ನಾಳೆ ವಿದ್ಯುತ್ ವ್ಯತ್ಯಯ
ಕೆಜಿಎಫ್: ಮಾಲೂರಿನ ಕೆಪಿಟಿಸಿಎಲ್ 220 ಕೆವಿ ವಿದ್ಯುತ್ ಸರಬರಾಜು ಕೇಂದ್ರಲ್ಲಿ ತ್ರೈ ಮಾಸಿಕ ನಿವರ್ಹಣೆ ಹಿನ್ನಲೆಯಲ್ಲಿ 21ರ ಬೆಳಗ್ಗೆ 9 ರಿಂದ ಸಂಜೆ 5ರ ವರೆಗೆ ಕೆಜಿಎಫ್ ನಗರ, ಬೇತಮಂಗಲ ಹೋಬಳಿ, ಕ್ಯಾಸಂಬಳ್ಳ ಹೋಬಳಿ, ಕಾಮಸಮುದ್ರಂ ಹೋಬಳಿ ಹಾಗೂ ಬೂದಿಕೋಟೆ ಹೋಬಳಿಯಾದ್ಯಂತ ವಿದ್ಯುತ್ ಸರಬರಾಜು ಇರುವುದಿಲ್ಲ. ಸಾರ್ವಜನಿಕರು ಸಹಕರಿಸಬೇಕು ಎಂದು ಬೆಸ್ಕಾಂ ಇಲಾಖೆಯ ಕಾರ್ಯಪಾಲಕ ಅಭಿಯಂತರ ಲಕ್ಷ್ಮೀನಾರಾಯಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾತ್ರಿ ವೇಳೆ ಶಾಲಾ ವಾರ್ಷಿಕೋತ್ಸವಗಳು ಬೇಡ
ಚಿಂತಾಮಣಿ: ಶಾಲಾ ಕಾಲೇಜುಗಳಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮಗಳು ರಾತ್ರಿ ಸಮಯ ನಡೆಸದಂತೆ ಕರವೇ ಕಾರ್ಯಕರ್ತರು ಕೇತ್ರ ಶಿಕ್ಷಣಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.
ವಿವಿಧ ಶಾಲಾ ಕಾಲೇಜುಗಳಲ್ಲಿ ನಡೆಯುವ ವಾರ್ಷಿಕೋತ್ಸವ ಕಾರ್ಯಕ್ರಮಗಳು ರಾತ್ರಿ ಸಮಯ ನಡೆಯುತ್ತಿರುವುದರಿಂದ ಸರಗಳ್ಳತನ, ಹೆಣ್ಣು ಮಕ್ಕಳ ಮೇಲೆ ಲೈಂಗಿಕ ಕಿರುಕುಳ ನಡೆಯುವ ಸಂಭವವಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ಕಡ್ಡಾಯವಾಗಿ ವಾರ್ಷಿಕೋತ್ಸವ ಕಾರ್ಯಕ್ರಮಗಳನ್ನು ಹಗಲಿನಲ್ಲೇ ನಡೆಸಲು ತಾಲೂಕು ಅಧ್ಯಕ್ಷ ಅಂಬರೀಷ್, ಜಿಲ್ಲಾ ಖಜಾಂಚಿ ನಾಗರಾಜ್, ಉಪಾಧ್ಯಕ್ಷ ದೇವರಾಜ್, ಕೃಷ್ಣಾರೆಡ್ಡಿ, ಸಿ.ಡಿ. ಶಂಕರ್ ಮತ್ತಿತರರು ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

