ಕೋಲಾರ

ಮಾಸ್ತಿ ಮಾದರಿ ಶಾಲೆ ಪುನರ್ ನಿರ್ಮಾಣಕ್ಕೆ ರು. 4 ಕೋಟಿ

Published On :

ಟೇಕಲ್: ಶಿಕ್ಷಣ ಇಲಾಖೆಯಿಂದ ಮಾಸ್ತಿ ಮಾದರಿ ಶಾಲೆ ಪುನರ್ ನಿರ್ಮಾಣಕ್ಕೆ 4 ಕೋಟಿ ರುಪಾಯಿ ಅನುದಾನ ಬಿಡುಗಡೆಯಾಗುತ್ತಿದೆ ಎಂದು ಶಾಸಕ ಕೆ.ಎಸ್. ಮಂಜುನಾಥಗೌಡ ತಿಳಿಸಿದರು.
ದೇವರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಸೈಕಲ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ತೊರಲಕ್ಕಿ ಮತ್ತು ದೇವರಹಳ್ಳಿ ಶಾಲೆಗಳನ್ನು ಮೇಲ್ದರ್ಜೆಗೇರಿಸುತ್ತಿದ್ದು ಈ ಬಗ್ಗೆ ಶಿಕ್ಷಣ ಇಲಾಖೆಯಲ್ಲಿ ಚರ್ಚಿಸಲಾಗಿದೆ ಎಂದರು.
ತಾಪಂ ಮಾಜಿ ಅಧ್ಯಕ್ಷ ಕೆ.ವೈ. ನಂಜೇಗೌಡ ಮಾತನಾಡಿ, ದೇವರಹಳ್ಳಿ ಶಾಲೆಯ ಮೂಲ ಸೌಕರ್ಯಗಳನ್ನು ನೀಡಲು ಸ್ಥಳದಲ್ಲೆ ಇದ್ದ ನೂಟವೆ ಗ್ರಾಪಂ ಕಾರ್ಯದರ್ಶಿಗೆ ತಿಳಿಸಿದರು. ದೇವರಹಳ್ಳಿ ಶಾಲೆಯಲ್ಲಿ ಓದಿದ ಎಂ. ಸುಧಾಕರಗೆ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಗಳಲ್ಲಿ ಹೆಚ್ಚು ಅಂಕ ಗಳಿಸಿ ಎಂಜಿನಿಯರಿಂಗ್ ವಿಭಾಗದಲ್ಲಿ ಸೇರ್ಪಡೆಯಾಗಿದ್ದು ಆತನಿಗೆ ಶಾಲೆಯಿಂದ ಶಾಲು ಹೊದಿಸಿ ಸನ್ಮಾನಿಸಲಾಯಿತು. ಬಿ.ಜಿ. ಮುನಿಶಾಮಿಗೌಡ, ಜಿಪಂ ಮಾಜಿ ಸದಸ್ಯ ಹನುಮಂತಪ್ಪ ಮಾತನಾಡಿದರು.
ಸಭೆಯಲ್ಲಿ ಕ್ಷೇತ್ರೇನಹಳ್ಳಿ ವೆಂಕಟೇಶ್, ಗ್ರಾಪಂ ಸದಸ್ಯ ಕೃಷ್ಣಪ್ಪ, ತಿಮ್ಮರಾಯಪ್ಪ, ಎನ್.ಟಿ.ಸೋಮಶೇಖರ್, ಸೊಣ್ಣೆಪಲ್ಲಿಯ್ಯಪ್ಪ, ನೂಟವೆ ಗ್ರಾಪಂ ಕಾರ್ಯದರ್ಶಿ ರಮೇಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.