ಕೋಲಾರ

ಬಸ್ ವ್ಯವಸ್ಥೆಗೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

Published On :

ಕೆಜಿಎಫ್: ವಿದ್ಯಾರ್ಥಿಗಳು ಸರ್ಕಾರಿ ಬಸ್ಪಾಸ್ ಹೊಂದಿದ್ದರೂ ನಗರ ಸಾರಿಗೆ ಸಂಸ್ಥೆಗಳ ಬಸ್ಗಳನ್ನು ನಿಲ್ಲಿಸದೇ ಹೋಗುತ್ತಿದ್ದು ಜಿಲ್ಲೆಯ ವಿವಿಧ ಪ್ರದೇಶಗಳಿಂದ ಕೆಜಿಎಫ್ಗೆ ಬರುವ ವಿರ್ದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ಎಬಿವಿಪಿಯಿಂದ ಪ್ರತಿಭಟನೆ ನಡೆಸಲಾಯಿತು.
ಮುಳಬಾಗಿಲು ನಿಂದ ಕೆಜಿಎಫ್ಗೆ ಬರುವ ಸರ್ಕಾರಿ ಸಾರಿಗೆ ಬಸ್ಗಳು ಹಳ್ಳಿಗಳಲ್ಲಿ ನಿಲ್ಲಿಸುತ್ತಿಲ್ಲ ಮತ್ತು ಗುಟ್ಟಹಳ್ಳಿ ಗ್ರಾಮದೊಳಗೆ ಯಾವುದೇ ಸರ್ಕಾರಿ ಬಸ್ಗಳು ಪ್ರವೇಶಿಸುತ್ತಿಲ್ಲ. ಅದೇ ರೀತಿ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಬಸ್ಗಾಗಿ ಕಾಯುತ್ತಾ ನಿಂತಿದ್ದರೂ ವಿದ್ಯಾರ್ಥಿಗಳನ್ನು ನೋಡುತ್ತಿದ್ದಂತೆ ಚಾಲಕರು ಬಸ್ ನಿಲ್ಲಿಸದೇ ಹೋಗುತ್ತಿದ್ದಾರೆ ಎಂದು ಆರೋಪಿಸಿದರು.
ಇದೀಗ ಪರೀಕ್ಷೆಗಳು ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಘಟಕ ವ್ಯವಸ್ಥಾಪಕರು ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯ ಒದಗಿಸುತ್ತಿಲ್ಲ. ಪ್ರತಿದಿನ ಶಾಲಾ ಕಾಲೇಜುಗಳಿಗೆ ತಡವಾಗಿ ಬರಬೇಕಿದೆ ಎಂದು ಆರೋಪಿಸಿ ಕೆಜಿಎಫ್ ಘಟಕ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ತಾಲೂಕು ಸಂಚಾಲಕ ಎಸ್. ನವೀನ್ರೆಡ್ಡಿ, ದಿಲೀಪ್, ನಗರ ಕಾರ್ಯದರ್ಶಿ ಸುಬ್ರಮಣಿರೆಡ್ಡಿ, ಕಾರ್ಯಕರ್ತರಾದ ಮಹೇಂದ್ರ, ಅನಿಲ್ಕುಮಾರ್, ಮಹೇಶ್, ಸಬರ್ಯಪ್ರಕಾಶ್, ಮಲ್ಲಿಕಾರ್ಜುನ, ರವೀಂದ್ರ, ವಿದ್ಯಾರ್ಥಿಗಳಾದ ಸುನಿಲ್ಕುಮಾರ್, ಜಯರಾಮರೆಡ್ಡಿ, ಸುದರ್ಶನ್, ಸುಜಯ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.