ಇಂದಿನಿಂದ ಎಸ್ಎಫ್ಐ ರಾಜ್ಯ ಸಮ್ಮೇಳನ
ಕೋಲಾರ: ಎಸ್.ಎಫ್.ಐ.ನ 13ನೇ ರಾಜ್ಯ ಸಮ್ಮೇಳನ ಫೆ.14 ರಿಂದ 17ರ ತನಕ ಕೋಲಾರ ನಗರದ ಟಿ.ಚೆನ್ನಯ್ಯ ರಂಗದಲ್ಲಿ ನಡೆಯಲಿದ್ದು, ಸಮ್ಮೇಳನದ ಅಂಗವಾಗಿ ಫೆ.14 ರಂದು ವಿದ್ಯಾರ್ಥಿ ಬೃಹತ್ ಮೆರವಣಿಗೆ ಮತ್ತು ಬಹಿರಂಗ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.
ನಗರದ ಪ್ರವಾಸಿಮಂದಿರದಿಂದ ಬೆಳಿಗ್ಗೆ 11 ಗಂಟೆಗೆ ಆರಂಭವಾಗುವ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜೂನಿಯರ್ ಕಾಲೇಜು ಮೈದಾನದಲ್ಲಿ ಬಹಿರಂಗ ಸಭೆಯಲ್ಲಿ ನಡೆಯಲಿದೆ. ಮಧ್ಯಾಹ್ನ 12 ಗಂಟೆಗೆ ನಡೆಯುವ ಬಹಿರಂಗ ಸಭೆಯನ್ನು ತ್ರಿಪುರ ರಾಜ್ಯದ ಶಾಲಾ ಶಿಕ್ಷಣ ಸಚಿವರಾದ ತಪನ್ ಚಕ್ರವರ್ತಿ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಎಸ್.ಎಫ್.ಐ. ಅಖಿಲ ಭಾರತ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯಸಭಾ ಸದಸ್ಯರಾದ ರಿತಬ್ರತೋ ಬ್ಯಾನರ್ಜಿ, ಮೈಸೂರು ರಂಗಾಯಣ ನಿರ್ದೇಶಕರಾದ ಜನಾರ್ದನ (ಜನ್ನಿ), ಚಲನಚಿತ್ರ ನಟ ಚೇತನ್, ಜಿ.ಪಂ. ಅಧ್ಯಕ್ಷ ತೂಪಲ್ಲಿ ಆರ್. ನಾರಾಯಣಸ್ವಾಮಿ, ಸ್ವಾಗತ ಸಮಿತಿ ಅಧ್ಯಕ್ಷ ಎಂ.ವಿ. ನಾರಾಯಣಸ್ವಾಮಿ, ಎಸ್.ಎಫ್.ಐ. ರಾಜ್ಯ ಕಾರ್ಯದರ್ಶಿ ಹುಳ್ಳಿ ಉಮೇಶ್ ಭಾಗವಹಿಸಲಿದ್ದು, ಅಧ್ಯಕ್ಷತೆಯನ್ನು ಎಸ್.ಎಫ್.ಐ. ರಾಜ್ಯಾಧ್ಯಕ್ಷ ಅನಂತನಾಯ್ಕ ವಹಿಸಲಿದ್ದಾರೆ.
ಫೆ.15 ರಂದು ಬೆಳಿಗ್ಗೆ 11 ಗಂಟೆಗೆ ವಿದ್ಯಾರ್ಥಿ ಪ್ರತಿನಿಧಿ ಅಧಿವೇಶನವನ್ನು ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರೊ.ಎಸ್.ಜಿ. ಸಿದ್ದರಾಮಯ್ಯ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಎಸ್.ಎಫ್.ಐ. ಅಖಿಲ ಭಾರತ ಅಧ್ಯಕ್ಷ ಡಾ. ಶಿವದಾಸನ್, ಸ್ವಾಗತ ಸಮಿತಿ ಗೌರವಾಧ್ಯಕ್ಷ ತೂಪಲ್ಲಿ ಆರ್. ನಾರಾಯಣಸ್ವಾಮಿ, ಅಧ್ಯಕ್ಷ ಎಂ.ವಿ. ನಾರಾಯಣಸ್ವಾಮಿ ಭಾಗವಹಿಸಲಿದ್ದಾರೆ. ಅಧ್ಯಕ್ಷತೆಯನ್ನು ಎಸ್.ಎಫ್.ಐ. ರಾಜ್ಯಾಧ್ಯಕ್ಷ ಅನಂತನಾಯ್ಕ ವಹಿಸಲಿದ್ದಾರೆ.
ಫೆ.16 ರಂದು ಬೆಳಿಗ್ಗೆ 10 ಗಂಟಗೆ ಶಿಕ್ಷಣ ಪ್ರಜಾಸತ್ತಾತ್ಮಕ ಹಕ್ಕುಗಳ ಕುರಿತು ರಾಜ್ಯ ಮಟ್ಟದ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿದ್ದು, ಎಸ್.ಎಫ್.ಐ. ಅಖಿಲ ಭಾರತ ಅಧ್ಯಕ್ಷರಾದ ಡಾ. ಶಿವದಾಸನ್ ವಿಷಯ ಮಂಡಿಸಲಿದ್ದು, ಮುಖ್ಯ ಅತಿಥಿಗಳಾಗಿ ಎಸ್.ಎಫ್.ಐ. ಸಂಸ್ಥಾಪನ ಮುಖಂಡರಾದ ಜಿ.ವಿ. ಶ್ರೀರಾಮರೆಡ್ಡಿ ಭಾಗವಹಿಸಲಿದ್ದಾರೆ. ಇದೇ ದಿನ ಸಂಜೆ 6 ಗಂಟೆಗೆ ಎಸ್.ಎಫ್.ಐ. ಮಾಜಿ ಮುಖಂಡರನ್ನು ಒಳಗೊಂಡ ಸಮ್ಮಿಲನ ವಿಶೇಷ ಕಾರ್ಯಕ್ರಮ ನಡೆಯಲಿದೆ.
ಫೆ.17 ರಂದು ಮಧ್ಯಾಹ್ನ 2 ಗಂಟೆಗೆ ಸಮ್ಮೇಳನದ ಸಮಾರೋಪ ಸಮಾರಂಭ ನಡೆಯಲಿದೆ. ಈ ಸಮ್ಮೇಳನದಲ್ಲಿ ಶೈಕ್ಷಣಿಕ ಸಮಸ್ಯೆಗಳ ಕುರಿತು ಚರ್ಚೆಗಳು ನಡೆದು ಹೋರಾಟಗಳನ್ನು ರೂಪಿಸಲಾಗುವುದು ಎಂದು ಮಧ್ಯಮ ಉಪ ಸಮಿತಿ ಸಂಚಾಲಕ ವಿಜಯಕೃಷ್ಣ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

