ಕೋಲಾರ

ಗ್ರಾಪಂ ನಿರ್ಲಕ್ಷ್ಯ: ನೀರಿನ ಸಂಪಿಗೆ ಬಿದ್ದು ಬಾಲಕ ಸಾವು

Published On :

ಚಿಂತಾಮಣಿ: ಪಂಚಾಯ್ತಿ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಬಾಲಕ ನೀರಿನ ಸಂಪಿಗೆ ಬಿದ್ದು ಸಾವನ್ನಪ್ಪಿರುವುದಾಗಿ ಆರೋಪಿಸಿ ಪೋಷಕರು ಕೆಂಚಾರ್ಲಹಳ್ಳಿ ಠಾಣೆ ಮುಂದೆ ಪ್ರತಿಭಟನೆ ನಡೆಸಿದರು.
ತಾಲೂಕಿನ ಮುರುಗಮಲ್ಲ ಗ್ರಾಪಂ ನೂತನ ಕಟ್ಟಡದ ಬಳಿ ತೆರೆದ ನೀರಿನ ಸೊಂಪುನಲ್ಲಿ ಬಾಲಕ ಖಾದಿರ್(3) ಬಿದ್ದು ಸಾವನ್ನಪ್ಪಿದ್ದ ಘಟನೆ ಶುಕ್ರವಾರ ನಡೆದಿದೆ.
ಕಟ್ಟಡದ ನಿರ್ಮಾಣ ಹಂತದಲ್ಲಿದ್ದು, ತೊಟ್ಟಿಗೆ ಮುಚ್ಚಳ ಕಲ್ಪಿಸದೆ ನಿರ್ಲಕ್ಷ್ಯ ತೋರಿದ ಗುತ್ತಿಗೆದಾರ ಹಾಗೂ ಲ್ಯಾಂಡ್ ಆರ್ಮಿ ಅಧಿಕಾರಿಗಳ ಬೇಜವಾಬ್ದಾರಿ ತನದ ವಿರುದ್ಧ ಗ್ರಾಮಸ್ಥರು ಕಿಡಿ ಕಾರಿದರು. ಮೃತ ಬಾಲಕನ ತಂದೆ ಅಲ್ಲಾ ಬಕಾಷ್ ಹಾಗೂ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ಈ ಸಂಬಂಧ ಗ್ರಾಮಸ್ಥರು ಕೆಂಚಾರ್ಲಹಳ್ಳಿ ಠಾಣೆಗೆ ಮುತ್ತಿಗೆ ಹಾಕಿ ನ್ಯಾಯಕ್ಕಾಗಿ ಆಗ್ರಹಿಸಿ ಪೊಲೀಸರಿಗೆ ದೂರು ನೀಡಿದರು. ಕೆಂಚಾರ್ಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




ವಿದ್ಯಾರ್ಥಿ ನಾಪತ್ತೆ
ಚಿಂತಾಮಣಿ: ಶಾಲೆಗೆ ಹೋದ ವಿದ್ಯಾರ್ಥಿ ಮನೆಗೆ ಮರಳಿ ಬರಲಿಲ್ಲವೆಂದು ಪೋಷಕರು ಬಟ್ಲಹಳ್ಳಿ ಠಾಣೆ ಪೊಲೀಸರಿಗೆ ದೂರು ನೀಡಿರುವ ಘಟನೆ ಶುಕ್ರವಾರ ನಡೆದಿದೆ.
ತಾಲೂಕಿನ ಬಟ್ಲಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಎಸ್ಎಸ್ಎಲ್ಸಿ ವಿದ್ಯಾರ್ಥಿ ಶ್ರೀಕಾಂತ್ ಕಳೆದ ಫೆ.17 ರಂದು ಶಾಲೆಗೆ ಹೋದ ವಿದ್ಯಾರ್ಥಿ ನಾಪತ್ತೆಯಾಗಿರುವುದಾಗಿ ವಿದ್ಯಾರ್ಥಿಯ ಸೋದರ ಮಾವ ಗಂಗಾಧರ್ಬಟ್ಲಹಳ್ಳಿ ಠಾಣೆಯಲ್ಲಿ ದೂರು ನೀಡಿದ್ದಾರೆ. ಈತನ ಬಗ್ಗೆ ಸುಳಿವು ಸಿಕ್ಕಿದ್ದಲ್ಲಿ ಮೊ- 7760856514 ಮತ್ತು ಬಟ್ಲಹಳ್ಳಿ ಠಾಣೆಯ 08154-247265 ನಂಬರಿಗೆ ಕರೆ ಮಾಡಲು ಕೋರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.