ಜೆಡಿಎಸ್ ತೊರೆದು ವರ್ತೂರ್ ಬಣ ಸೇರ್ಪಡೆ
ಕೋಲಾರ: ತಾಲೂಕಿನ ಮೈಲಾಂಡಹಳ್ಳಿ ಗ್ರಾಮದ ಕೆಲ ಮುಖಂಡರು ಜೆಡಿಎಸ್ ತೊರೆದು ಶಾಸಕ ವರ್ತೂರು ಪ್ರಕಾಶ್ ಬಣಕ್ಕೆ ಸೇರ್ಪಡೆಯಾದರು. ಗ್ರಾಪಂ ಸದಸ್ಯ ಮುನಿಯಪ್ಪ, ಆನಂದ್, ದೇವರಜ್ ಮಜತ್ತಿತರರು ಜೆಡಿಎಸ್ ತೊರೆದು ವರ್ತೂರು ಬಣಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷ ವಕ್ಕಲೇರಿ ರಾಜಪ್ಪ, ಉಪಾಧ್ಯಕ್ಷೆ ಸಲ್ಮಾ ಮಸ್ತಾನ್, ಸದಸ್ಯರಾದ ಹರ್ಷವರ್ದನ್, ನಾರಾಯಣಸ್ವಾಮಿ, ಗುತ್ತಿಗೆದಾರ ಮುರಳಿ ಇದ್ದರು.
ವಿಜ್ಞಾನ ವಸ್ತು ಪ್ರದರ್ಶನ
ಗುಡಿಬಂಡೆ: ಪಟ್ಟಣದ ಮದರ್ ಥೆರೆಸಾ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ವಿಜ್ಞಾನ ಮತ್ತು ಕಲಾ ಪ್ರದರ್ಶನವನ್ನು ಸೋಮವಾರ ಏರ್ಪಡಿಸಲಾಗಿತ್ತು. ಗ್ರಾಮೀಣ ಬ್ಯಾಂಕ್ ವ್ಯವಸ್ಥಾಪಕ ವೆಂಕಟಪ್ಪ ಕಾರ್ಯಕ್ರಮ ಉದ್ಘಾಟಿಸಿದರು. ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಕಾರ್ಯದರ್ಶಿ ಡಿ. ಶ್ಯಾಮ್ಸನ್, ವಿಜ್ಞಾನದ ಹಲವು ವಿಷಯಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಇದಾಗಿದ್ದು, ಮಾದರಿಗಳನ್ನು ಪ್ರದರ್ಶಿಸುವ ಮೂಲಕ ವಿದ್ಯಾರ್ಥಿಗಳು ತಮ್ಮ ಪ್ರತಿಭೆ ಮೆರೆದಿದ್ದಾರೆ ಎದರು. ಕಾರ್ಯಕ್ರಮದಲ್ಲಿ ಶಾಲಾ ಸಿಬ್ಬಂದಿ, ಪೋಷಕರು ಇದ್ದರು.
ಮೃತಪಟ್ಟ ನೌಕರರಿಗೆ ಶ್ರ್ರದ್ಧಾಂಜಲಿ
ಕೋಲಾರ: ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ನೌಕರರ ಹಾಗೂ ಶಿಕ್ಷಕರ ಸಂಘದ ನಾಲ್ವರು ಪ್ರತಿನಿಧಿಗಳಿಗೆ ರಾಜ್ಯ ಹಾಗೂ ಜಿಲ್ಲಾ ಸರ್ಕಾರಿ ನೌಕರರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಗಳು ಸಂತಾಪ ಸೂಚಿಸಿದೆ. ಮಂಗಳವಾರ ರಾತ್ರಿ ಕೋಲಾರ-ಬಂಗಾರಪೇಟೆ ರಸ್ತೆಯಲ್ಲಿ ಕಾರು ಅಪಘಾತದಲ್ಲಿ ಸಾವನ್ನಪ್ಪಿದ ಬಂಗಾರಪೇಟೆ ನೌಕರರ ಸಂಘದ ಅಧ್ಯಕ್ಷ ಚಂದ್ರಶೇಖರಗೌಡ, ಉಪಾಧ್ಯಕ್ಷ ಸಿದ್ದಪ್ಪ, ಶಿಕ್ಷಕರ ಸಂಘದ ಅಧ್ಯಕ್ಷ ಅಪ್ಪಾಜಿಗೌಡ, ಖಜಾಂಚಿ ಮೋಹನ್ಕುಮಾರ್ರ ಮೃತದೇಹಗಳಿಗೆ ಅಂತಿಮ ನಮನ ಸಲ್ಲಿಸಿದ ಸಂಘದ ಪದಾಧಿಕಾರಿಗಳು ಶ್ರದ್ಧಾಂಜಲಿ ಅರ್ಪಿಸಿದರು. ನೌಕರರ ಸಂಘದ ರಾಜ್ಯಾಧ್ಯಕ್ಷ ಬೈರಪ್ಪ, ಉಪಾಧ್ಯಕ್ಷ ಎಲ್.ಎ. ಮಂಜುನಾಥ್, ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಬಸವರಾಜ್ ಗುರಿಕಾರ್, ಪ್ರಧಾನ ಕಾರ್ಯದರ್ಶಿ ನಾರಾಯಣಸ್ವಾಮಿ ಮತ್ತಿತರರು ಮೃತದೇಹಗಳ ಅಂತಿಮ ದರ್ಶನ ಪಡೆದವರಲ್ಲಿ ಪ್ರಮುಖರು. ಸಂಘಟನಾ ಚತುರ, ಹೋರಾಟಗಾರರಾಗಿದ್ದು, ಶಿಕ್ಷಕರು ಹಾಗೂ ನೌಕರರ ಹಿತ ರಕ್ಷಿಸುವಲ್ಲಿ ಪ್ರಾಮಾಣಿಕವಾಗಿ ಸ್ಪಂದಿಸುತ್ತಿದ್ದ ಸ್ನೇಹಿತರ ಸಾವು ಸಂಘಕ್ಕೆ ತುಂಬಲಾರದ ನಷ್ಟ ಎಂದು ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ಎನ್.ಮಂಜುನಾಥ್ ದುಃಖಿಸಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿ ಅಶೋಕ್, ಗೌರವಾಧ್ಯಕ್ಷ ರವಿಚಂದ್ರ, ಖಜಾಂಚಿ ರಂಗಯ್ಯ, ಉಪಾಧ್ಯಕ್ಷ ಮುನಿರಾಜು, ಆರೋಗ್ಯ ನೌಕರರ ಸಂಘದ ಅಧ್ಯಕ್ಷೆ ವಿಜಯಮ್ಮ, ಪದಾಧಿಕಾರಿಗಳಾದ ರಾಜ್ಯ ಪರಿಷತ್ ಸದಸ್ಯ ನಾಗರಾಜ್, ಮುರುಳಿ ಮೋಹನ್, ಚೌಡಪ್ಪ, ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ವೆಂಕಟಶಿವಪ್ಪ ಸೇರಿದಂತೆ ಸಂಘಗಳ ಪದಾಧಿಕಾರಿಗಳು, ಕಾರ್ಯಕಾರಿ ಸದಸ್ಯರು ಅಂತಿಮ ದರ್ಶನ ಪಡೆದು ಮೃತರ ಕುಟಂಬಕ್ಕೆ ಸಾಂತ್ವನ ತಿಳಿಸಿದರು.
ಮೃತಪಟ್ಟ ಶಿಕ್ಷಕರಿಗೆ ಸಂತಾಪ
ಚಿಂತಾಮಣಿ: ರಸ್ತೆ ಅಪಘಾತದಲ್ಲಿ ಮೃತಪಟ್ಟ ಬಂಗಾರಪೇಟೆ ಶಿಕ್ಷಕರಿಗೆ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷ ಆರ್. ವೆಂಕಟರಮಣಾರೆಡ್ಡಿ ಹಾಗೂ ತಾಲೂಕು ಅಧ್ಯಕ್ಷ ಬಿ.ಎಚ್. ಮಂಜುನಾಥ್ ಸಂತಾಪ ಸೂಚಿಸಿದ್ದಾರೆ. ಬಂಗಾರಪೇಟೆ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಚಂದ್ರಶೇಖರಗೌಡ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅಪ್ಪಾಜಿಗೌಡ, ಉಪಾಧ್ಯಕ್ಷ ಸಿದ್ದಪ್ಪ, ಖಜಾಂಚಿ ಮೋಹನ್ ಕುಮಾರ್ ಅನಿಗಾನಹಳ್ಳಿ ಗೇಟ್ ಬಳಿ ರಸ್ತೆ ಅಪಘಾತದಲ್ಲಿ ಮೃತ ಪಟ್ಟಿರುವುದರಿಂದ ಶಿಕ್ಷಣ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆಯೆಂದು ಅವರು ತಿಳಿಸಿದ್ದಾರೆ. ತಾಲ್ಲೂಕು ೌಕರರ ಸಂಘದ ಅಧ್ಯಕ್ಷ ಬಿ. ಜನಾರ್ದನರೆಡ್ಡಿ, ಓಂಕಾರಪ್ಪ, ತಾಲ್ಲೂಕು ಹಿಂದಿ ಭಾಷಾ ಶಿಕ್ಷಕರ ಸಂಘದ ಅಧ್ಯಕ್ಷ ರಾಮಚಂದ್ರಸಿಂಗ್ ಮತ್ತಿತರರು ಸಂತಾಪ ಸೂಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

