ಬೇಸಿಗೆಯಲ್ಲಿ ನೀರಿನ ಬವಣೆ ತಪ್ಪಿಸಲು ಸಭೆಯಲ್ಲಿ ನಿರ್ಣಯ
ಕೋಲಾರ: ತಾಲೂಕಿನಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದ ರೀತಿಯಲ್ಲಿ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಲು ಮಂಗಳವಾರ ನಡೆದ ತಾಪಂ ಸಾಮಾನ್ಯ ಸಭೆಯಲ್ಲಿ ನಿರ್ಧರಿಸಲಾಯಿತು.
ತಾಪಂ ಅಧ್ಯಕ್ಷೆ ಭಾಗ್ಯಲಕ್ಷ್ಮೀ ನಾರಾಯಣಮೂರ್ತಿ ಅಧ್ಯಕ್ಷತೆಯಲ್ಲಿ ನಡೆದ ತಾಪಂ ಸಾಮಾನ್ಯ ಸಭೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ನಡೆದ ಚರ್ಚೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಯಿತು. ಸಹಾಯಕ ಎಂಜಿನಿಯರ್ ಮಂಜುನಾಥ್ ಕೈಗೊಂಡಿರುವ ಕ್ರಮಗಳನ್ನು ಸಭೆಗೆ ತಿಳಿಸಿದರು. ಮಳೆಯಿಲ್ಲದೆ ಅಂತರ್ಜಲ ಕುಸಿದಿದ್ದು ಅನೇಕ ಕಡೆ ಕೊಳವೆ ಬಾವಿಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತಿದೆ. ಅನೇಕ ಕಡೆ ಹೊಸದಾಗಿ ಕೊರೆಯಿಸಿದ ಕೊಳವೆ ಬಾವಿಗಳು ವಿಫಲವಾಗುತ್ತಿವೆ ಎಂದು ತಿಳಿಸಿದರು. ಸದಸ್ಯ ರಾಮಕೃಷ್ಣಪ್ಪ ಮಾತನಾಡಿ, ಮುಂದಿನ ದಿನಗಳಲ್ಲಿ ನೀರಿನ ಅಭಾವ ತೀವ್ರವಾಗಿ ಎದುರಾಗಲಿದ್ದು ಅಗತ್ಯವಿರುವ ಕಡೆ ಕೊಳವೆ ಬಾವಿಗಳನ್ನು ಕೊರೆಯಿಸಬೇಕು. ನೀರು ಸಿಗದ ಕಡೆ ಟ್ಯಾಂಕರ್ಗಳ ಮೂಲಕ ನೀರನ್ನು ಸರಬರಾಜು ಮಾಡಬೇಕೆಂದು ಒತ್ತಾಯಿಸಿದರು.
ಜಿಲ್ಲಾ ಕೈಗಾರಿಕಾ ತರಬೇತಿ ಕೇಂದ್ರದ ರವಿಚಂದ್ರ, ಕೃಷಿ ಇಲಾಖೆಯ ಅಧಿಕಾರಿ ಗಾಯಿತ್ರಿ ಇಲಾಖೆಗಳಲ್ಲಿ ಆಗಿರುವ ಸಾಧನೆ ತಿಳಿಸಿದರು. ತೋಟಗಾರಿಕಾ ಇಲಾಖೆಯ ಅಧಿಕಾರಿ ಮಾತನಾಡಿ, ಶಾಲೆಗಳಿಗೆ ಅಲಂಕಾರಿಕ ಗಿಡಗಳನ್ನು ನೀಡುವುದು ರೈತರಿಗೆ ಹಣಬೆ ಬೇಸಾಯದ ಬಗ್ಗೆ ತರಬೇತಿ ನೀಡಿದ್ದು ತೆಂಗಿನ ಗಿಡಗಳನ್ನು ವಿತರಿಸಲಾಗುವುದು ಇದಕ್ಕಾಗಿ 1.60 ಲಕ್ಷ ರು. ಅನುದಾನ ಬಿಡುಗಡೆಯಾಗಿದೆ ಎಂದರು. ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಬರುವ ಆರ್ಟಿಇ ಅಡಿಯಲ್ಲಿ ದಾಖಲಾತಿಗಾಗಿ ಆಯ್ಕೆ ಪ್ರಕ್ರಿಯೆಯಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ಅನೇಕ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದಾಗ, ಬಿಇಒ ಅವರು ದೂರುಗಳು ಬಂದ ಕಡೆ ಪರಿಶೀಲಿಸಿ ಕ್ರಮ ಕೈಗೊಳ್ಳಲು ತಂಡವೊಂದನ್ನು ರಚಿಸಲಾಗಿದೆ ಎಂದು ತಿಳಿಸಿದರು. ಉಪಾಧ್ಯಕ್ಷೆ ಸರಸ್ವತಮ್ಮ, ಕಾರ್ಯನಿರ್ವಹಣಾಧಿಕಾರಿ ಜಾನಕಿರಾಂ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

