ಕೋಲಾರ

ನಾಳೆ ಉದ್ದಿಮೆದಾರರ ಸಮಾವೇಶ

Published On :

ಗೌರಿಬಿದನೂರು: ಪಟ್ಟಣದ ಡಾ.ಎಚ್.ಎನ್. ಕಲಾಭವನದಲ್ಲಿ ಫೆ.28 ರಂದು ಬೆಳಗ್ಗೆ 10 ಗಂಟೆಗೆ ಚಿಕ್ಕಬಳ್ಳಾಪುರ ಜಿಲ್ಲಾ ಉದ್ದಿಮೆದಾರರ ಸಮಾವೇಶ-2014 ಕಾರ್ಯಕ್ರಮ ಆಯೋಜಿಸಲಾಗಿದೆ. ಕೈಗಾರಿಕಾ ಹಾಗೂ ವಾಣಿಜ್ಯ ಇಲಾಖೆ, ಕರ್ನಾಟಕ ಕೈಗಾರಿಕೆ ಹಾಗೂ ವಾಣಿಜ್ಯ ಒಕ್ಕೂಟದ ಸಹಯೋಗದೊಂದಿಗೆ ನಡೆಯುತ್ತಿರುವ ಕಾರ್ಯಕ್ರಮದ ಉದ್ಘಾಟನೆಯನ್ನು ಕೇಂದ್ರ ಸಚಿವ ಡಾ.ಎಂ.ವೀರಪ್ಪ ಮೊಯ್ಲಿ ನೆರವೇರಿಸಲಿದ್ದು ಅಧ್ಯಕ್ಷತೆಯನ್ನು ವಿಧಾನಸಭೆ ಉಪಾಧ್ಯಕ್ಷ ಎನ್.ಎಚ್.ಶಿವಶಂಕರರೆಡ್ಡಿ ವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ರೋಷನ್‌ಬೇಗ್, ಸಚಿವರಾದ ದಿನೇಶ್ ಗುಂಡೂರಾವ್, ಆಂಧ್ರ ಪ್ರದೇಶದ ಕಂದಾಯ ಸಚಿವ ಎನ್.ರಘುವೀರರೆಡ್ಡಿ, ಶಾಸಕರಾದ ಡಾ.ಕೆ.ಸುಧಾಕರ್, ಎಸ್.ಎನ್.ಸುಬ್ಬಾರೆಡ್ಡಿ, ಎಂ.ರಾಜಣ್ಣ, ಎಂ.ಕೃಷ್ಣಾರೆಡ್ಡಿ, ವೈ.ಎ.ನಾರಾಯಣಸ್ವಾಮಿ, ನಸೀರ್ ಅಹಮದ್, ಡಿ.ಎಸ್.ವೀರಯ್ಯ, ಮುಮ್ತಾಜ್ ಅಲಿಖಾನ್, ಡಾ.ಎ.ಹೆಚ್.ಶಿವಯೋಗಿಸ್ವಾವು, ಜಿಪಂ ಅಧ್ಯಕ್ಷ ಎಸ್.ಎನ್.ಚಿನ್ನಪ್ಪ,  ಜಿಲ್ಲಾಧಿಕಾರಿ ಡಾ.ಆರ್.ವಿಶಾಲ್ ಮತ್ತಿತರರು ಭಾಗವಹಿಸಲಿದ್ದಾರೆ.
ಡಿಸಿಸಿ ಬ್ಯಾಂಕ್ ಅಧ್ಯಕ್ಷ ಗಾದಿ ತಡೆಯಾಜ್ಞೆ ತೆರವು
ಕೋಲಾರ: ಅವಿಭಜಿತ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ-ಉಪಾಧ್ಯಕ್ಷ ಗಾದಿ ಮತ ಎಣಿಕೆಗೆ ಹೈಕೋರ್ಟ್ ಏಕಸದಸ್ಯ ಪೀಠ ನೀಡಿದ್ದ ತಡೆಯಾಜ್ಞೆಯನ್ನು ದ್ವಿ ಸದಸ್ಯ ಪೀಠ ತೆರವುಗೊಳಿಸಿದ್ದು, ನಾಮ ನಿರ್ದೇಶನ ಸದಸ್ಯರೂ ಸೇರಿದಂತೆ ಎಲ್ಲಾ ಮತಗಳನ್ನು ಪರಿಗಣಿಸುವಂತೆ ಆದೇಶ ನೀಡಿದೆ. ಅಧ್ಯಕ್ಷ ಚುನಾವಣೆಯಲ್ಲಿ ಸರ್ಕಾರದ ನಾಮಿನಿ, ಅಫೆಕ್ಸ್ ಬ್ಯಾಂಕ್, ಸಹಕಾರ ಸಂಘಗಳ ಜಂಟಿ ನಿರ್ದೇಶಕರ ಈ ಮೂವರ ಮತಗಳನ್ನು ಪರಿಗಣಿಸಬಾರದು ಎಂದು ನಿರ್ದೇಶಕ ನಾಗನಾಳ ಸೋಮಣ್ಣ ನ್ಯಾಯಾಲಯಕ್ಕೆ ಮೊರೆ ಹೋಗಿದ್ದರು. ಏಕಸದಸ್ಯ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿ, ಚುನಾಯಿತ 15 ಸದಸ್ಯರ ಮತಗಳು ಪ್ರತ್ಯೇಕ ಹಾಗೂ ಸರ್ಕಾರಿ ನಾಮಿನಿ, ಅಫೆಕ್ಸ್‌ಬ್ಯಾಂಕ್, ಜಂಟಿ ನಿರ್ದೇಶಕರ ಮೂರು ಮತಗಳನ್ನು ಪ್ರತ್ಯೇಕ ಮತಪೆಟ್ಟಿಗೆಯಲ್ಲಿ ಹಾಕಿ ಮುಂದಿನ ಆದೇಶದವರೆಗೂ ಎಣಿಕೆ ನಡೆಸದಂತೆ ತಡೆಯಾಜ್ಞೆ ನೀಡಿತ್ತು.
ಸಿಇಒ ದಿಢೀರ್ ಭೇಟಿ
ಕೋಲಾರ: ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ಜಿಪಂ ಇಂಜನಿಯರಿಂಗ್ ವಿಭಾಗಕ್ಕೆ ಬುಧವಾರ ಜಿಪಂ ಸಿಇಒ ವಿನೋದ್‌ಪ್ರಿಯ ದಿಢೀರ್ ಭೇಟಿ ನೀಡಿ ಕೆಲವು ಪ್ರಮುಖ ಕಡತಗಳನ್ನು ಪರಿಶೀಲಿಸಿದರು. ಕಂಪ್ಯೂಟರ್ ವಿಭಾಗದಲ್ಲಿ ಹೆಚ್ಚುವರಿ ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆಂಬ ಮಾಹಿತಿ ಮೇರೆಗೆ ಪರಿಶೀಲನೆ ನಡೆಸಿದ ಅವರು, ಆ ಸಮಯಕ್ಕೆ ಹೆಚ್ಚುವರಿ ಸಿಬ್ಬಂದಿ ಕಾಣಿಸದಿದ್ದರಿಂದ ಬರಿಗೈಯಲ್ಲಿ ವಾಪಸ್ ಆದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.