ಅಂಗವಿಕಲರು ತರಬೇತಿ ಪಡೆದು ಸ್ವಾವಲಂಬಿಗಳಾಗಿ
ಚಿಕ್ಕಬಳ್ಳಾಪುರ: ಅಂಗ ನೂನ್ಯತೆ ಅನುಭವಿಸುವ ಅಂಗವಿಕಲರು ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗುವ ನಿಟ್ಟಿನಲ್ಲಿ ತರಬೇತಿ ಮತ್ತು ಉದ್ಯೋಗ ಮೇಳ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದು ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಜಿ.ವಿ. ತುರಮರಿ ಮೆಚ್ಚುಗೆ ವ್ಯಕ್ತಪಡಿಸಿದರು.
ನಗರದ ಕಂದಾಯ ನೌಕರರ ಭವನದಲ್ಲಿ ಕರ್ನಾಟಕ ವಿಕಲಚೇತನರ ಸಂಘಟನೆ, ಪಂಖಾ, ಅಲಂಬಾ ಚಾರಿಟೇಬಲ್ ಟ್ರಸ್ಟ್ ಆಯೋಜಿಸಿದ್ದ ಅಂಗವಿಕಲರ ಉದ್ಯೋಗ ತರಬೇತಿ ಮೇಳ ಉದ್ಘಾಟಿಸಿ ಮಾತನಾಡಿ, ಅಂಗವಿಕಲರಿಗೆ ಕೇವಲ ಅನುಕಂಪ ತೋರದೇ ಅವರಿಗೆ ಅವಕಾಶ ಒದಗಿಸಬೇಕು. ಈ ಮೂಲಕ ಅವರು ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗುವ ವಾತಾವರಣ ನಿರ್ಮಾಣ ಮಾಡಬೇಕು. ಆಗ ಮಾತ್ರ ಅಂಗವಿಕಲರು ಸಾಮಾನ್ಯರಂತೆ ಉತ್ತಮ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದರು.
ಅಂಗವಿಕಲರು ತಮ್ಮ ಕೀಳರಿಮೆ ಬದಿಗೊತ್ತಿ ತಮಗೆ ದೊರೆಯುವ ಸವಲತ್ತುಗಳನ್ನು ಸಮರ್ಪಕ ರೀತಿಯಲ್ಲಿ ಬಳಸಿಕೊಂಡು ಸಾಧನೆಯನ್ನು ತೋರಬೇಕು. ಈ ಮೂಲಕ ಸಮಾಜದಲ್ಲಿ ವಿಶೇಷವಾಗಿ ಗುರುತಿಸಿಕೊಂಡು ಇತರರಿಗೆ ಪ್ರೇರಣೆಯಾಗಬೇಕು, ಅಂಗವಿಕಲರ ಕಲ್ಯಾಣಕ್ಕಾಗಿ ವಿವಿಧ ಸಂಘಟನೆಗಳು, ಸ್ವಯಂ ಸೇವಾ ಸಂಸ್ಥೆಗಳು ಶ್ರಮಿಸುತ್ತಿದ್ದು ಇಂತಹ ಕಾರ್ಯಕ್ರಮಗಳು ಅಂಗವಿಕಲರ ಹಿತದೃಷ್ಟಿಯಿಂದ ಹೆಚ್ಚಿಗೆ ನಡೆಯಬೇಕಾಗಿದೆ ಎಂದರು.
ಬೆಂಗಳೂರಿನ ಪಂಕ ಸಂಸ್ಥೆಯ ನಟರಾಜ್ ಮಾತನಾಡಿ, ಜಿಲ್ಲೆಯ ಅಂಗವಿಕಲರ ಸಾಮರ್ಥ್ಯ ಗುರುತಿಸಲು ಮತ್ತು ಬೆಳೆಸಲು 45 ದಿನಗಳ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅರ್ಜಿ ಸಲ್ಲಿಸಿದ 200 ಮಂದಿ ಅಂಗವಿಕಲರಿಗೆ ಸೂಕ್ತ ತರಬೇತಿ ನೀಡಿದ ನಂತರ ಉದ್ಯೋಗಾವಕಾಶ ದೊರಕಿಸಿಕೊಡಲಾಗುವುದು. ಇದರಿಂದ ಅಂಗವಿಕಲರ ಆರ್ಥಿಕ ಸ್ಥಿತಿ ಉತ್ತಮಗೊಳ್ಳಲು ಸಾಧ್ಯವಾಗುತ್ತದೆ ಎಂದರು. ಮಹಿಳಾ ಮತ್ತು ಮಕ್ಕಳ ಇಲಾಖೆ ಉಪ ನಿರ್ದೇಶಕಿ ಸುರೇಖಾ ಮಾತನಾಡಿ, ಸರ್ಕಾರ ಅಂಗವಿಕಲರಿಗಾಗಿ ಅನೇಕ ಸವಲತ್ತು ಒದಗಿಸುತ್ತಿವೆ. ಇವುಗಳ ಬಗ್ಗೆ ತಿಳಿದುಕೊಂಡು ಸದುಪಯೋಗಪಡಿಸಿಕೊಳ್ಳಬೇಕೆಂದು ಅಂಗವಿಕಲರಿಗೆ ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಅಂಗವಿಕಲರ ಹಾಗೂ ನಾಗರಿಕರ ಸಬಲೀಕರಣಾಧಿಕಾರಿ ಶಾಂತರಸ, ಆಲಂಬ ಚಾರಿಟಬಲ್ ಟ್ರಸ್ಟ್ನ ರೀಟ, ಕಾರ್ಯದರ್ಶಿ ನಾಗೇಶ್, ಕ್ಸೇವಿಯರ್ ಥಾಮಸ್ ಹಾಗೂ ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಕೃಷ್ಣಪ್ಪ, ಸುರೇಶ್, ಮಂಜುನಾಥ್, ಕರ್ನಾಟಕ ವಿಕಲಚೇತನರ ಸಂಘಟನೆ ಅಧ್ಯಕ್ಷ ಉಷಾಕಿರಣ್, ಕಾರ್ಯದರ್ಶಿ ಸುಬ್ರಮಣಿ, ಸುಶೀಲಮ್ಮ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

