ಐಪಿಸಿ 377 ತಿದ್ದುಪಡಿಗೆ ಆಗ್ರಹಿಸಿ ಪ್ರತಿಭಟನೆ
ಚಿಕ್ಕಬಳ್ಳಾಪುರ: ಲೈಂಗಿಕ ಅಲ್ಪಸಂಖ್ಯಾತರ ಹಕ್ಕಿಗೆ ಸಂಬಂಧಿಸಿದಂತೆ ಐಪಿಸಿ 377 ಕಾಯ್ದೆಗೆ ತಿದ್ದುಪಡಿ ತರಬೇಕೆಂದು ಒತ್ತಾಯಿಸಿ ನಿಸರ್ಗ ಮತ್ತು ಸಂಗಮ ಸಂಸ್ಥೆಯ ಮುಖಂಡರು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಉಪ ವಿಭಾಗಾಧಿಕಾರಿಗಳ ಕಚೇರಿಯ ಮುಂದೆ ಧರಣಿ ಕುಳಿತ ಪ್ರತಿಭಟನಾಕಾರರು ಲೈಂಗಿಕ ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಹಕ್ಕನ್ನು ಉಲ್ಲಂಘನೆಗೆ ಅವಕಾಶ ನೀಡಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಿಸರ್ಗ ಸಂಸ್ಥೆ ಮುಖ್ಯಸ್ಥ ಗಂಗಾಧರ್ ಮಾತನಾಡಿ, ಲೈಂಗಿಕ ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಹಕ್ಕನ್ನು ಉಲ್ಲಂಘನೆ ಮಾಡಿದ ನ್ಯಾಯಾಲಯದ ತೀರ್ಪು ಖಂಡನೀಯ. ಕೂಡಲೇ 377 ಕಾಯ್ದೆಯನ್ನು ತಿದ್ದುಪಡಿ ಮಾಡುವವರೆಗೂ ಜಿಲ್ಲಾ ಮಟ್ಟದಿಂದ ಹಿಡಿದು ರಾಷ್ಟ್ರ ಮಟ್ಟದವರೆಗೂ ಹೋರಾಟಗಳನ್ನು ನಡೆಸಿಕೊಂಡು ಹೋಗುತ್ತೇವೆ. ಒಂದು ಸಲಿಂಗಿಗಳನ್ನು ಪ್ರೀತಿಸುವುದೇ ಅಪಾರಾಧ ಎಂದು ಹೇಳಿದರೆ ಕಾರಾರೃಹ ಸೇರಲು ಸಿದ್ಧವಿರುವುದಾಗಿ ತಿಳಿಸಿದರು. ಸಂಗಮ ಸಂಸ್ಥೆಯ ನಿಶಾ ಗುಳೂರು ಮಾತನಾಡಿ, ಲೈಂಗಿಕ ಅಲ್ಪಸಂಖ್ಯಾತರಿಗೆ ಯಾವುದೇ ರೀತಿಯಲ್ಲಿ ಹಿಂಸೆ ನೀಡುವುದು ಮತ್ತು ಕಾನೂನು ಬಾಹಿರವಾಗಿ ಬಂಧಿಸುವುದನ್ನು ನಿಲ್ಲಿಸಬೇಕೆಂದು ಒತ್ತಾಯಿಸಿದರು. ಮೈರಾಡ ಸಂಸ್ಥೆಯ ವೆಂಕಟರೆಡ್ಡಿ, ಸ್ವಸ್ತಿಕ್ ಸಂಸ್ಥೆಯ ಜೀವನ್ ಮತ್ತತಿರರು ಪ್ರತಿಭಟನೆ ನೇತೃತ್ವ ವಹಿಸಿದ್ದರು.
ಕಲ್ಲು ತೂರಾಟ ಇಬ್ಬರಿಗೆ ಗಾಯ
ಗುಡಿಬಂಡೆ: ಅಪಘಾತದಲ್ಲಿ ಗಾಯಗೊಂದು ಗಂಭೀರ ಸ್ಥೀತಿಯಲ್ಲಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಲು ವಿಳಂಬ ಮಾಡಿದ್ದಾರೆ ಎಂದು ಆರೋಪಿಸಿ ಸರ್ಕಾರಿ ಆಸ್ಪತ್ರೆಯ ಅ್ಯಂಬುಲೆನ್ಸ್ ಮೇಲೆ ಗ್ರಾಮಸ್ಥರು ಕಲ್ಲು ತೂರಾಟ ನಡೆಸಿದ ಪರಿಣಾಮ ಚಾಲಕ ಹಾಗೂ ಮತ್ತೊಬ್ಬ ಸಿಬ್ಬಂದಿ ಗಾಯಗೊಂಡು ವಾಗನಕ್ಕೆ ಜಖಂ ಆದ ಘಟನೆ ತಾಲೂಕಿನ ಚೆಂಡೂರು ಗ್ರಾಮದ ಬಳಿ ಸೋಮವಾರ ರಾತ್ರಿ ನಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

