ಕೋಲಾರ

ಚಿಲ್ಲರೆ ಅಂಗಡಿಯಲ್ಲಿ ಮದ್ಯ ಮಾರಾಟ: ದೂರು

Published On :

ಕೋಲಾರ: ಬಂಗಾರಪೇಟೆ ತಾಲೂಕಿನ ಗ್ರಾಮೀಣ ಭಾಗದಲ್ಲಿ ಚಿಲ್ಲರೆ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದು, ಇದಕ್ಕೆ ಅಧಿಕಾರಿಗಳೇ ಕುಮ್ಮಕ್ಕು ನೀಡುತ್ತಿದ್ದಾರೆಂದು ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ಬಣಿ ಶಿವಪ್ಪ ಆರೋಪಿಸಿದ್ದಾರೆ.
ಅವರು ಅಬಕಾರಿ ಆಯುಕ್ತರಿಗೆ ಮನವಿ ಅರ್ಪಿಸಿ ಮಾತನಾಡಿ, ಗ್ರಾಮೀಣ ಚಿಲ್ಲರೆ ಅಂಗಡಿಗಳಿಗೆ ಬಾರ್ ಮಾಲೀಕರೇ ಬೈಕ್, ಆಟೋಗಳಲ್ಲಿ ಮದ್ಯ ಸಾಗಿಸಿ ಮಾರಾಟ ಮಾಡುವಂತೆ ಪ್ರೇರೇಪಿಸುತ್ತಿದ್ದು, ಇದರಿಂದಾಗಿ ಹಾಡಹಗಲೇ ರೈತರು ಹಾಗೂ ಯುವಕರು ಮದ್ಯವ್ಯಸನಿಗಳಾಗಿ ಪ್ರತಿನಿತ್ಯ ಜಗಳವಾಡುತ್ತಿರುತ್ತಾರೆ. ಇದರಿಂದಾಗಿ ಮಹಿಳೆಯರು ಮತ್ತು ಮಕ್ಕಳು ಓಡಾಡಲಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.
ಜಿಲ್ಲಾ ಸಂಘಟನಾ ಕಾರ್ಯದರ್ಶಿ ಜಿ. ನಾರಾಯಣಸ್ವಾಮಿ, ಜಿಲ್ಲಾ ಉಪಾಧ್ಯಕ್ಷ ಚಂದ್ರಶೇಖರ್, ಬಂಗಾರಪೇಟೆ ತಾಲೂಕು ಅಧ್ಯಕ್ಷ ಟಿ.ಎನ್. ರಾಮೇಗೌಡ, ತಾಲೂಕು ಪ್ರಧಾನ ಕಾರ್ಯದರ್ಶಿ ಚಲಪತಿ, ಬೂದಿಕೋಟೆ ಹೋಬಳಿ ಅಧ್ಯಕ್ಷ ರಘುನಾಥ್, ವಾನರಾಶಿ ಮುನಿಸ್ವಾಮಿಗೌಡ, ಲಕ್ಷ್ಮಣ, ನೆರ್ನಹಳ್ಳಿ ನಾರಾಯಣಪ್ಪ ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.