ಕೋಲಾರ

ಐಪಿಸಿ 377 ಕಾಯಿದೆ ರದ್ದು ಮಾಡಲು ಆಗ್ರಹ

Published On :

ಕೋಲಾರ: ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳನ್ನು ಕಸಿದುಕೊಳ್ಳಲು ಜಾರಿಗೆ ತರಲು ಉದ್ದೇಶಿಸಿರುವ ಐಪಿಸಿ 377 ಕಾಯಿದೆಯನ್ನು ರದ್ದುಪಡಿಸಬೇಕೆಂದು ಒತ್ತಾಯಿಸಿ ನಗರದಲ್ಲಿ ಮಂಗಳವಾರ ಲೈಂಗಿಕ ಅಲ್ಪಸಂಖ್ಯಾತರು ಪ್ರತಿಭಟನೆ ನಡೆಸಿದರು.
ನಗರದ ಅಂರತಗಂಗೆ ರಸ್ತೆಯಲ್ಲಿನ ಕುವೆಂಪು ಪಾರ್ಕಿನಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆಯಲ್ಲಿ ಆಗಮಿಸಿದ ಲೈಗಿಂಕ ಅಲ್ಪಸಂಖ್ಯಾತರು ಸುಪ್ರೀಂ ಕೋರ್ಟ್ ಮಾನವೀಯ ಸಂಸ್ಥೆಯಾಗಿ ನಮಗೆ ನ್ಯಾಯ ಕಲ್ಪಿಸಬೇಕಾಗಿತ್ತು. ಆದರೆ, ಹಕ್ಕುಗಳನ್ನು ಕಸಿದುಕೊಳ್ಳುವಂತಹ ತೀರ್ಪು ನೀಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಪ್ರತಿಭಟನಾಕಾರರು ನಮ್ಮ ದೇಹ ನಮ್ಮ ಹಕ್ಕು, ನೋಡಿ ಸ್ವಾಮಿ ನಾವಿರೋದೆ ಹೀಗೆ, ಲೈಂಗಿಕತೆ ನಮ್ಮ ಜೀವನದ ಹಕ್ಕು ಎಂದು ಘೋಷಣೆಗಳನ್ನು ಕುಗಿದರು. ಸರ್ಕಾರಗಳು ಲೈಂಗಿಕ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿರುವುದು ಸರಿಯಷ್ಟೇ. ಆದರೆ ನಮ್ಮ ವಿರುದ್ಧ ಪೊಲೀಸರು ಯಾವುದೇ ಪ್ರಕರಣಗಳನ್ನು ದಾಖಲು ಮಾಡದಂತೆ ಪೊಲೀಸ್ ಕಾಯಿದೆ ಕಲಂ 36ಎ ರದ್ದುಪಡಿಸಬೇಕೆಂದು ಮನವಿ ಮಾಡಿದರು.
ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ಅಂಗೀಕಾರ ಮಾಡದೆ ಸುಗ್ರೀವಾಜ್ಞೆ  ಮೂಲಕ ನಮ್ಮ ರಕ್ಷಣೆ ಮಾಡಬೇಕೆಂದು ಆಗ್ರಹಿಸಿದರು.
ಮನವಿಯನ್ನು ಜಿಲ್ಲಾಧಿಕಾರಿಗಳ ಅನುಪಸ್ಥಿತಿಯಲ್ಲಿ ಸಿಬ್ಬಂದಿ ಸ್ವೀಕರಿಸಿ ಸರ್ಕಾರಕ್ಕೆ ಕಳುಹಿಸಿಕೊಡುವುದಾಗಿ ತಿಳಿಸಿದರು. ಪ್ರತಿಭಟನೆ ನೇತೃತ್ವವನ್ನು ಕರ್ನಾಟಕ ಲೈಂಗಿಕ ಅಲ್ಪಸಂಖ್ಯಾತರ ವೇದಿಕೆಯ ಮುಖ್ಯಸ್ಥೆ ಉಷಾಕಿರಣ್ ವಹಿಸಿದ್ದರು. ಮಂಜುಳಾ, ಅಶ್ವಿನಿ, ನವೀನ್ ಮತ್ತಿತ್ತರರು ಇದ್ದರು. ಕೋಲಾರದ ಸಮ್ಮಿಲನ, ಸೌಖ್ಯ ಸಮೃದ್ಧಿ ಸಂಸ್ಥೆ, ಐವೈಡಿ, ನವ ಜೀವನ ಸಿಎಸ್ಸಿ, ಜೀವನ್ ಆಶಾ ನೆಟ್ವರ್ಕ್ ಇನ್ನಿತರ ಸಂಘಟನೆಗಳು ಬೆಂಬಲ ನೀಡಿದ್ದವು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.