ಕೋಲಾರ

ಆರ್ಟಿಇ ಕಾಯಿದೆ ಸಮರ್ಪಕ ಜಾರಿಗೆ ಡಿವೈಎಫ್ಐ ಆಗ್ರಹ

Published On :

ಕೋಲಾರ: ತಾಲೂಕಿನ ವಿವಿಧ ಖಾಸಗಿ ಶಾಲೆಗಳಲ್ಲಿ ಕಡ್ಡಾಯ ಶಿಕ್ಷಣ ಹಕ್ಕಿನ ಕಾಯಿದೆ ಸಮರ್ಪಕವಾಗಿ ಜಾರಿಗೆ ಬಂದಿಲ್ಲವೆಂದು ಡಿವೈಎಫ್ಐ ಮುಖಂಡರು ಹಾಗೂ ಪೋಷಕರು ಕೋಲಾರ ಕ್ಷೇತ್ರ ಶಿಕ್ಷಣಾಧಿಕಾರಿ ಜಗದೀಶ್ ಅವರನ್ನು ಭೇಟಿಯಾಗಿ ದೂರು ನೀಡಿದರು.
ಕೋಲಾರ ನಗರದಲ್ಲೇ ಅನೇಕ ಖಾಸಗಿ ಶಾಲೆಗಳಲ್ಲಿ ಆರ್.ಟಿ.ಇ ಕಾಯಿದೆಯಡಿ ಮಕ್ಕಳ ಪ್ರವೇಶ ಪ್ರಕ್ರಿಯೆ ಸರಿಯಾಗಿ ಆಗುತ್ತಿಲ್ಲ, ಪಾರದರ್ಶಕತೆ ಉಲ್ಲಂಘನೆ ಆಗುತ್ತಿದೆ, ಶಿಕ್ಷಣ ಇಲಾಖೆಯ ಅಧಿಕಾರಿಗಳು ಖಾಸಗಿ ಶಾಲೆಗಳೊಂದಿಗೆ ಶಾಮೀಲು ಆಗಿ ಬಡ ಮಕ್ಕಳ ಶಿಕ್ಷಣವನ್ನು ವಂಚಿಸುತ್ತಿದ್ದಾರೆಂದು ಆರೋಪಿಸಿದರು.
ದೂರು ಅಲಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಜಗದೀಶ್ ಅವರು ಲಿಖಿತ ಮೂಲಕ ದೂರು ನೀಡಿದಲ್ಲಿ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಲೋಪ ಕಂಡು ಬಂದಲ್ಲಿ ಪ್ರವೇಶ ಪ್ರಕ್ರಿಯೆ ರದ್ದು ಮಾಡುವುದಾಗಿ ಭರವಸೆ ನೀಡಿದರು.
ನಗರದ ಅನೇಕ ಶಾಲೆಗಳಲ್ಲಿ ಸಮಸ್ಯೆ ಇರುವುದರಿಂದ ಶನಿವಾರ ಡಿವೈಎಫ್ಐ ಮುಖಂಡರು ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಮಧ್ಯಪ್ರವೇಶ ಮಾಡುವಂತೆ ಒತ್ತಾಯಿಸಿಲು ನಿರ್ಧರಿಸಿದ್ದಾರೆ. ಡಿವೈಎಫ್ಐ ಮುಖಂಡರಾದ ವಿಜಯಕೃಷ್ಣ, ವೆಂಕಟರವಣ, ಮಂಜುನಾಥ್, ಯಲ್ಲಪ್ಪ, ಮುನಿರಾಜು, ಹೂವಳ್ಳಿ ನಾಗರಾಜ್ ಇನ್ನಿತರರು ಈ ಸಂದರ್ಭದಲ್ಲಿ ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.