ಆರೋಪಿಗಳ ಬಂಧನ
ಶಿಡ್ಲಘಟ್ಟ: ವರದಕ್ಷಿಣೆ ಕಿರುಕುಳ ಆರೋಪದ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಗಂಡನ ಮನೆಯಲ್ಲಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಲಾಗಿದ್ದು, ತೀವ್ರ ಗಾಯಗೊಂಡಿದ್ದ ರೇವತಿಯವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ದಿದ್ದರು. ಹತ್ತು ದಿನಗಳಿಂದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೇವತಿ ಬುಧವಾರ ಮೃತಪಟ್ಟಿದ್ದು, ಆಕೆಯ ಸಂಬಂಧಿಕರು, ಸ್ತ್ರೀ ಶಕ್ತಿ ಸಂಘಗಳು ಗುರುವಾರ ಶವವನ್ನು ಠಾಣೆಯ ಮುಂದಿಟ್ಟು ಆರೋಪಿಗಳ ಬಂಧನಕ್ಕೆ ಆಗ್ರಹಿಸಿದ್ದರು. ಇದರಿಂದ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಗಂಡ ಚಂದ್ರಶೇಖರ್, ಮಾವ ಶ್ರೀನಿವಾಸ್, ಅತ್ತೆ ಸಾವಿತ್ರಮ್ಮರನ್ನು ಬೆಂಗಳೂರಿನ ಆಡುಗೋಡಿ ಸಮೀಪದ ಶನಿಮಹಾತ್ಮ ದೇವಸ್ಥಾನದ ಬಳಿ ಬಂಧಿಸಿದ್ದಾರೆ. ಬಂಧಿತರನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.
ಅಪರಿಚಿತ ಮಹಿಳೆಯ ಶವ ಪತ್ತೆ
ಶಿಡ್ಲಘಟ್ಟ: ಪಟ್ಟಣದ ರೇಷ್ಮೆ ವೃತ್ತದ ಬಳಿಯಿರುವ ಸರ್ಕಾರಿ ಶಾಲೆಯ ಕಾಂಪೌಂಡ್ನಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ. ಮಹಿಳೆಗೆ ಸುಮಾರು 60 ವರ್ಷ ವಯಸ್ಸಾಗಿದೆ. ಕಳೆದ ಒಂದು ವಾರದಿಂದ ಪಟ್ಟಣದಲ್ಲಿ ಬಿಕ್ಷಾಟನೆ ಮಾಡಿಕೊಂಡಿದ್ದಳು ಎಂದು ಹೇಳಲಾಗಿದೆ. ಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುರಸಭೆ ಸಹಾಯದಿಂದ ಮೃತದೇಹ ಮಣ್ಣು ಮಾಡಲಾಗಿದೆ.
ಮೀನು ಹಿಡಿಯಲು ಹೋದ ವ್ಯಕ್ತಿ ಸಾವು
ಶಿಡ್ಲಘಟ್ಟ: ಮೀನು ಹಿಡಿಯಲು ಹೋಗಿದ್ದ ವ್ಯಕ್ತಿಯೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಜೆ. ವೆಂಕಟಾಪುರ ಬಳಿಯ ಭದ್ರಯ್ಯನಕೆರೆಯಲ್ಲಿ ನಡೆದಿದೆ. ದೇವನಹಳ್ಳಿ ತಾಲೂಕಿನ ವಿಜಯಪುರದ ನಿವಾಸಿ ಅಮೀರ್ ಜಾನ್(50) ಸಾವನ್ನಪ್ಪಿದ್ದು, ಮೀನು ಹಿಡಿಯಲು ಹೋಗಿ ಕಾಲು ಜಾರಿ ನೀರಿನಲ್ಲಿ ಬಿದ್ದು, ಜೇಡಿಮಣ್ಣಿನಲ್ಲಿ ಸಿಕ್ಕಿಕೊಂಡು ಸಾವನ್ನಪ್ಪಿದ್ದಾನೆ ಎಂದು ಹೇಳಲಾಗಿದೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕವನ ಸಂಕಲನ ಬಿಡುಗಡೆ ಇಂದು
ಕೋಲಾರ: ಕೋಲಾರ ಚುಟುಕು ಸಾಹಿತ್ಯ ಪರಿಷತ್, ಸಿರಿಗನ್ನಡ ವೇದಿಕೆ ಕೋಲಾರ ಆಶ್ರಯದಲ್ಲಿ ಕವಿ ಹಾಗೂ ಶಿಕ್ಷಕ ಎಸ್. ರಮೇಶ್ ಬಾಬು ರವರ ಸ್ವರಚಿತ ಸ್ನೇಹಮಯಿ ಕವನ ಸಂಕಲನ ಪುಸ್ತಕ ಬಿಡುಗಡೆ ಸಮಾರಂಭ ಹಾಗೂ ಕವಿಗೋಷ್ಠಿ ಕಾರ್ಯಕ್ರಮವನ್ನು ನಗರಸಭೆಯ ಪಕ್ಕದ ರೋಟರಿ ಭವನದಲ್ಲಿ ಫೆ.16 ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಚುಟುಕ ಸಾಹಿತ್ಯ ಪರಿಷತ್ ಗೊರಾವಾಧ್ಯಕ್ಷ ಕೆ.ಎಂ.ಜೆ. ಮೌನಿ ಕಾರ್ಯಕ್ರಮವನ್ನು ಉದ್ಘಾಟಿಸುವರು, ಪ್ರಾಂಶುಪಾಲ ಜಿ. ಶಂಕರೇಗೌಡ ಅಧ್ಯಕ್ಷತೆ ವಹಿಸುವರು.
ಪೋಷಕರ ಕ್ರೀಡಾಕೂಟ
ಗುಡಿಬಂಡೆ: ಪಟ್ಟಣದ ನ್ಯೂ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವದ ಅಂಗವಾಗಿ ಶಾಲಾ ಮಕ್ಕಳ ಪೋಷಕರ ಕ್ರೀಡಾಕೂಟ ಏರ್ಪಡಿಸಲಾಗಿತ್ತು. ಶಾಲೆ ಕಾರ್ಯದರ್ಶಿ ಪಿ.ಎನ್. ರಾಜಶೇಖರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿದ್ಯಾರ್ಥಿಗಳಂತೆ ಪೋಷಕರೂ ಕ್ರೀಡೆಗಳಲ್ಲಿ ಭಾಗವಹಿಸಿರುವುದು ಸಂತಸ ತಂದಿದೆ ಎಂದರು. ಮುಖ್ಯ ಶಿಕ್ಷಕಿ ಡಿ.ಎಲ್. ಪರಿಮಳ, ಸಹ ಶಿಕ್ಷಕರಾದ ಎನ್.ವಿ. ಗಂಗಾಧರ, ಗೋಪಾಲಕೃಷ್ಣ, ಬಾಬಾಜಾನ್, ವೆಂಕಟೇಶ್, ಅಶ್ವತ್ಥಪ್ಪ, ಮೊಹಸೀನಾ, ಅಶ್ವತ್ಥಮ್ಮ, ನಸ್ರೀನ್ ತಾಜ್, ಪೂರ್ಣಿಮಾ, ಶ್ರೀನಿವಾಸ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

