ಕೋಲಾರ

ಆಂಜನೇಯ ವಿರುದ್ಧ ದಲಿತ ಸೇನೆ ಪ್ರತಿಭಟನೆ

Published On :

ಕೋಲಾರ: ಪರಿಶಿಷ್ಟ ಜಾತಿಗೆ ಇನ್ನು 8 ಜಾತಿಗಳನ್ನು ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಹೊರಟಿರುವ ಸಮಾಜ ಕಲ್ಯಾಣ ಇಲಾಖೆಯ ಸಚಿವ ಎಚ್. ಆಂಜನೇಯ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಒತ್ತಾಯಿಸಿ ಕರ್ನಾಟಕ ದಲಿತ ಸಿಂಹ ಸೇನೆ ಪ್ರತಿಭಟನೆ ನಡೆಸಿತು.
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬುಧವಾರ ಧರಣಿ ನಡೆಸಿದ ಸಂಘಟನೆಯ ಕಾರ್ಯಕರ್ತರು ಡಾ.ಬಿ.ಆರ್. ಅಂಬೇಡ್ಕರ್ ನೀಡಿದ ಸಂವಿಧಾನದ ಫಲದಿಂದ ಮೀಸಲು ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆದ್ದು ಸಚಿವರಾಗಿರುವ ಆಂಜನೇಯ ದಲಿತ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದರು.
ಸಚಿವ ಆಂಜನೇಯಲು ವಿರುದ್ಧವಲ್ಲದೆ, ಸಮಾಜ ಕಲ್ಯಾಣ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ದಲಿತ ನೌಕರರಿಗೆ ಕಳೆದ 8 ತಿಂಗಳಿಂದ ಪಾವತಿ ಆಗದ ವೇತನ ಬಿಡುಗಡೆ ಮಾಡಿಸಬೇಕು, ಇಲಾಖೆಗೆ ಸೇರಿದ ಹಾಸ್ಟೆಲ್‌ಗಳಿಗೆ ಮೂಲ ಸೌಕರ್ಯ, ಪೊಲೀಸ್ ಇಲಾಖೆಯಿಂದ ಆಗುತ್ತಿರುವ ದಲಿತ ಶೋಷಣೆ ತಡೆಯುವಂತೆ  ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಸಂಘಟನೆ ಮುಖಂಡರಾದ ವಿ.ನಾರಾಯಣಸ್ವಾಮಿ, ಚಿಪ್ಪಸಂದ್ರ ಶ್ರೀನಿವಾಸ್, ಸಿ.ನಾಗೇಶ್, ಮೇಡಿಹಾಳ ಮುನಿ ಆಂಜನೇಯ, ನಾಗನಾಳ ಶಂಕರ್ ಮತ್ತಿತರರು ಇದ್ದರು.
ಪ್ರತಿಭಟನೆಗೆ ಮುನ್ನ ಕೋಲಾರದ ನಚಿಕೇತನ ನಿಲಯದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಯಿತು. ಮೆಕ್ಕೆ ವೃತ್ತದಲ್ಲಿ ಸಚಿವ ಆಂಜನೇಯ ಪ್ರತಿಕೃತಿ ದಹನ ಮಾಡಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.