ಕೋಲಾರ, ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಕ್ರಮ ಸಿಬಿಐ ತನಿಖೆಗೆ ಆಗ್ರಹ
ವಿಧಾನಪರಿಷತ್: ಕೋಲಾರ ಮತ್ತು ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ಗಳ ಅಕ್ರಮ ಕುರಿತಂತೆ ಸಿಬಿಐ ತನಿಖೆ ಆಗಬೇಕು ಎಂದು ಬಿಜೆಪಿಯ ಡಿ.ಎಸ್.ವೀರಯ್ಯ ಹಾಗೂ ವೈ.ಎ.ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ.
ಇವೆರಡು ಜಿಲ್ಲೆಗಳಲ್ಲಿ 181 ಸಹಕಾರ ಬ್ಯಾಂಕ್ಗಳಿವೆ. ಕೇಂದ್ರ ಸರ್ಕಾರದ ಕೃಷಿ ಸಾಲ ಮನ್ನಾ ಯೋಜನೆಗೆ 105.08 ಕೋಟಿ ಬಿಡುಗಡೆಯಾಗಿತ್ತು. ಈ ಹಣವನ್ನು ಜಮಾ ಮಾಡಿಕೊಂಡಿರುವ ಬ್ಯಾಂಕ್ನ ಅಧಿಕಾರಿಗಳು ರೈತರ ಖಾತೆಗೆ ಪಾವತಿ ಮಾಡಿಲ್ಲ. ಇದಲ್ಲದೇ ಡಿಸಿಸಿ ಬ್ಯಾಂಕ್ಗಳ ಪುನಶ್ಚೇತನಕ್ಕೆ ನೀಡಿರುವ 78 ಕೋಟಿ ಅನುದಾನವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಇದರಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳು ಶಾಮೀಲಾಗಿದ್ದಾರೆ. ಸಿಬಿಐ ತನಿಖೆ ನಡೆಸಿ ಕಠಿಣ ಕ್ರಮ ಜರುಗಿಸಬೇಕು ಎಂದು ವೀರಯ್ಯ ಒತ್ತಾಯಿಸಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಲಾಖಾ ವಿಚಾರಣೆ ನಡೆಯುತ್ತಿದೆ. ವರದಿ ಬಂದ ಬಳಿಕ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಸಹಕಾರ ಸಚಿವ ಎಚ್.ಎಸ್.ಮಹಾದೇವ್ಪ್ರಸಾದ್ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

