ಕೋಲಾರ

ಗಾಂಧಿ ವಿಗ್ರಹಕ್ಕೆ ಒತ್ತಾಯ

Published On :

ಮುಳಬಾಗಲು: ಪಟ್ಟಣದಲ್ಲಿ ಗಾಂಧಿ ವಿಗ್ರಹವನ್ನು ಪ್ರತಿಷ್ಠಾಪಿಸಬೇಕು ಹಾಗೂ ಹಾಳು ಕೊಂಪೆಯಂತಾಗಿರುವ ಚಾಚಾ ನೆಹರೂ ಪಾರ್ಕಿಗೆ ಕಾಯಕಲ್ಪ ನೀಡಬೇಕು ಎಂದು ಕೋಲಾರ ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರ ಎಂ.ವಿ.ಶ್ರೀನಿವಾಸಗೌಡ ಒತ್ತಾಯಿಸಿದ್ದಾರೆ.
ಇಲ್ಲಿನ ಪ್ರವಾಸಿ ಮಂದಿರದಲ್ಲಿ ಬುಧವಾರ ಮಾತನಾಡಿದ ಅವರು, ಪಟ್ಟಣದಲ್ಲಿ ಮಹಾತ್ಮಗಾಂಧಿ ವಿಗ್ರಹವಿಲ್ಲದಿರುವುದು ಶೋಚನೀಯ ಎಂದರು. 1966ರಲ್ಲಿ ಹಿರಿಯ ಮುಖಂಡರಾದ ಎಂ.ವಿ. ಕೃಷ್ಣಪ್ಪ, ಹೊಗಳಗೆರೆ ನಾರಾಯಣಗೌಡ, ವೀರೇಂದ್ರಪಾಟೇಲ್, ರಾಮಕೃಷ್ಣಹೆಗ್ಗಡೆ ಮುಂತಾದ ದಿಗ್ಗಜರು ಮುಳಬಾಗಲು ಪಟ್ಟಣದಲ್ಲಿ ಪ್ರಾರಂಭಿಸಿದ ಚಾಚಾ ನೆಹರೂ ಪಾರ್ಕ್ ಇಂದು ಹಾಳು ಕೊಂಪೆಯಾಗಿದೆ ಇದಕ್ಕೆ ಪುನಶ್ಚೇತನ ನೀಡಲು ಒತ್ತಾಯಿಸಿದರು. ಎರಡು ಬೇಡಿಕೆಗಳನ್ನು ಜಿಲ್ಲಾ ಮತ್ತು ತಾಲ್ಲೂಕು ಆಡಳಿತ ಜಾರಿಗೆ ತರದಿದ್ದಲ್ಲಿ ಮುಂದಿನ ವಾರದಲ್ಲಿ ತಾಲೂಕು ಕಚೇರಿ  ಎದುರು ಧರಣಿ ನಡೆಸುವುದಾಗಿ ಎಚ್ಚರಿಸಿದರು.



ಪ್ರಗತಿ ಪರಿಶೀಲನಾ ಸಭೆ
ಚಿಕ್ಕಬಳ್ಳಾಪುರ: ನೂತನ ಜಿಲ್ಲಾಡಳಿತ ಭವನದಲ್ಲಿನ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಫೆ.28 ರ ಬೆಳಗ್ಗೆ 11 ಗಂಟೆಗೆ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ನಾಗಾಂಬಿಕಾದೇವಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.