿಜೆಪಿ ತಾಲೂಕು ಅಧ್ಯಕ್ಷ ಸುರೇಂದ್ರಗೌಡ, ಕಾರ್ಯದರ್ಶಿ ಎಸ್. ರಾಘವೇಂದ್ರ, ಎ.ಎಂ. ತ್ಯಾಗರಾಜ್, ಟಿ. ರತ್ನಮ್ಮ, ಅಶ್ವಥ್, ಚಲಪತಿ, ಮೇಲೂರು ಅನಿಲ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

