ಪೋಲಿಯೋ ಲಸಿಕಾ ಅಭಿಯಾನ
ಕೋಲಾರ: ದೇಶಾದ್ಯಂತ ಫೆ.23 ರಂದು ನಡೆಯಲಿರುವ ಪೋಲಿಯೋ ಲಸಿಕಾ ಅಭಿಯಾನದ ಪೂರ್ವಭಾವಿ ಸಭೆಯಲ್ಲಿ ಜಿಪಂ ಕಾರ್ಯನಿರ್ವಹಣಾಧಿಕಾರಿ ವಿನೋತ್ ಪ್ರಿಯಾ ಪ್ರಚಾರ ಸಾಮಗ್ರಿಗಳನ್ನು ಬಿಡುಗಡೆ ಮಾಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪೋಲಿಯೋ ಲಸಿಕಾ ಅಭಿಯಾನ ದೇಶದಲ್ಲಿ ಯಶಸ್ವಿಯಾಗಿದ್ದು, ಪೋಲಿಯೋ ಮುಕ್ತ ರಾಷ್ಟ್ರವಾಗಿ ಘೋಷಣೆಯಾಗಿರುವುದು ಸಂತಸದ ವಿಷಯವಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಹೆಚ್ಚುವರಿ ಎಸ್ಪಿ ಜಮೀಸ್ ಖಾನ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ರಮೇಶ್ ಬಾಬು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಫಯಾಜ್ಖಾನ್, ರೋಟರಿ ಅಧ್ಯಕ್ಷ ಗೋಪಾಲಾಕೃಷ್ಣಾರೆಡ್ಡಿ, ಲಸಿಕಾ ಅಭಿಯಾನದ ಸಂಚಾಲಕ ವಿ.ಪಿ. ಸೋಮಶೇಖರ್ ಇದ್ದರು.
ವೇತನಕ್ಕೆ ಒತ್ತಾಯಿಸಿ ಇಂದು ಶಿಕ್ಷಕರ ಧರಣಿ
ಕೋಲಾರ: ಕಳೆದ ಎರಡು ತಿಂಗಳಿಂದ ಜಿಲ್ಲೆಯ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ವೇತನ ಇನ್ನೂ ಕೈ ಸೇರದ ಹಿನ್ನೆಲೆಯಲ್ಲಿ ಹಾಗೂ ಮೂರು ತಿಂಗಳಿಗೆ ಅನುದಾನ ನಿಗದಿ ಆಗಿರುವುದನ್ನು ಖಂಡಿಸಿ ಫೆ.22ರ ಶನಿವಾರ ಮಧ್ಯಾಹ್ನ 1 ಗಂಟೆಗೆ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿ ಮುಂದೆ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟಶಿವಪ್ಪ ತಿಳಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು ಸಕಾಲಕ್ಕೆ ಸಂಬಳವಿಲ್ಲದೆ ಜೀವನ ನಡೆಸಲು ದುಸ್ತರವಾಗಿದ್ದು, ಪ್ರತಿ ತಿಂಗಳು ಕಡ್ಡಾಯವಾಗಿ ವೇತನ ಪಾವತಿಗೆ ಕ್ರಮಕೈಗೊಳ್ಳುವಂತೆ ಅನೇಕ ಬಾರಿ ಸಂಬಂಧಪಟ್ಟವರಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜವಾಗಿಲ್ಲವೆಂದು ಆರೋಪಿಸಿದ್ದಾರೆ. ಈ ಧರಣಿಯಲ್ಲಿ ರಾಜ್ಯ ಪರಿಷತ್ ಸದಸ್ಯರು ಹಾಗೂ ಜಿಲ್ಲಾ ನೌಕರರ ಸಂಘದ ಉಪಾಧ್ಯಕ್ಷ ಎಂ. ನಾಗರಾಜ್, ಜಂಟಿ ಕಾರ್ಯದರ್ಶಿ ಎಂ.ಎನ್. ಶ್ರೀನಿವಾಸಮೂರ್ತಿ, ಉಪಾಧ್ಯಕ್ಷ ಕೆ.ಟಿ.ನಾಗರಾಜ್ ಹಾಗೂ ಜಿಲ್ಲಾ ನೌಕರರ ಸಂಘದ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದು ಶಿಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ವೆಂಕಟಶಿವಪ್ಪ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

