ಕೋಲಾರ

ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಿ: ಚಿನ್ನಪ್ಪ

Published On :

ಚಿಕ್ಕಬಳ್ಳಾಪುರ: ಆರೋಗ್ಯವನ್ನು ಕಾಪಾಡಿಕೊಂಡು ಉತ್ತಮ ಜೀವನ ಸಾಗಿಸಬೇಕೆಂದು ಜಿಪಂ ಅಧ್ಯಕ್ಷ ಎಸ್.ಎನ್. ಚಿನ್ನಪ್ಪ ತಿಳಿಸಿದರು.
ನಗರದ ಅಂಬೇಡ್ಕರ್ ಭವನದಲ್ಲಿ ಆಯುಷ್ ಇಲಾಖೆ ಹಾಗೂ ಶಿರಸಿ ನಿಸರ್ಗ ಟ್ರಸ್ಟ್ನಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ಆಯುಷ್ ವಿಚಾರ ಸಂಕಿರಣದಲ್ಲಿ ಮಾತನಾಡಿ, ಒಳ್ಳೆಯ ಜೀವನ ಶೈಲಿಯಿಂದ ಆರೋಗ್ಯಕರ ಜೀವನ ನಡೆಸಲು ಸಾಧ್ಯವಾಗುತ್ತದೆ. ಇದರಿಂದ ಪ್ರತಿಯೊಬ್ಬರು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಒತ್ತು ಕೊಡಬೇಕು ಎಂದರು.
ಪ್ರಸ್ತುತ ಒತ್ತಡದ ಜೀವನ ಹೆಚ್ಚಾಗಿದೆ. ಗಾಳಿ, ನೀರು, ಆಹಾರ ಮತ್ತು ಜೀವನ ಶೈಲಿ ಬದಲಾಗಿದೆ. ಇದರಿಂದ ಆರೋಗ್ಯ ಸಮಸ್ಯೆ ಹೆಚ್ಚಾಗಿ ಕಂಡು ಬಂದು ಜನರು ತೊಂದರೆ ಅನುಭವಿಸುತ್ತಿದ್ದಾರೆ. ಇದನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಬೇಕಾಗಿದ್ದು ನಮ್ಮ ಸುತ್ತಮುತ್ತಲಿನ ಪರಿಸರದ ಸಂರಕ್ಷಣೆ, ಸ್ವಚ್ಛತೆಗೆ ಆದ್ಯತೆ ಕೊಟ್ಟರೆ ಸರ್ಮಪಕವಾಗಿ ಆರೋಗ್ಯಕರ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದರು.
ನಮ್ಮ ದೇಹ ಪ್ರಕೃತಿಗೆ ಅನುಗುಣವಾಗುವಂತೆ ಆಹಾರ, ವೈದ್ಯಕೀಯ ಪದ್ಧತಿಯನ್ನು ನಾವು ಅನುಸರಿಸಬೇಕು. ಅದೇ ರೀತಿ ಅಲೋಪತಿಗಿಂತಹ ಆಯುರ್ವೇದ ಪದ್ಧತಿಯಿಂದ ಅನೇಕ ಕಾಯಿಲೆಗಳನ್ನು ಪರಿಣಾಮಕಾರಿಯಾಗಿ ಗುಣಪಡಿಸಲು ಸಾಧ್ಯ ಎಂದರು. ನಿವೃತ್ತ ಪ್ರಾಚಾರ್ಯ ಶ್ರೀನಿವಾಸ್ ಮಾತನಾಡಿ, ಆಹಾರ ಪದ್ಧತಿಯಿಂದ ಅನೇಕ ರೋಗಗಳನ್ನು ಗುಣಪಡಿಸಬಹುದಾಗಿದ್ದು ಇದರಿಂದ ಆಹಾರದಲ್ಲಿ ಸಮತೋಲನ ಕಾಯ್ದುಕೊಳ್ಳುವುದು ಬಹು ಮುಖ್ಯ ಎಂದರು.
ಜಿಲ್ಲಾ ಆಯುಷ್ ಅಧಿಕಾರಿ ಡಿ. ಸನಾವುಲ್ಲಾ ಮಾತನಾಡಿ, ಆಯುರ್ವೇದ ಪದ್ಧತಿಯಿಂದ ರೋಗಿಯನ್ನು ನಿಧಾನವಾಗಿಯಾದರೂ ಸಂಪೂರ್ಣವಾಗಿ ಗುಣಪಡಿಸಬಹುದು.
 ಆಯುರ್ವೇದದ ಬಗ್ಗೆ ಜನರಿಗೆ ಅರಿವು ಉಂಟುಮಾಡುವುದು ಈ ಶಿಬಿರದ ಮುಖ್ಯ ಉದ್ದೇಶ ಆರೋಗ್ಯಕರ ಜೀವನ ಶೈಲಿ ಅಳವಡಿಸಿಕೊಂಡರೆ ಖಾಯಿಲೆಗಳಿಂದ ದೂರ ಉಳಿಯಬಹುದೆಂದರು. ಡಾ. ವೆಂಕಟರಮಣ ಹೆಗಡೆ, ವಾರ್ತಾ ಇಲಾಖೆ ಸಹಾಯಕ ನಿರ್ದೇಶಕಿ ಕೆ.ಎನ್. ಕವನ ಮಾತನಾಡಿದರು. ಕಾರ್ಯಕ್ರಮದಲ್ಲಿ ಆಯುಷ್ ಇಲಾಖೆಯ ಎಪಿಒ ತಿಮ್ಮಪ್ಪ, ಆಯುಷ್ ಕಾರ್ಯಕ್ರಮಾಧಿಕಾರಿ ಲಕ್ಷ್ಮೀನಾರಾಯಣ ಶಣ್ಯೆ ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.