ಕೋಲಾರ

ಗುಣಮಟ್ಟದ ಕಾಮಗಾರಿಗೆ ಆದ್ಯತೆ ಸಿಗಲಿ

Published On :

ಚಿಕ್ಕಬಳ್ಳಾಪುರ: ಗುಣಮಟ್ಟದ ಕಾಮಗಾರಿ ಕೈಗೊಳ್ಳುವುದರಿಂದ ಸರ್ಕಾರದ ಅನುದಾನ ಸದ್ಬಳಕೆಯಾಗಿ ಜನರಿಗೂ ಅನುಕೂಲವಾಗುತ್ತದೆ ಎಂದು ಶಾಸಕ ಡಾ.ಕೆ. ಸುಧಾಕರ್ ಅಭಿಪ್ರಾಯಪಟ್ಟರು.
ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ಸುಮಾರು 7 ಕೋಟಿ ರು. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಬುಧವಾರ ಅವರು ಮಾತನಾಡಿದರು.
ಜಿಲ್ಲಾ ಕೇಂದ್ರವಾದ ಚಿಕ್ಕಬಳ್ಳಾಪುರದಲ್ಲಿ ಬಸ್ ನಿಲ್ದಾಣ ನಿರ್ಮಿಸಲು ಈಗಾಗಲೇ ಮುಖ್ಯಮಂತ್ರಿಗಳು ಶಂಕುಸ್ಥಾಪನೆ ನೆರವೇರಿಸಿದ್ದು ಒಂದು ವರ್ಷದೊಳಗೆ ಬಸ್ ನಿಲ್ದಾಣ ನಿರ್ಮಾಣವಾಗಬೇಕೆಂಬ ಯೋಜನೆಯನ್ನು ಹಾಕಿಕೊಳ್ಳಲಾಗಿದೆ. ಇದಕ್ಕೆ ಅನುಗುಣವಾಗಿ ಗುತ್ತಿಗೆದಾರರು ಕೆಲಸವನ್ನು 11 ತಿಂಗಳಲ್ಲೇ ಮುಗಿಸಬೇಕೆಂದರು.
ಜನರ ಹಣ ಸರ್ಕಾರ ಖರ್ಚು ಮಾಡುತ್ತದೆ. ಇದರಿಂದ ಸರ್ಕಾರದ ಹಣದಲ್ಲಿ ಕಾಮಗಾರಿ ಕೈಗೊಳ್ಳುವಾಗ ಗುಣಮಟ್ಟ ಕಾಪಾಡಿಕೊಳ್ಳಲು ಪ್ರಮುಖ ಆದ್ಯತೆ ನೀಡಬೇಕು. ಕಳಪೆ ಗುಣಮಟ್ಟದ ಕಾಮಗಾರಿಗಳಿಂದ ಪ್ರತಿಯೊಬ್ಬರು ತೊಂದರೆ ಅನುಭವಿಸಬೇಕಾಗುತ್ತದೆ ಎಂದ ಅವರು, ಗುಣಮಟ್ಟವಿಲ್ಲದ ಕಾಮಗಾರಿಗಳು ನಡೆಯುವ ಸಂದರ್ಭದಲ್ಲಿ ಸ್ವಯಂ ಜನರೇ ಸಂಬಂಧಪಟ್ಟವರ ಗಮನಕ್ಕೆ ತರಬೇಕೆಂದು ಸೂಚಿಸಿದರು.
ಜಿಲ್ಲಾ ಕೇಂದ್ರಕ್ಕೆ ಒಂದು ಸುಸಜ್ಜಿತ ಬಸ್ ನಿಲ್ದಾಣದ ಅಗತ್ಯವಿರುವುದನ್ನು ಮನಗಂಡು ಸರ್ಕಾರ ಅನುದಾನವನ್ನು ಬಿಡುಗಡೆ ಮಾಡಿ ಕಾಮಗಾರಿಗೆ ಚಾಲನೆ ನೀಡಿದ್ದು ಇದು ಸಕಾಲಕ್ಕೆ ಮುಕ್ತಾಯಗೊಂಡು ಜನರ ಸೇವೆಗೆ ಬೇಗ ಲಭ್ಯವಾದರೆ ಅದಕ್ಕಿಂತ ಉತ್ತಮ ಕಾರ್ಯ ಇನ್ನೊಂದಿಲ್ಲ ಎಂದು ಹೇಳಿದರು. ಈ ಸಂದರ್ಭದಲ್ಲಿ  ನಗರಸಭೆ ಮಾಜಿ ಅಧ್ಯಕ್ಷ ಇಕ್ಬಾಲ್ ಅಹಮದ್, ಶ್ರೀನಿವಾಸ್, ಆರ್.ಎಚ್. ನಾರಾಯಣಸ್ವಾಮಿ, ಗುತ್ತಿಗೆದಾರ ಬಾಬುರಾವ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.