ಕೋಲಾರ

ಕ್ಯಾಸಂಬಳ್ಳಿಯಲ್ಲಿ ಕಿರು ಸಾಲ ವಿತರಣಾ ಕಾರ್ಯಕ್ರಮ

Published On :

ಕೆಜಿಎಫ್: ಕ್ಷೌರಿಕ ವೃತ್ತಿ ಮತ್ತು ಕಲಾವಿದರಿಗೆ ಕೆಜಿಎಫ್ ವಿಧಾನಸಭಾ ಕ್ಷೇತ್ರ ಗ್ರಾಂತರ ಕ್ಯಾಸಂಬಳ್ಳಿ ಘಟಕದ ಸವಿತಾ ಸಮಾಜ ವತಿಯಿಂದ ಕಿರು ಸಾಲ ಯೋಜನೆ ವಿತರಣಾ ಕಾರ್ಯಕ್ರಮವನ್ನು ಕ್ಯಾಸಂಬಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿ ಸವಿತಾ ಸಮಾಜದ ಜಿಲ್ಲಾಧ್ಯಕ್ಷ ಮರಿಸ್ವಾಮಿ ಹಾಗೂ ಜಿಲ್ಲಾ ಸಂಚಾಲಕ ಮಂಜುನಾಥ್, ತಾಲೂಕಿನ 40 ಮಂದಿ ಬಡ ಕುಟುಂಬದ ಸವಿತಾ ಸಮಾಜ ಜನಾಂಗದವರಿಗೆ ತಲಾ 10 ಸಾವಿರ ಸಾಲವನ್ನು ವಿತರಿಸಿ ಮಾತನಾಡಿದರು. ಕ್ಷೌರಿಕ ಮತ್ತು ಕಲಾವಿದ ಬಂಧುಗಳು ಸಮಾಜದಲ್ಲಿ ಗ್ರಾಮಗಳಲ್ಲಿ ಹಾಗೂ ನಗರ ಮತ್ತು ಮಹಾನಗರಗಳಲ್ಲಿ ವಾಸಿಸುತ್ತಿರುವ ಜನಾಂಗದವರು ಅನುಭವಿಸುತ್ತಿರುವ ಅನೇಕ ಸಮಸ್ಯೆಗಲಿಗೆ ಪರಿಹಾರ ಕಲ್ಪಿಸಿಕೊಳ್ಳಲು ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಸವಿತಾ ಸಮಾಜದ ವತಿಯಿಂದ ಕಡಿಮೆ ಬಡ್ಡಿ ದರದಲ್ಲಿ 10 ಸಾವಿರ ಕಿರು ಸಾಲ ಯೋಜನೆಯನ್ನು ಹಮ್ಮಿಕೊಂಡಿದ್ದು ಅರ್ಹಫಲಾನುಭವಿಗಳು ಇದರ ಸದುಪಯೋಗ ಮಾಡಿಕೊಳ್ಳಲು ಮುಂದಾಗಿಬೇಕು ಎಂದು ಕರೆ ನೀಡಿದರು. ಕ್ಯಾಸಂಬಳ್ಳ ಗ್ರಾಮದ ಪ್ರಗತಿ ಗ್ರಾಮೀಣ ಬ್ಯಾಂಕ್ ವ್ಯವಸ್ಥಾಪಕ ಟಿ.ಪಿ. ಜಗದೀಶ್, ಸವಿತಾ ಸಮಾಜದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ. ಶ್ರೀನಿವಾಸ್, ಎಸ್. ಪ್ರಸಾದ್, ಎಂ. ನಾರಾಯಣಸ್ವಾಮಿ, ರವಿ, ಮುರಳಿ, ರಾಮಕೃಷ್ಣಪ್ಪ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.