ದೊಡ್ಡಬಳ್ಳಾಪುರಕ್ಕೆ ಬರಲಿದ್ದಾರೆ ರಾಜನಾಥಸಿಂಗ್
ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಸಮಾವೇಶ ದೊಡ್ಡಬಳ್ಳಾಪುರದ ಭಗತ್ಸಿಂಗ್ ಕ್ರೀಡಾಂಗಣದಲ್ಲಿ ನಡೆಯಲಿದ್ದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಜನಾಥಸಿಂಗ್ ಭಾಗವಹಿಸಲಿದ್ದಾರೆ ಎಂದು ಮಾಜಿ ಸಚಿವ ಬಿ.ಎನ್. ಬಚ್ಚೇಗೌಡ ಹೇಳಿದರು.
ಇಲ್ಲಿನ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಮೋದಿ ಮೇನಿಯಾ ಇಡೀ ದೇಶದಲ್ಲಿ ಸಂಚಲನೆ ಮೂಡಿಸಿದೆ. ಜನ ಬದಲಾವಣೆ ಬಯಸಿದ್ದು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಚಂಡ ಗೆಲವಿನೊಂದಿಗೆ ಮೋದಿ ಪ್ರಧಾನಿಯಾಗುವುದು ನಿಶ್ಚಿತ. ಈ ಹಂತದಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದ ಎಲ್ಲ 8 ತಾಲೂಕುಗಳಲ್ಲೂ ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನು ಸಂಘಟಿಸುವ ಕೆಲಸಗಳು ನಡೆಯುತ್ತಿವೆ. ಇಡೀ ಕ್ಷೇತ್ರದ ಕೇಂದ್ರದಂತಿರುವ ದೊಡ್ಡಬಳ್ಳಾಪುರದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ನೇತೃತ್ವದಲ್ಲಿ ಸಮಾವೇಶ ನಡೆಯುತ್ತಿದೆ. ರಾಜ್ಯ ಮುಖಂಡರಾದ ಬಿ.ಎಸ್.ಯಡಿಯೂರಪ್ಪ, ಡಿ.ವಿ. ಸದಾನಂದಗೌಡ, ಆರ್. ಅಶೋಕ್ ಸೇರಿದಂತೆ ಅನೇಕರು ಭಾಗವಹಿಸಲಿದ್ದಾರೆ. ಸುಮಾರು 25 ಸಾವಿರಕ್ಕೂ ಅಧಿಕ ಜನ ಸೇರುವ ನಿರೀಕ್ಷೆ ಇದೆ ಎಂದರು.
ನುಡಿದಂತೆ ನಡೆದವರು ಎಂಬ ಪುಸ್ತಕ ಬಿಡುಗಡೆ ಮಾಡಿರುವ ಕೇಂದ್ರ ಸಚಿವ ವೀರಪ್ಪ ಮೊಯ್ಲಿ ಪುಸ್ತಕದ
ತುಂಬ ಸುಳ್ಳುಗಳ ದಾಖಲೆ ಸೃಷ್ಟಿಸಿದ್ದಾರೆ. ಬಿಜೆಪಿಯ ಯೋಜನೆಗಳನ್ನು ತಮ್ಮ ಸಾಧನೆಯೆಂದು ಬಿಂಬಿಸಿಕೊಂಡಿದ್ದಾರೆ. ನೀರು ಕೊಡುತ್ತೇನೆಂದು ಹೇಳಿ ಏನೂ ಮಾಡದ ಮೊಯ್ಲಿ, ಚುನಾವಣೆ ಗಿಮಿಕ್ ಪ್ರದರ್ಶಿಸುತ್ತಿದ್ದಾರೆ. ಎತ್ತಿನಹೊಳೆ ಮುಂದಿಟ್ಟುಕೊಂಡು ಮತ್ತೆ ಮತ ಕೇಳೋದು ನಾಚಿಕೆಗೇಡು ಎಂದು ಜರಿದರು.
ಮಾಜಿ ಶಾಸಕ ಜೆ.ನರಸಿಂಹಸ್ವಾಮಿ ಮಾತನಾಡಿ, ನುಡಿದಂತೆ ನಡೆದವರು ಬಿಜೆಪಿ ಸರ್ಕಾರದವರೇ ಹೊರತು ಯುಪಿಎ ಸರ್ಕಾರ ಅಲ್ಲ. ಇದು ಜನರಿಗೂ ಗೊತ್ತು ಎಂದರು.
ಸಭೆಯಲ್ಲಿ ರೇಷ್ಮೆ ಮಾರಾಟ ಮಂಡಲಿ ಮಾಜಿ ಅಧ್ಯಕ್ಷ ಕೆ.ಎಂ. ಹನುಮಂತರಾಯಪ್ಪ, ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ಸಿ. ನಾರಾಯಣಸ್ವಾಮಿ, ಜಿ.ಪಂ ಉಪಾಧ್ಯಕ್ಷ ಎನ್. ಹನುಮಂತೇಗೌಡ ಮತ್ತಿತರರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

