ಕೋಲಾರ

ನೈತಿಕತೆ ಕಳೆದುಕೊಳ್ಳದಂತೆ ಕಿವಿಮಾತು

Published On :

ಕೋಲಾರ: ವಿದ್ಯಾರ್ಥಿಗಳು ಓದಿನ ಜತೆಗೆ ನೈತಿಕತೆ ಮೌಲ್ಯಗಳನ್ನು ರೂಡಿಸಿಕೊಳ್ಳಬೇಕೆಂದು ರೇವಾ ಇನ್ಸ್ಟ್ಯೂಟ್ ಆಫ್ ಟೆಕ್ನಾಲಾಜಿ ಕಾಲೇಜಿನ ಪ್ರಾಂಶುಪಾಲ ಡಾ. ರಾಣಾ ಪ್ರತಾಪರೆಡ್ಡಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಕೋಲಾರ ತಾಲೂಕಿನ ತೊರದೇವಂಡಹಳ್ಳಿಯ ಸಿ. ಬೈರೇಗೌಡ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಗ್ರಾಜುಯೇಷನ್ ಡೇ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಓದುವ ಸಮಯದಲ್ಲಿ ಸಚ್ಚಾರಿತ್ರ್ಯದ ಕಡೆಗೆ ಹೆಚ್ಚು ಗಮನ ಕೊಡಬೇಕೆಂದು ತಿಳಿಸಿದರು.
ಬದಲಾಗುತ್ತಿರುವ ಇಂದಿನ ಸಮಾಜದಲ್ಲಿ ವಿದ್ಯಾರ್ಥಿಗಳು ಅನೇಕ ಸೆಳತಗಳಿಗೆ ಒಳಗಾಗಿ ತಮ್ಮ ನೈತಿಕತೆಯನ್ನು ಕಳೆದುಕೊಳ್ಳುತ್ತಿದ್ದಾರೆ. ಆದುದರಿಂದ ವಿದ್ಯಾರ್ಥಿಗಳು ಉತ್ತಮ ಜೀವನದ ನಡವಳಿಕೆಗಳ ಮೂಲಕ ಸತ್ಪ್ರಜೆಗಳಾಗಬೇಕೆಂದು ನುಡಿದರು.
ಚಾರಿತ್ರ್ಯ, ತೇಜಸ್ಸು, ತಿಳುವಳಿಕೆ, ದಕ್ಷತೆ, ಧೈರ್ಯ, ಸಂವಹನಕಲೆ, ಅನುಕಂಪ, ದೃಢತೆ, ಛಲ, ಅನುಸರಣೆ ಮತ್ತು ಕೊಡುಗೆ ಇವೇ ಮೊದಲಾದ ಹತ್ತು ಗುಣಗಳನ್ನು ವಿಜ್ಞಾನ-ತಂತ್ರಜ್ಞಾನದ ಜೊತೆಯಲ್ಲೇ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕೆಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ರೇವಾ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ.ವಿ.ಜಿ. ತಲವಾರ್ರವರು ವಿದ್ಯಾರ್ಥಿಗಳು ನೆಲ್ಸನ್ ಮಂಡೇಲಾ, ಮದರ್ ತೆರೇಸ ಮತ್ತು ಮಹಾತ್ಮ ಗಾಂಧೀಜಿಯವರ ಜೀವನ ಚರಿತ್ರೆಗಳಿಂದ ಪ್ರೇರಿತರಾಗಿ ಅವರಲ್ಲಿನ ಒಳ್ಳೆಯ ಗುಣಗಳನ್ನು ಅಳವಡಿಸಿಕೊಂಡು ಉತ್ತಮ ಜೀವನ ಶೈಲಿಯನ್ನು ತಮ್ಮದಾಗಿಸಿಕೊಳ್ಳಬೇಕೆಂದರು.
ಸಿಬಿಐಟಿಯ ಖಜಾಂಚಿ ಡಾ.ಎ. ಪ್ರಭಾಕರ್ರೆಡ್ಡಿ, ಕಾರ್ಯದರ್ಶಿ ವಿ. ಕೃಷ್ಣಾರೆಡ್ಡಿ, ಟ್ರಸ್ಟಿಗಳಾದ ಎನ್. ಮಂಜುಳಾ, ಬೆಂಗಳೂರಿನ ಬಿ.ಟಿ.ಐ. ಸಂಸ್ಥೆಯ ಪ್ರಾಂಶುಪಾಲ ಡಾ. ಎಚ್.ಎಸ್. ನಂದ, ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.