ವೇತನಕ್ಕೆ ಒತ್ತಾಯಿಸಿ ಶಿಕ್ಷಕರ ಧರಣಿ
ಮುಳಬಾಗಲು: ಕೋಲಾರ ಜಿಲ್ಲೆಯಲ್ಲಿ ಶಿಕ್ಷಕರನ್ನು ಅಮಾನೀಯವಾಗಿ ನಡೆಸಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಎನ್. ಮಂಜುನಾಥ್ ಆರೋಪಿಸಿದರು.
ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮುಂದೆ ಸೋಮವಾರ ಶಿಕ್ಷಕರಿಂದ ನಡೆದ ಪ್ರತಿಭಟನೆಯಲ್ಲಿ ಮಾತನಾಡಿ, ಶಿಕ್ಷಕರ ಸಂಬಳ ನೀಡಲು ನಿರ್ಲಕ್ಷ್ಯವಹಿಸುವ ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಗಳ ವಿರುದ್ಧ ಹರಿಹಾಯ್ದರು.
ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ವಿ. ಜಗನ್ನಾಥ್, ಕ್ಷೇತ್ರಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿ ಶಿಕ್ಷಕರಿಗೆ ಪ್ರತಿ ತಿಂಗಳು 5ರೊಳಗೆ ಸಂಬಳ ಹಾಗೂ ಇತರೆ 21 ಬೇಡಿಕೆಗಳನ್ನು ಈಡೇರಿಸಲು ಕೋರಿದರು.
ಪ್ರತಿಭಟನೆಯಲ್ಲಿ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಗದೀಶ್, ಮಾಜಿ ಅಧ್ಯಕ್ಷ ಎಂ. ವೆಂಕಟರವಣಪ್ಪ, ರಾಜಕುಮಾರ್, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಎಂ. ಶಿವಣ್ಣ, ಶಂಕರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

