ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ
ಮಾಲೂರು: ಪಟ್ಟಣದ ರಸ್ತೆ ಸೇರಿದಂತೆ ತಾಲೂಕಿನಾದ್ಯಂತ ಹದಗೆಟ್ಟಿರುವ ರಸ್ತೆಗಳನ್ನು ಶೀಘ್ರ ದುರಸ್ತಿಗೊಳಿಸಬೇಕೆಂದು ಅಗ್ರಹಿಸಿ ಕರವೇ ಕಾರ್ಯಕರ್ತರು ಮಂಗಳವಾರ ರಸ್ತೆ ತಡೆ ನಡೆಸಿದರು.
ಪಟ್ಟಣದ ಡಾ. ರಾಜ್ ವೃತ್ತದಲ್ಲಿ ರಸ್ತೆ ತಡೆ ನಡೆಸಿದ ಪ್ರತಿಭಟನೆಕಾರರನ್ನು ಉದ್ದೇಶಿಸಿ ಮಾತನಾಡಿದ ಕರವೇ ಅಧ್ಯಕ್ಷ ರಾಮಕೃಷ್ಣಪ್ಪ, ಇತ್ತೀಚೆಗೆ ಪಿಡಬ್ಲ್ಯೂಡಿ ಇಲಾಖೆವತಿಯಿಂದ ಹಾಕಿರುವ ಟೇಕಲ್ ರಸ್ತೆ ಸೇರಿದಂತೆ ತಾಲೂಕಿನಾದ್ಯಂತ ರಸ್ತೆಗಳು ಸಂಪೂರ್ಣ ಹಾಳಾಗಿವೆ. ಕಳಪೆ ಕಾಮಗಾರಿ ನಡೆಯುತ್ತಿದ್ದರೂ ಇಲಾಖೆ ಅಧಿಕಾರಿಗಳು ಜಾಣ ಕುರುಡು ಪ್ರದರ್ಶಿಸಿ ಸಾರ್ವಜನಿಕರ ಹಣ ಪೋಲು ಮಾಡುತ್ತಿದ್ದಾರೆ ಎಂದು ದೂರಿದರು.
ಕಳಪೆ ಕಾಮಗಾರಿ ನೆಡೆಸಿರುವ ಗುತ್ತಿಗೆದಾರರನ ವಿರುದ್ಧ ಕ್ರಮ ಕೈಗೊಳ್ಳುವ ಜತೆಗೆ ಇನ್ನೂಂದು ವಾರದಲ್ಲಿ ಪಟ್ಟಣದ ರಸ್ತೆ ಸರಿಪಡಿಸದಿದ್ದರೆ ಕೋಲಾರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಹೋರಾಟ ನೆಡೆಸುವುದಾಗಿ ಎಚ್ಚರಿಸಿದರು. ಮನವಿ ಸ್ವೀಕರಿಸಿ ಮಾತನಾಡಿದ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರ ಭೋಗೆ ಗೌಡ, ಈವರೆಗೂ ಟೇಕಲ್ ರಸ್ತೆಯಲ್ಲಿ ನಡೆದಿರುವ ರಸ್ತೆ ಕಾಮಗಾರಿ ಹಣವೇ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಗುತ್ತಿಗೆದಾರ ಕಾಮಗಾರಿ ನಿಲ್ಲಿಸಿದ್ದು, ಅವರನ್ನು ಈಗಾಗಲೇ ಮನವೂಳಿಸಿದ್ದು, ಮಾರ್ಚ್ ಮೊದಲ ವಾರದಲ್ಲಿ ಕಾಮಗಾರಿ ಪುನಃ ಆರಂಭವಾಗಲಿದೆ. ರಸ್ತೆಯಲ್ಲಿರುವ ಗುಂಡಿಯನ್ನು ನಾಳೆಯಿಂದಲ್ಲೇ ಮುಚ್ಚಿಸುವ ಕೆಲಸ ಮಾಡುವುದಾಗಿ ತಿಳಿಸಿದರು. ಕೊಪ್ಪಚಂದ್ರ, ದಯಾನಂದ್, ಮಂಜು, ರಾಮಚಂದ್ರ, ಲಕ್ಷ್ಮಿನಾರಾಯಣ್, ಶಿವಾರ ನಾಣಿ, ಶಿವಕುಮಾರ್, ಮಂಜು ಸಾರಥಿ, ಮಧು, ಆನಂದ್, ರಮೇಶ್, ಸಿ.ಡಿ. ನಾಗರಾಜ್, ಸಿ.ವಿ. ಚಲಪತಿ, ಶ್ರೀಕಾಂತ ಮೂರ್ತಿ, ಕಡತೂರು ಮಂಜು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

