ಕೋಲಾರ

5ನೇ ದಿನಕ್ಕೆ ಕಾಲಿಟ್ಟ ಗ್ರಾಮೀಣ ಅಂಚೆ ನೌಕರರ ಮುಷ್ಕರ

Published On :

ಕೋಲಾರ: ಕಳೆದ ನಾಲ್ಕು ದಿನಗಳಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮುಷ್ಕರ ನಡೆಸುತ್ತಿರುವ ಗ್ರಾಮೀಣ ಅಂಚೆ ನೌಕರರು ಶುಕ್ರವಾರ ನಗರದಲ್ಲಿ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಅಖಿಲ ಭಾರತ ಅಂಚೆ ಗ್ರಾಮೀಣ ನೌಕರರ ಸಂಘದಿಂದ ನಡೆಯುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರದ ಅಂಗವಾಗಿ ನಗರದ ಅಂಚೆ ಅಧೀಕ್ಷಕರ ಕಚೇರಿಯಿಂದ ಮೆರವಣಿಗೆಯಲ್ಲಿ ತೆರಳಿದ ನೌಕರರು ಕೇಂದ್ರ ಸರ್ಕಾರ ಗ್ರಾಮೀಣ ಅಂಚೆ ನೌಕರರ ಬಗ್ಗೆ ಅಸಡ್ಡೆ ತೋರುತ್ತಿದೆ ಎಂದು ಘೋಷಣೆ ಕೂಗಿದರು.
ಕೇಂದ್ರದ 7ನೇ ವೇತನ ಆಯೋಗದ ವ್ಯಾಪ್ತಿಗೆ ನಮ್ಮನ್ನು ಸೇರಿಸಬೇಕು, ಅನುಕಂಪದ ಆಧಾರದ ಮೇಲೆ ನೌಕರಿ ಸೌಲಭ್ಯವನ್ನು ಶೇ.100ರಷ್ಟು ಒದಗಿಸಬೇಕು ಎಂದು ಆಗ್ರಹಿಸಿದರು. ಪೋಸ್ಟ್ಮ್ಯಾನ್ ಮತ್ತು ಎಂಟಿಎಸ್ಗಳ ಶೇ.25 ರಷ್ಟು ಹುದ್ದೆಗಳನ್ನು ಸೇವಾ ಹಿರಿತನದ ಆಧಾರದ ಮೇಲೆ ಬಡ್ತಿ ಕೊಡುವುದು, ಹೊರ ಗುತ್ತಿಗೆ ಆಧಾರದ ಮೇಲೆ ಶೇ.25 ರಷ್ಟು ತೆಗೆದುಕೊಳ್ಳುವುದನ್ನು ನಿಲ್ಲಿಸಿ ಆ ಹುದ್ದೆಗಳಿಗೆ ಗ್ರಾಮೀಣ ಅಂಚೆ ನೌಕರರನ್ನು ತುಂಬುವುದು ಸೇದಿದಂತೆ ಪ್ರಮುಖ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಮುಖಂಡರಾದ ಎನ್. ಕೃಷ್ಣಪ್ಪ, ಎಂ.ಜಿ. ರಮೇಶ್, ವೀರಭದ್ರಪ್ಪ, ತೊಟ್ಲಿ ಕೃಷ್ಣಪ್ಪ, ಮುದುವಾಡಿ ಮೀನಾಕುಮಾರಿ, ಜನ್ನಘಟ್ಟ ಎಂ. ಕಲ್ಯಾಣಿ, ಶಿವ, ರಾಮಚಂದ್ರಪ್ಪ, ರವಿಕುಮಾರ್, ರಮೇಶ್, ಕುಮಾರ್ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.