ರು. 10 ಕೋಟಿ ವೆಚ್ಚದಲ್ಲಿ ರಸ್ತೆ, ಚರಂಡಿ ಅಭಿವೃದ್ಧಿ
ಬಾಗೇಪಲ್ಲಿ: ಸುಮಾರು 10 ಕೋಟಿ ರು. ವೆಚ್ಚದಲ್ಲಿ ಪಟ್ಟಣದ ಪ್ರಮುಖ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಯನ್ನು ಅತೀ ಶೀಘ್ರದಲ್ಲೆ ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ತಿಳಿಸಿದರು.
ಪುರಸಭೆಯ ವತಿಯಿಂದ ಪಟ್ಟಣದ 23ನೇ ವಾರ್ಡಿನಲ್ಲಿ ನಡೆದ ಎಸ್.ಎಫ್.ಸಿ 2013-14ನೇ ಸಾಲಿನ ಕಾಮಗಾರಿಗಳಿಗೆ ಚಾಲನೆ, ವಿದ್ಯಾರ್ಥಿ ವೇತನ ಹಾಗೂ ಪಡಿತರ ಚೀಟಿ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಮ್ಮನ್ನು ಆಯ್ಕೆ ಮಾಡಿರುವ ಜನರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಪಕ್ಷಭೇದ ಮರೆತು ಒಗ್ಗಟ್ಟಿನಿಂದ ಎಲ್ಲಾ ಜನಪ್ರತಿನಿಧಿಗಳು ಶ್ರಮಿಸಿದಾಗ ಮಾತ್ರ ಪಟ್ಟಣ ಸೇರಿದಂತೆ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಸಾಧ್ಯವಾಗುತ್ತದೆ ಎಂದರು.
ಪಟ್ಟಣದ ಪುರಸಭೆಯ ವ್ಯಾಪ್ತಿಯ ಎಲ್ಲಾ 24 ವಾರ್ಡ್ಗಳ ಜನರಿಗೆ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಸುಮಾರು 82 ಲಕ್ಷ ರು. ವೆಚ್ಚದಲ್ಲಿ ಕೊಳವೆ ಬಾವಿಗಳನ್ನು ಕೊರೆಸಿ ನೀರನ್ನು ಪೂರೈಸಬೇಕು. ಈ ಮೂಲಕ ಮುಂಬರುವಂತಹ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ನೀಗಿಸಬೇಕಾಗಿದೆ ಎಂದರು.
ಪಟ್ಟಣದಲ್ಲಿ ಅನೇಕ ಅಭಿವೃದ್ಧಿಯ ಕೆಲಸಗಳು ಪ್ರಾರಂಭದ ಹಂತದಲ್ಲಿವೆ. ಈ ಕಾಮಗಾರಿಗಳನ್ನು ಕೈಗೊಳ್ಳುವಂತಹ ಗುತ್ತಿಗೆದಾರರು ಕಾಮಗಾರಿಯ ಹೆಸರು, ವೆಚ್ಚ ಸೇರಿದಂತೆ ಸಂಪೂರ್ಣ ಮಾಹಿತಿಯುಳ್ಳ ನಾಮಫಲಕವನ್ನು ಕಡ್ಡಾಯವಾಗಿ ಹಾಕುವಂತೆ ಮುಖ್ಯಾಧಿಕಾರಿಗಳಿಗೆ ಸೂಚಿಸಿದ್ದು ಇದರಿಂದ ಸರ್ಕಾರದ ಹಣ ಪೋಲಾಗುವುದನ್ನು ಹಾಗೂ ಕಳಪೆ ಗುಣಮಟ್ಟದಲ್ಲಿ ಕಾಮಗಾರಿ ನಡೆಯುವುದನ್ನು ತಡೆಯಲು ಸಾಧ್ಯವಾಗುತ್ತದೆ ಎಂದರು.
ತಹಸೀಲ್ದಾರ್ ಎಂ.ಎ. ಪದ್ಮಾ, ಪುರಸಭೆ ಮುಖ್ಯಾಧಿಕಾರಿ ಆರ್. ಶ್ರೀಕಾಂತ್, ಭಾಸ್ಕರ್ ಮುಂತಾದವರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

