ಕುಡಿಯುವ ನೀರಿನ ಸಮಸ್ಯೆ ಎದುರಿಸಲು ಸಿದ್ಧ: ಜಿಪಂ
ಬಂಗಾರಪೇಟೆ: ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ತಾಲೂಕು ಆಡಳಿತ ಸಿದ್ಧತೆ ಮಾಡಿಕೊಂಡಿದ್ದು, ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಪಂ ಎಇಇ ಮಂಜುನಾಥ್ ಭರವಸೆ ನೀಡಿದರು.
ಇಲ್ಲಿನ ತಾಪಂ ಸಭಾಂಗಣದಲ್ಲಿ ತಾಪಂ ಅಧ್ಯಕ್ಷೆ ರೇಣುಕಾ ಬಾಲಚಂದ್ರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಚರ್ಚೆ ಮಾಡುವಾಗ ಎಇಇ ಮಂಜುನಾಥ್ ಮಾತನಾಡಿ, ಈಗಾಗಲೇ ಸರ್ಕಾರಕ್ಕೆ 11.76ಕೋಟಿ ರು. ಕುಡಿಯುವ ನೀರಿನ ಅಭಾವ ನೀಗಿಸಲು ಮಂಜೂರು ಮಾಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಸರ್ಕಾರ ನೀಡುವ ಭರವಸೆ ಇದೆ ಎಂದರು. ಸದಸ್ಯ ರಾಮಚಂದ್ರರೆಡ್ಡಿ, ಕಳೆದ ಮೂರು ವರ್ಷಗಳಿಂದ ತನ್ನ ಕ್ಷೇತ್ರದಲ್ಲಿ ಕುಡಿಯುವ ನೀರು ಪೂರೈಸಿದ ಟ್ಯಾಂಕರ್ ಮಾಲೀಕರಿಗೆ ಹಣ ನೀಡಿಲ್ಲ, ಹಣ ನೀಡದ ಕಾರಣ ಅವರು ನೀರು ಪೂರೈಕೆ ಸ್ಥಗಿತಗೊಳಿಸಿದ್ದಾರೆ. ಇದರಿಂದ ಗ್ರಾಮಗಳಲ್ಲಿ ನೀರಿನ ಅಭಾವ ತಾಂಡವಾಡುತ್ತಿದೆ ಎಂಬ ಪ್ರಶ್ನೆಗೆ ಉತ್ತರ ದೊರೆಯಲಿಲ್ಲ.
ತಾಲೂಕಿನ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಗೆ ವಿಶೇಷ ತರಬೇತಿ ನೀಡಿ ಅಂಗನವಾಡಿ ಕೇಂದ್ರಗಳಿಗೆ ಮಕ್ಕಳನ್ನು ಆಕರ್ಷಿಸಲು ಎನ್ಜಿಒ ಸಹಭಾಗಿತ್ವದಲ್ಲಿ ಯೋಜನೆ ಸಿದ್ಧಪಡಿಸಲಾಗಿದ್ದು, ಇದರ ಫಲವಾಗಿ 105 ಕೇಂದ್ರಗಳಲ್ಲಿ ಮಕ್ಕಳ ಹಾಜರಾತಿ ಹೆಚ್ಚಳವಾಗಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಕೇಂದ್ರಗಳ ಕಾರ್ಯಕರ್ತೆಯರಿಗೂ ತರಬೇತಿ ನೀಡಿ ಅಂಗನವಾಡಿಗಳನ್ನು ಮಾದರಿ ಮಾಡಬೇಕು ಎಂದು ಸಿಡಿಪಿಒ ರಾಮನ್ ಸಭೆ ಗಮನಕ್ಕೆ ತಂದರೂ ಸಭೆ ನಿರ್ಲಕ್ಷ್ಯ ಮಾಡಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

