ಕಾನೂನಿನ ಅರಿವು ಎಲ್ಲರಿಗೂ ಅಗತ್ಯ
ಚಿಕ್ಕಬಳ್ಳಾಪುರ: ಶಿಕ್ಷಣದ ಜೊತೆಗೆ ಕಾನೂನಿನ ಬಗ್ಗೆ ಸಮರ್ಪಪಕವಾಗಿ ತಿಳಿದುಕೊಳ್ಳುವುದರಿಂದ ಎದುರಾಗುವ ಸಮಸ್ಯೆಗಳನ್ನು ಸುಲಭವಾಗಿ ಬಗೆಹರಿಸಿಕೊಳ್ಳುವುದಲ್ಲದೇ ಅನ್ಯಾಯ, ದೌರ್ಜನ್ಯಗಳಿಂದ ಮುಕ್ತರಾಗಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎ.ಎಸ್. ಬೆಳ್ಳುಂಕೆ ಅಭಿಪ್ರಾಯಪಟ್ಟರು.
ನಗರದ ಜಿಲ್ಲಾ ನ್ಯಾಯಾಲಯದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಕೀಲರ ಸಂಘ ಆಯೋಜಿಸಿದ್ದ ಸ್ವಯಂ ಕಾನೂನು ಸಹಾಯಕರ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಮಾಜದಲ್ಲಿ ಶೋಷಣೆಯಿಂದ ಮುಕ್ತರಾಗಲು ಮತ್ತು ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ದೊರೆಯುವಂತಾಗಲು ಕಾನೂನಿನ ಅರಿವು ಅಗತ್ಯವಾಗಿರುವುದನ್ನು ಅರಿತು ಕಾನೂನು ಜಾಗೃತಿ ಕಾರ್ಯಕ್ರಮಗಳನ್ನು ಹೆಚ್ಚಿಗೆ ಹಮ್ಮಿಕೊಳ್ಳಬೇಕು ಎಂದರು.
ಕಾನೂನಿನ ನೆರವನ್ನು ಉಚಿತವಾಗಿ ಜನರು ಪಡೆದುಕೊಳ್ಳಬಹುದು. ತಮಗೆ ಅನ್ಯಾಯವಾದಾಗ ಕಾನೂನು ಸೇವೆಗಳ ಪ್ರಾಧಿಕಾರವನ್ನು ಸಂಪರ್ಕಿಕಿಸಿದಾಗ ಅಗತ್ಯವಿರುವ ಸಲಹೆ ನೀಡಲಾಗುತ್ತದೆ. ಸ್ವಯಂ ಕಾನೂನು ಸಹಾಯಕರು ಗ್ರಾಮೀಣ ಭಾಗಗಳಿಗೆ ತೆರಳಿ ಜನರಲ್ಲಿ ಜಾಗೃತಿ ಮೂಡಿಸಲಿದ್ದಾರೆ. ಇದಕ್ಕಾಗಿ ಸರ್ಕಾಕಾರದ ವಿವಿಧ ಯೋಜನೆಗಳು, ಆದೇಶಗಳು, ಶಾಸನಗಳು, ಸಾರ್ವವಜನಿಕ ಹಿತಾಸಕ್ತಿ ಮೊಕದ್ದಮೆಗಳು, ಜನತಾ ನ್ಯಾಯಾಲಯಗಳು, ಪರ್ಯಾಯಾಯ ವಿವಾದ ಪರಿಹಾರ ವ್ಯವಸ್ಥೆ ಸೇರಿದಂತೆ ಕಾನೂನು ವಿಷಯಕ್ಕೆ ಸಂಬಂಧಪಟ್ಟಂತೆ ಕಾನೂನು ಸಹಾಯಕರಿಗೆ ತರಬೇತಿಯನ್ನು ನೀಡಲಾಗುತ್ತಿದೆ ಎಂದರು. ಕಾನೂನು ಸಹಾಯಕರು ಜನರಲ್ಲಿ ಕಾನೂನಿನ ಬಗ್ಗೆ ಅರಿವು ಮೂಡಿಸುವ ಕೆಲಸವನ್ನು ಪ್ರಾಮಾಣಿಕವಾಗಿ ನಿರ್ವಹಿಸಿ ಜನರು ಎಚ್ಚೆತ್ತುಕೊಳ್ಳುವಂತೆ ಮಾಡಬೇಕೆಂದು ಸಲಹೆ ನೀಡಿದರು.
ವಕೀಲರ ಸಂಘದ ಅಧ್ಯಕ್ಷ ಕೆ.ಎಚ್. ತಮ್ಮೇಗೌಡ ಮಾತನಾಡಿ, ಬಹಳಷ್ಟು ಜನರು ಕಾನೂನಿನ ಬಗ್ಗೆ ತಿಳಿದುಕೊಂಡಿರುವುದಿಲ್ಲ. ಇದರಿಂದ ಕಾನೂನಿನ ಮಹತ್ವ ತಿಳಿಯದೇ ಸಾಕಷ್ಟು ಕಡೆ ಅನ್ಯಾಯ, ದೌರ್ಜಜನ್ಯಕ್ಕೆ ಸಿಲುಕಿಕೊಳ್ಳುತ್ತಾರೆ. ಕಾನೂನು ಬಲ್ಲ ಕೆಲವರು ಅಮಾಯಕರಿಗೆ ಕಿರುಕುಳ ನೀಡುತ್ತಾರೆ. ಆದರೆ, ಕಾನೂನಿನ ಬಗ್ಗೆ ಯಾರು ಬೇಕಾದರೂ ತಿಳಿದುಕೊಳ್ಳಬಹುದು. ಈ ಮೂಲಕ ತೊಂದರೆಯಾದಾಗ ಪ್ರಶ್ನಿಸಿ ನ್ಯಾಯವನ್ನು ಪಡೆಯಬಹುದೆಂದರು. ಕಾರ್ಯಕ್ರಮದಲ್ಲಿ ನ್ಯಾಯಾಧೀಶರಾದ ಎಸ್. ಶೋಭ, ನಳಿನಿ, ಅನಿತಾ, ವಕೀಲರ ಸಂಘದ ಕಾರ್ಯದರ್ಶಿ ಪಾಪಿರೆಡ್ಡಿ, ತರಬೇತುದಾರರಾದ ವಕೀಲ ಕೆ.ಸಿ.ಪ್ರಕಾಶ್, ಬಾಬಾಫಕೃದ್ಧೀನ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

