ಕಲಾವಿದರಿಗೆ ಮಾಸಾಶನ: ಮುನಿಯಪ್ಪ ಭರವಸೆ
ಕೋಲಾರ: ಜನಪದ ಕಲೆ ಮತ್ತು ಸಂಸ್ಕೃತಿ ಉಳಿಯಬೇಕಾದರೆ ಎಲ್ಲಾ ಕಲಾವಿದರಿಗೆ ಮಾಸಾಶನ ಅತ್ಯವಶ್ಯಕ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಯೋಜನೆ ಜಾರಿಗೆ ತರಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಕೇಂದ್ರ ಸರ್ಕಾರದ ಸಣ್ಣ,ಅತಿ ಸಣ್ಣ ಕೈಗಾರಿಕೆಗಳ ರಾಜ್ಯ ಸಚಿವ ಕೆ.ಎಚ್. ಮುನಿಯಪ್ಪ ಭರವಸೆ ನೀಡಿದರು.
ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾಡಳಿತ ವತಿಯಿಂದ ಭಾನುವಾರ ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿಯಲ್ಲಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಜನಪರ ಉತ್ಸವ ಕಾರ್ಯಕ್ರಮ ಉದ್ಟಾಟಿಸಿ ಮಾತನಾಡಿದರು.
ಜನಪದ ಕಲಾವಿದರಿಗೆ ಪ್ರೋತ್ಸಾಹ ನೀಡಲು ಕಾಂಗ್ರೆಸ್ ನೇತೃತ್ವದ ಸರ್ಕಾರ ಬದ್ಧವಾಗಿದೆ. ರಾಜ್ಯದಲ್ಲಿ ಕಳೆದ 5 ವರ್ಷಗಳಿಂದ ನಿಮ್ಮನ್ನು ವಿಚಾರಿಸುವವರು ಯಾರು ಇರಲಿಲ್ಲ,ಕಲಾವಿದರು ಉಳಿದರೆ ಮಾತ್ರ ಜನಪದ ಕಲೆಗಳನ್ನು ಉಳಿಸಿಕೊಳ್ಳಲು ಸಾಧ್ಯವೆಂಬ ಕಾರಣದಿಂದ ರಾಜ್ಯ ಮಟ್ಟದ ಜನಪರ ಉತ್ಸವ ನಡೆಸಲಾಗುತ್ತಿದೆ ಎಂದರು. ಜನಪದ ಉತ್ಸವ ಉದ್ಟಾಟನಾ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಮಾಶ್ರೀ, ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್. ಆಂಜನೇಯಲು, ಕೋಲಾರ ಕ್ಷೇತ್ರದ ಶಾಸಕ ಆರ್.ವರ್ತೂರ್ ಪ್ರಕಾಶ್, ಸೇರಿದಂತೆ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳನ್ನು ಆಹ್ವಾನಿಸಲಾಗಿತ್ತಾದರೂ ಕೇಂದ್ರ ಸಚಿವರು ಮತ್ತು ವಿಧಾನ ಪರಿಷತ್ ಸದಸ್ಯ ನಜೀರ್ ಅಹಮ್ಮದ್ ಹೊರತುಪಡಿಸಿ ಬೇರೆ ಯಾರೂ ಬಂದಿರಲಿಲ್ಲ.
ಬಳ್ಳಾರಿಯ ಮಹಿಳಾ ತಂಡ ಡೊಳ್ಳು ಕುಣಿತ, ಚಿತ್ರದುರ್ಗದ ಮಹಿಳೆಯರ ತಮಟೆ ಮತ್ತು ಸಾಗರದ ಮಹಿಳೆಯರ ಡೊಳ್ಳು ಕುಣಿತ ಕೋಲಾರ ಜನರ ಮನ ಸೆಳೆಯಿತು. ಕನ್ನಡ ಮತ್ತು ಸಂಸ್ಕತಿ ಇಲಾಖೆ ನಿರ್ದೇಶಕ ಬಿ.ಟಿ. ಮುನಿರಾಜು, ಜಿಪಂ ಸಿಇಒ ವಿನೋತ್ಪ್ರಿಯ್, ಜಿಲ್ಲಾ ಎಸ್ಪಿ ಡಾ.ರಾಮ್ನಿವಾಸ್ ಸಫೆಟ್, ನಗರಸಭೆ ಸದಸ್ಯ ಪ್ರಸಾದ್ ಬಾಬು, ಬೆಳಗಾನಹಳ್ಳಿ ಮುನಿವೆಂಕಟಪ್ಪ, ಟಿ. ವಿಜಿಕುಮಾರ್, ಮಹಮದ್ ಇಕ್ಬಾಲ್, ಮುದುವಾಡಿ ಮಂಜುನಾಥ್ ಇದ್ದರು. ಜಿಲ್ಲಾಧಿಕಾರಿ ಡಿ.ಕೆ. ರವಿ ಸ್ವಾಗತಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

